ಶೈಕ್ಷಣಿಕ ಪ್ರವಾಸದ ವೇಳೆ ಬಸ್ ಚಲಾಯಿಸಿದ ಶಿಕ್ಷಕ: ವಿಡಿಯೋ ವೈರಲ್ ಆದ ಬೆನ್ನಲ್ಲೇ ಅಮಾನತು
ಶಾಲಾ ಶಿಕ್ಷಕರೊಬ್ಬರು ಶೈಕ್ಷಣಿಕ ಪ್ರವಾಸದ ವೇಳೆ ಮೋಜಿಗಾಗಿ ಬಸ್ ಚಾಲನೆ ಮಾಡಿದ್ದು ಇದೀಗ ಅವರ ವೃತ್ತಿಗೇ ಕಂಟಕವಾಗಿ ಪರಿಣಮಿಸಿದೆ. ಚಾಮರಾಜನಗರ ಜಿಲ್ಲೆಯ ಶಾಲಾ ಶಿಕ್ಷಕ ಪ್ರಮಾದ ಎಸಗಿದ್ದು, ಸದ್ಯ ಅವರನ್ನು ಅಮಾನತು ಮಾಡಲಾಗಿದೆ. ಅವರು ಬಸ್ ಚಾಲನೆ ಮಾಡುತ್ತಿರುವ ವಿಡಿಯೋ ವೈರಲ್ ಆಗಿದೆ.
ಚಾಮರಾಜನಗರ, ಫೆಬ್ರವರಿ 4: ಶೈಕ್ಷಣಿಕ ಪ್ರವಾಸದ ವೇಳೆ ಬಸ್ ಚಲಾಯಿಸಿದ ಗುಂಬಳ್ಳಿ ಸರ್ಕಾರಿ ಪ್ರೌಢಶಾಲಾ ಶಿಕ್ಷಕ ವೀರಭದ್ರಸ್ವಾಮಿ ಅವರನ್ನು ಅಮಾನತು ಮಾಡಲಾಗಿದೆ. ಚಾಲಕನ ಬದಲು ಶಿಕ್ಷಕ ವೀರಭದ್ರಸ್ವಾಮಿ ತಾವೇ ಬಸ್ ಚಲಾಯಿಸಿದ್ದರು. ಶಾಲಾ ಶಿಕ್ಷಕ ಬಸ್ ಚಲಾಯಿಸುವ ವಿಡಿಯೋ ವೈರಲ್ ಆಗಿತ್ತು. ಸಾರ್ವಜನಿಕರ ದೂರಿನ ಮೇರೆಗೆ ಸೇವಾ ನಡತೆ ಉಲ್ಲಂಘನೆ ಆರೋಪದಡಿ ವೀರಭದ್ರಸ್ವಾಮಿ ಅವರನ್ನು ಅಮಾನತುಗೊಳಿಸಿ ಡಿಡಿಪಿಐ ರಾಮಚಂದ್ರರಾಜೇ ಅರಸ್ ಆದೇಶ ಹೊರಡಿಸಿದ್ದಾರೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published on: Feb 04, 2025 01:56 PM
Latest Videos
