ದರ್ಶನ್​ಗೆ ರಾಜಾತಿಥ್ಯ ಸಿಗುತ್ತಿರೋದು ಗೊತ್ತಾದ ಕೂಡಲೇ ಸರ್ಕಾರ ಅಗತ್ಯ ಕ್ರಮ ತೆಗೆದುಕೊಂಡಿದೆ: ಸಿದ್ದರಾಮಯ್ಯ

ಅರುಣ್​ ಕುಮಾರ್​ ಬೆಳ್ಳಿ

Updated on: Aug 30, 2024 | 4:17 PM

ಸಿದ್ದರಾಮಯ್ಯ ಹೇಳುತ್ತಿರೋದು ರಾಜಾತಿಥ್ಯ ಪ್ರಕರಣ ಬೆಳಕಿಗೆ ಬಂದ ನಂತರದ ವಿಷಯ, ಒಂದು ಪಕ್ಷ ಆ ಫೋಟೋ ಹೊರಗೆ ಬೀಳದೆ ಹೋಗಿದ್ದರೆ ರಾಜಾತಿಥ್ಯದ ಪ್ರವರ ಮುಂದವರಿಯುತಿತ್ತು ಮತ್ತು ಕೆಲ ಆಯ್ದ ಕೈದಿಗಳು ಜೈಲಧಿಕಾರಿಗಳ ನೆರವಿನಿಂದ ಐಷಾರಾಮಿ ಬದುಕು ನಡೆಸುವುದು ಮುಂದುವರಿಯುತಿತ್ತು!

ಹುಬ್ಬಳ್ಳಿ: ಜೈಲಿನಲ್ಲಿ ನಟ ದರ್ಶನ್ ಗೆ ರಾಜಾತಿಥ್ಯ ಸಿಗುವಂತಾಗಿದ್ದು ರಾಜ್ಯ ಸರ್ಕಾರದ ವೈಫಲ್ಯ ಎನ್ನುತ್ತಿರುವ ಬಿಜೆಪಿ ನಾಯಕರಿಗೆ ಉತ್ತರ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ವಿಷಯ ಗೊತ್ತಾದ ಕೂಡಲೇ 9 ಜೈಲು ಅಧಿಕಾರಿಗಳನ್ನು ಸಸ್ಪೆಂಡ್ ಮಾಡಲಾಗಿದೆ, ದರ್ಶನ್ ರನ್ನು ಬಳ್ಳಾರಿ ಜೈಲಿಗೆ ಶಿಫ್ಟ್ ಮಾಡಲಾಗಿದೆ ಮತ್ತು ಜೈಲಲ್ಲಿ ಅಗಿರುವ ಲೋಪಕ್ಕೆ ಸಂಬಂಧಿಸಿದಂತೆ ಸಂಬಂಧಪಟ್ಟ ಡಿಜಿಪಿಗೆ ನೋಟೀಸ್ ಕೂಡ ನೀಡಲಾಗಿದೆ ಎಂದು ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  ಸಿಎಂ ಸಿದ್ದರಾಮಯ್ಯ ಹಣಕಾಸು ಆಯೋಗದ ಮುಂದಿಟ್ಟ ಬೇಡಿಕೆಗಳೇನು ಗೊತ್ತಾ?

Loading...
Unable to load recommendations.
Follow Us
ಅರುಣ್​ ಕುಮಾರ್​ ಬೆಳ್ಳಿ

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.