ಸರ್ಕಾರಿ ನೌಕರರು ಸರ್ಕಾರದ ಭಾಗ, 7ನೇ ವೇತನಾ ಆಯೋಗದ ಶಿಫಾರಸ್ಸುಗಳನ್ನು ಅವರೊಂದಿಗೆ ಚರ್ಚಿಸುತ್ತೇವೆ: ಬಸವರಾಜ ಬೊಮ್ಮಾಯಿ

|

Updated on: Feb 21, 2023 | 5:54 PM

7ನೇ ವೇತನಾ ಆಯೋಗದ ಬಗ್ಗೆ ಮಾತಾಡಿದ ಮುಖ್ಯಮಂತ್ರಿಗಳು ಸರ್ಕಾರೀ ನೌಕರರನ್ನು ನಾವು ಸರ್ಕಾರದ ಭಾಗವೆಂದು ಪರಿಗಣಿಸುತ್ತೇವೆ, ಅವರೊಂದಿಗೆ ಚರ್ಚಿಸಿ ಆಯೋಗದ ಶಿಫಾರಸ್ಸುಗಳನ್ನು ಪರಾಮರ್ಶಿಸಲಾಗುವುದು ಎಂದರು.

ಹಾಸನ: ಜಿಲ್ಲ್ಲೆಯ ಐತಿಹಾಸಿಕ ಪ್ರವಾಸಿ ತಾಣವಾಗಿರುವ ಬೇಲೂರಲ್ಲಿ (Belur) ಇಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ (JP Nadda) ಹಾಗೂ ಇತರ ನಾಯಕರೊಂದಿಗೆ ಚೆನ್ನಕೇಶವ ದೇವಸ್ಥಾನಕ್ಕೆ ಭೇಟಿ ನೀಡಿದ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಅವರು ಬೇಲೂರು ಮತ್ತು ಹಳೆಬೀಡು ಕ್ಷೇತ್ರಗಳನ್ನು ಅಭಿವೃದ್ಧಿಪಡಿಸಿ ಅವುಗಳನ್ನು ವಿಶ್ವವಿಖ್ಯಾತ ಪ್ರವಾಸಿ ತಾಣಗಳಾಗಿ ಪರಿವರ್ತಿಸಲಾಗುವುದು ಎಂದು ಹೇಳಿದರು. ಇದೇ ಸಂದರ್ಭದಲ್ಲಿ 7ನೇ ವೇತನಾ ಆಯೋಗದ ಬಗ್ಗೆ ಮಾತಾಡಿದ ಮುಖ್ಯಮಂತ್ರಿಗಳು ಸರ್ಕಾರೀ ನೌಕರರನ್ನು ನಾವು ಸರ್ಕಾರದ ಭಾಗವೆಂದು ಪರಿಗಣಿಸುತ್ತೇವೆ, ಅವರೊಂದಿಗೆ ಚರ್ಚಿಸಿ ಆಯೋಗದ ಶಿಫಾರಸ್ಸುಗಳನ್ನು ಪರಾಮರ್ಶಿಸಲಾಗುವುದು ಎಂದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 5:54 pm, Tue, 21 February 23

Follow us on