‘ಆತನ ಬಳಿ ಒಟ್ಟು 12 ಸ್ಟಿಂಗ್ ವಿಡಿಯೋ ಇದೆಯಂತೆ’: ಹೆಚ್.ಡಿ.ಕುಮಾರಸ್ವಾಮಿ ಸ್ಫೋಟಕ ಹೇಳಿಕೆ
ಸ್ಟಿಂಗ್ ಆಪರೇಷನ್ ಪ್ರಕರಣದಲ್ಲಿ ರಾಕೇಶ್ ಶೆಟ್ಟಿಗೆ ಸರ್ಕಾರವೇ ನಿರೀಕ್ಷಣಾ ಜಾಮೀನಿಗೆ ಬೆಂಬಲ ನೀಡುತ್ತಿದೆ ಎಂದು ಆರೋಪಿಸಿದ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ, ಒಟ್ಟು 12 ಸ್ಟಿಂಗ್ ವಿಡಿಯೋಗಳಿವೆ ಎಂದು ತೀವ್ರ ವಾಗ್ದಾಳಿ ನಡೆಸಿದ್ದಾರೆ. ಜವಾಬ್ದಾರಿ ಸ್ಥಾನದಲ್ಲಿರುವ ವ್ಯಕ್ತಿಯೊಬ್ಬರು ಇದರ ಬಗ್ಗೆ ಹೇಳಿದ್ದಾರೆ ಎಂದೂ ಅವರು ಮಾಹಿತಿ ನೀಡಿದ್ದಾರೆ.
ಬೆಂಗಳೂರು, ಅಕ್ಟೋಬರ್ 23: ಸ್ಟಿಂಗ್ ಆಪರೇಷನ್ ವಿಚಾರವಾಗಿ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಮತ್ತೆ ತೀವ್ರ ವಾಗ್ದಾಳಿ ನಡೆಸಿದ್ದಾರೆ. ರಾಕೇಶ್ ಶೆಟ್ಟಿ ಹಿನ್ನಲೆ ಎಲ್ಲರಿಗೂ ಗೊತ್ತಿದ್ದು, ಆ ವ್ಯಕ್ತಿಗೆ ನಿರೀಕ್ಷಣಾ ಜಾಮೀನಿಗೆ ಸರ್ಕಾರವೇ ಬೆಂಬಲ ನೀಡುತ್ತಿದೆ. ಇಂತವರನ್ನು ಹೊರಗೆ ಬಿಟ್ಟರೆ ಇನ್ನು ಎಷ್ಟು ಜನರ ಪರಿಸ್ಥಿತಿ ಏನಾಗಬಹುದು ಎಂದವರು ಪ್ರಶ್ನಿಸಿದ್ದಾರೆ. ಅವರ ಒಟ್ಟು 12 ಸ್ಟಿಂಗ್ ವಿಡಿಯೋ ಇದೆಯಂತೆ. ಜವಾಬ್ದಾರಿ ಸ್ಥಾನದಲ್ಲಿರುವ ವ್ಯಕ್ತಿಯೊಬ್ಬರು ಇದರ ಬಗ್ಗೆ ಹೇಳಿದ್ದಾರೆ ಎಂದೂ ಕುಮಾರಸ್ವಾಮಿ ಮಾಹಿತಿ ನೀಡಿದ್ದಾರೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.
Loading...
Unable to load recommendations.
Follow Us
