ಮೈಕ್ರೋ ಫೈನಾನ್ಸ್ ಸಂಸ್ಥೆಗಳ ದೌರ್ಜನ್ಯ; ಸುಗ್ರೀವಾಜ್ಞೆ ಕರಡು ತಯಾರಿಸಲು ಇಂದು ಸಭೆ ಕರೆಯಲಾಗಿದೆ: ಜಿ ಪರಮೇಶ್ವರ್
ಮೈಕ್ರೋ ಫೈನಾನ್ಸ್ ಸಂಸ್ಥೆಗಳನ್ನು ನಿಯಂತ್ರಣದಲ್ಲಿಡುವ ಕೆಲಸವನ್ನು ಸರ್ಕಾರ ಖಂಡಿತ ಮಾಡುತ್ತದೆ, ಸುಗ್ರೀವಾಜ್ಞೆ ಹೊರಡಿಸಲು ಮುಂದಿನ ಅಧಿವೇಶನದವರೆಗೆ ಕಾಯಲ್ಲ, ಸಾಲ ವಸೂಲಾತಿಗಾಗಿ ಫೈನಾನ್ಸ್ ಸಂಸ್ಥೆಗಳು ಔಟ್ ಸೋರ್ಸ್ ಮಾಡಿವೆ ಮತ್ತು ಅದರ ಜನ ಸಾಲಗಾರರ ಮೇಲೆ ದೌರ್ಜನ್ಯ ನಡೆಸುತ್ತಿದ್ದಾರೆ, ಇದು ಕೂಡಲೇ ನಿಲ್ಲಬೇಕೆಂದು ಮುಖ್ಯಮಂತ್ರಿಯವರು ಸೂಚನೆ ನೀಡಿದ್ದಾರೆ ಎಂದು ಪರಮೇಶ್ವರ್ ಹೇಳಿದರು.
ಬೆಂಗಳೂರು: ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಗೃಹ ಸಚಿವ ಜಿ ಪರಮೇಶ್ವರ್ ಮೈಕ್ರೋ ಫೈನಾನ್ಸ್ ಸಂಸ್ಥೆಗಳು ತಮ್ಮ ಸಾಲಗಾರರಿಗೆ ನೀಡುವ ಕಿರುಕುಳ ನಿಲ್ಲಿಸಲು ಸರ್ಕಾರ ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ, ಎಲ್ಲ ಜಿಲ್ಲಾಧಿಕಾರಿ ಮತ್ತು ಎಸ್ಪಿಗಳಿಗೆ ಈಗಾಗಲೇ ಸೂಚನೆಗಳನ್ನು ನೀಡಲಾಗಿದೆ ಮತ್ತು ಜಿಲ್ಲಾಧಿಕಾರಿಗಳಿಗೆ ಹೆಚ್ಚಿನ ಅಧಿಕಾರ ನೀಡುವ ಬಗ್ಗೆ ಚಿಂತನೆ ನಡೆದಿದೆ ಎಂದು ಹೇಳಿದರು. ಇದೇ ವಿಷಯಕ್ಕೆ ಸಂಬಂಧಿಸಿದಂತೆ ಸುಗ್ರೀವಾಜ್ಞೆ ಹೊರಡಿಸಲು ಸಹ ಸರ್ಕಾರ ಸಿದ್ಧವಾಗಿದೆ ಮತ್ತು ಅದರ ಕರುಡನ್ನು ತಯಾರು ಮಾಡಲು ಇವತ್ತು ಸಭೆಯೊಂದನ್ನು ಕರೆಯಲಾಗಿದೆ, ಕರಡು ತಯಾರಾದ ಕೂಡಲೇ ಅನುಮೋದನೆಗಾಗಿ ರಾಜ್ಯಪಾಲರಿಗೆ ಕಳಿಸಲಾಗುವುದು ಎಂದು ಪರಮೇಶ್ವರ್ ಹೇಳಿದರು.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಇದನ್ನೂ ಓದಿ: ತ್ಯಾಗದ ಮನೋಭಾವ ಸಮಾಜದಲ್ಲಿ ಕಡಿಮೆಯಾಗಿದೆ, ಕೇವಲ ಕಾಂಗ್ರೆಸ್ಸಿಗರಲ್ಲಿ ಮಾತ್ರ ಅಲ್ಲ: ಪರಮೇಶ್ವರ್
Published on: Jan 29, 2025 01:31 PM
Latest Videos