ವಿಧಾನ ಸಭೆ ಆವರಣದಲ್ಲಿ ಸರ್ಕಾರವು ಬಸವೇಶ್ವರ ಮತ್ತು ಕೆಂಪೇಗೌಡರ ಪ್ರತಿಮೆ ಸ್ಥಾಪಿಸುತ್ತಿರುವುದು ಅಭಿನಂದನೀಯ: ಸುತ್ತೂರು ಶ್ರೀಗಳು
ಆದಷ್ಟು ಬೇಗ ಪುತ್ಥಳಿಗಳ ನಿರ್ಮಾಣ ಕಾರ್ಯ ಪೂರ್ಣಗೊಂಡು ಲೋಕಾರ್ಪಣೆ ಮಾಡುವ ಸಂದರ್ಭ ಬರಲಿ ಅಂತ ಹಾರೈಸುವುದಾಗಿ ಶ್ರೀಗಳು ಹೇಳಿದರು.
ಬೆಂಗಳೂರು: ವಿಧಾನ ಸಭೆ ಅವರಣದಲ್ಲಿ ಜಗಜ್ಯೋತಿ ಬಸವೇಶ್ವರ (Jagajyoti Basaveshwara) ಮತ್ತು ನಾಡಪ್ರಭು ಕೆಂಪೇಗೌಡರ (Nadaprabhu Kempegowda) ಪ್ರತಿಮೆಗಳನ್ನು ಪ್ರತಿಷ್ಠಾಪಿಸುವ ನಿಟ್ಟಿನಲ್ಲಿ ಶುಕ್ರವಾರ ಭೂಮಿ ಪೂಜೆ ನೆರವೇರಿಸಲಾಯಿತು. ಈ ಸಂದರ್ಭದಲ್ಲಿ ಮಾತಾಡಿದ ಸುತ್ತೂರು ಶ್ರೀ ಶಿವರಾತ್ರಿ ಸ್ವಾಮೀಜಿ (Suttur Sri Shivarathri Swamiji) ಅವರು ಇದು ಸರ್ಕಾರದ ಉತ್ತಮ ನಡೆಯಾಗಿದೆ, ಕಂದಾಯ ಸಚಿವ ಆರ್ ಅಶೋಕ್ ಅವರು ವೈಯಕ್ತಿಕ ಆಸಕ್ತಿ ತೋರಿಸಿ ಈ ಕೆಲಸಕ್ಕೆ ಮುಂದಾಗಿದ್ದಾರೆ ಎಂದು ಹೇಳಿದರು. ಆದಷ್ಟು ಬೇಗ ಪುತ್ಥಳಿಗಳ ನಿರ್ಮಾಣ ಕಾರ್ಯ ಪೂರ್ಣಗೊಂಡು ಲೋಕಾರ್ಪಣೆ ಮಾಡುವ ಸಂದರ್ಭ ಬರಲಿ ಅಂತ ಹಾರೈಸುವುದಾಗಿ ಅವರು ಹೇಳಿದರು. ಕಾರ್ಯಕ್ರಮದಲ್ಲಿ ಸಭಾಪತಿ ವಿಶ್ವೇಶ್ವರ ಹೆಗಡೆ ಕಾಗೇರಿ, ಸಚಿವರಾದ ಅಶೋಕ್, ಜೆಸಿ ಮಾಧುಸ್ವಾಮಿ, ಸುನೀಲ್ ಕುಮಾರ್, ಪೇಜಾವರ ಸ್ವಾಮೀಜಿ, ನಿರ್ಮಲಾನಂದನಾಥ ಸ್ವಾಮೀಜಿ, ಸಿದ್ಧಗಂಗಾ ಸ್ವಾಮೀಜಿ ಹಾಗೂ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಭಾಗಿಯಾಗಿದ್ದರು.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ