AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಕಾಶದಲ್ಲಿ ಹಾರಾಡಿದ ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳು: ವಿಮಾನದಲ್ಲಿ ಪ್ರವಾಸ

ಆಕಾಶದಲ್ಲಿ ಹಾರಾಡಿದ ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳು: ವಿಮಾನದಲ್ಲಿ ಪ್ರವಾಸ

ಬಸವರಾಜ ಮುದನೂರ್, ಚಿತ್ರದುರ್ಗ
| Edited By: ವಿವೇಕ ಬಿರಾದಾರ|

Updated on:Dec 06, 2024 | 3:05 PM

Share

ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ತಾಲೂಕಿನ ಮಾರಬಗಟ್ಟ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮಕ್ಕಳು ವಿಮಾನದಲ್ಲಿ ಪ್ರವಾಸಕ್ಕೆ ತೆರಳಿದ್ದಾರೆ. ಸರ್ಕಾರಿ ಶಾಲೆಯ 19 ವಿದ್ಯಾರ್ಥಿಗಳು, ಮೂವರು ಶಿಕ್ಷಕರು ಶಿವಮೊಗ್ಗದದಿಂದ‌ ವಿಮಾನದಲ್ಲಿ ಬೆಂಗಳೂರಿಗೆ ಬಂದಿದ್ದಾರೆ.

ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ತಾಲೂಕಿನ ಮಾರಬಗಟ್ಟ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮಕ್ಕಳು ವಿಮಾನದಲ್ಲಿ ಪ್ರವಾಸಕ್ಕೆ ತೆರಳಿದ್ದಾರೆ. ಸರ್ಕಾರಿ ಶಾಲೆಯ 19 ವಿದ್ಯಾರ್ಥಿಗಳು, ಮೂವರು ಶಿಕ್ಷಕರು ಶಿವಮೊಗ್ಗದದಿಂದ‌ ವಿಮಾನದಲ್ಲಿ ಬೆಂಗಳೂರಿಗೆ ಬಂದಿದ್ದಾರೆ. ಮಕ್ಕಳು ಮತ್ತು ಶಿಕ್ಷಕರು ಎರಡು ದಿನ ಬೆಂಗಳೂರಿನ ವಿಧಾನಸೌಧ, ಹೈಕೋರ್ಟ್, ವಿಶ್ವೇಶ್ವರಯಂ ಮ್ಯೂಸಿಯಂ, ನೆಹರು ತಾರಾಲಯ, ಬನ್ನೇರುಘಟ್ಟ ಉದ್ಯಾನವನಕ್ಕೆ ಭೇಟಿ ನೀಡಿದ್ದಾರೆ. ದಾನಿಗಳಿಂದ ನೆರವು ಪಡೆದು ವಿದ್ಯಾರ್ಥಿಗಳ ಅಧ್ಯಯನ ಪ್ರವಾಸ ಕೈಗೊಳ್ಳಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published on: Dec 06, 2024 02:58 PM
Follow Us
Basavaraj Mudnur
Basavaraj Mudnur

ಆದ್ಯ ವಚನಕಾರ ದೇವರ ದಾಸಿಮಯ್ಯನ 'ಮುದನೂರು' ನಮ್ಮ ಮೂಲ ಊರು. ಸಂತಗುಣದ ತಾತ ಕಿರಿ ವಯಸ್ಸಿನಲ್ಲೇ ಊರು-ಮನೆ ತೊರೆದು ಬರಿಗೈಲಿ ಬಂದು ಯಾದಗಿರಿ ಜಿಲ್ಲೆಯ ಶಹಾಪುರದಲ್ಲಿ ಸ್ವಾಭಿಮಾನದ ಬದುಕು ಕಟ್ಟಿಕೊಂಡರು. ಅಪ್ಪ ಶಿಕ್ಷಕರಾಗಿ ಬದುಕು ರೂಪಿಸಿಕೊಂಡರು. ನನಗೂ ಜೀವನ ಪಾಠ ಕಲಿಸಿದ 'ಗುರು' & 'ಗಾಡ್ ಫಾದರ್' ನನ್ನಪ್ಪ. ಓದು ಮತ್ತು ಬರವಣಿಗೆ ನನ್ನ ಹವ್ಯಾಸ. ಕೋಟೆ-ಕೊತ್ತಲು‌, ಕಾಡು-ಮೇಡು‌‌‌ ಸುತ್ತಾಟ, ಚಾರಣವೆಂದರೆ ಪ್ರಾಣಪ್ರೀತಿ. ಹಳೇ ಹಿಂದಿ ಹಾಡು, ಗಝಲ್, ಜನಪದ, ಭಾವಗೀತೆಗಳು ಮತ್ತು ಭಜನೆ ನನಗಿಷ್ಟ. ಕಾಲೇಜು ದಿನಗಳಲ್ಲಿದ್ದ ಕ್ರಿಕೆಟ್ ಹುಚ್ಚು ಕಡಿಮೆ ಆಗಿದೆ. ಕೋಟೆನಾಡು‌ ಚಿತ್ರದುರ್ಗ ಜಿಲ್ಲೆಯ ಟಿವಿ9 ಪ್ರತಿನಿಧಿಯಾಗಿ ಒಂದೂವರೆ ದಶಕದಿಂದ ಕಾರ್ಯ ನಿರ್ವಹಿಸುತ್ತಿದ್ದೇನೆ. 'ಹೆಣ್ಣಾಗಿದ್ದೇ ತಪ್ಪಾ?' ಅಭಿಯಾನದ ಮೂಲಕ ಮೌಢ್ಯದ ವಿರುದ್ಧ ಜಾಗೃತಿ, 'ವಿಷಾಮೃತ' ಅಭಿಯಾನದ ಮೂಲಕ ನೀರಿನ ಕುರಿತು ಸರ್ಕಾರದ ಕಣ್ತೆರೆಸುವ ಕಾರ್ಯ, 'ಕೆರೆ ಉಳಿಸಿ' ಅಭಿಯಾನದ ಮೂಲಕ ಜಲಮೂಲಗಳ ಸಂರಕ್ಷಣೆ, 'ಆಪರೇಷನ್ ಚಿನ್ನ' ಸರಣಿ ವರದಿ ಮೂಲಕ ವಂಚಕರ ಜಾಲ ಬೇಧಿಸುವ ಕರ್ತವ್ಯ, ಬುಡಕಟ್ಟು ಸಮುದಾಯಗಳ ಜೀವನ, ಸಂಸ್ಕೃತಿ, ಆಚರಣೆಗಳ ಅನಾವರಣ, ಬಯಲುಸೀಮೆಯ ರೈತರ ಸಂಕಷ್ಟ, ಭದ್ರಾ ಮೇಲ್ದಂಡೆ ಯೋಜನೆ ಅಗತ್ಯತೆ ಕುರಿತು ವರದಿ, ಭ್ರಷ್ಟರ ಮುಖವಾಡ ಬಯಲು, ಕಾವಿಧಾರಿಗಳ ಕಪಟತನ ತೆರೆದಿಡುವುದು ಸೇರಿ ಅನೇಕ ಜೀವಪರ, ಜನಪರ ವರದಿಗಾರಿಕೆಗೆ ಟಿವಿ9 ವಾಹಿನಿಯಲ್ಲಿ ಅವಕಾಶ ಸಿಕ್ಕಿದ್ದು ಹೆಮ್ಮೆಯ ಸಂಗತಿ.

Read More