ಊಹಾಪೋಹಗಳ ಆಧಾರದಲ್ಲಿ ರಾಜ್ಯಪಾಲರು ಸಿಎಂ ವಿರುದ್ಧ ಪ್ರಾಸಿಕ್ಯೂಷನ್ ಗೆ ಸ್ಯಾಂಕ್ಷನ್ ನೀಡಿದ್ದಾರೆ: ಹರಿಪ್ರಸಾದ್
ಬಿಎಸ್ ಯಡಿಯೂರಪ್ಪ ನೈತಿಕ ಹೊಣೆ ಹೊತ್ತು ರಾಜೀನಾಮೆ ಸಲ್ಲಿಸಿರಲಿಲ್ಲ, 20 ಕೋಟಿ ರೂ. ಚೆಕ್ ಸ್ವೀಕರಿಸಿದ ಅರೋಪ ಮೇಲ್ನೋಟಕ್ಕೆ ಸಾಬೀತಾಗಿತ್ತು. ಅವರ ವಿರುದ್ಧ ಪೋಕ್ಸೋ ಅಡಿ ಪ್ರಕರಣ ದಾಖಲಾಗಿದೆ, ವಿಚಾರಣೆ ನಡೆಸಲು ಅವರೇನು ಟಾಮ್, ಡಿಕ್ ಮತ್ತು ಹ್ಯಾರಿ ಅಲ್ಲವೆಂದು ಹೈಕೋರ್ಟ್ ಜಡ್ಜ್ ಹೆಳುತ್ತಾರೆ ಹಾಗಾದರೆ ಸಿದ್ದರಾಮಯ್ಯ ಟಾಮ್ ಡಿಕ್ ಮತ್ತು ಹ್ಯಾರಿಯೇ ಎಂದು ಹರಿಪ್ರಸಾದ್ ಖಾರವಾಗಿ ಪ್ರಶ್ನಿಸಿದರು.
ದೆಹಲಿ: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲ ಅವರು ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವುದು ರಾಜ್ಯ ಸರ್ಕಾರದಲ್ಲಿ ತಲ್ಲಣ ಸೃಷ್ಟಿಸಿದೆ. ದೆಹಲಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಹಿರಿಯ ಕಾಂಗ್ರೆಸ್ ನಾಯಕ ಬಿಕೆ ಹರಿಪ್ರಸಾದ್ ಅವರು ಕೇವಲ ಊಹಾಪೋಹಗಳನ್ನು ಆಧರಿಸಿ ರಾಜ್ಯಪಾಲ ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿದ್ದಾರೆ, ಅವರ ಆದೇಶದ ವಿರುದ್ಧ ಕಾನೂನಾತ್ಮಕ ಹೋರಾಟ ನಡೆಸುತ್ತೇವೆ ಎಂದು ಹೇಳಿದರು. ಸೈಟ್ ಹಂಚಿಕೆ ವಿಷಯದಲ್ಲಿ ಸಿದ್ದರಾಮಯ್ಯ ನೇರವಾಗಿ ಭಾಗಿಯಲ್ಲ, ಬಿಜೆಪಿಯ ಅಧಿಕಾರಾವಧಿಯಲ್ಲಿ ಮುಡಾ ಸಿದ್ದರಾಮ್ಯಯ್ಯನವರ ಕುಟುಂಬದ ಜಮೀನು ಸ್ವಾಧೀನ ಮಾಡಿಕೊಂಡಿದ್ದಕ್ಕೆ ಪರ್ಯಾಯವಾಗಿ ಸೈಟುಗಳನ್ನು ನೀಡಿದೆ. ಪ್ರಕರಣ ತನಿಖೆಗೆ ಆಯೋಗವನ್ನು ರಚಿಸಲಾಗಿದೆ, ಅದು ವರದಿ ನೀಡಿದ ಬಳಿಕವೇ ಚರ್ಚೆ ಮಾಡುವುದು ಸಾಧ್ಯ, ಇಂಥ ವಿಷಯಗಳನ್ನು ಟಿವಿಯಲ್ಲಿ ಚರ್ಚೆ ಮಾಡಲಾಗದು ಎಂದು ಹರಿಪ್ರಸಾದ್ ಹೇಳಿದರು. ನೈತಿಕ ಹೊಣೆ ಹೊತ್ತು ಸಿಎಂ ರಾಜೀನಾಮೆ ನೀಡುವ ಪ್ರಶ್ನೆ ಉದ್ಭವಿಸಲ್ಲ, ಮಾತೆತ್ತಿದರೆ ರಾಜೀನಾಮೆ ಕೇಳುವುದು ಬಿಜೆಪಿ ನಾಯಕರಿಗೆ ಫ್ಯಾಶನ್ ಆಗಿಬಿಟ್ಟಿದೆ ಎಂದು ಹರಿಪ್ರಸಾದ್ ಹೇಳಿದರು.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಇದನ್ನೂ ಓದಿ: ಇಂದು ಸಂಜೆ ಕರೆಯಲಾಗಿದ್ದ ವಿಶೇಷ ಸಚಿವ ಸಂಪುಟ ಸಭೆ ದಿಢೀರ್ ರದ್ದು

ಇದ್ದಕ್ಕಿದ್ದಂತೆ ಚಲಿಸಿ ಒಬ್ಬ ವ್ಯಕ್ತಿಯ ಜೀವ ಬಲಿ ಪಡೆದ ಟಾಟಾ ಹ್ಯಾರಿಯರ್!

ಸಾಲು ಸಾಲು ರಜೆ: ಊರಿಗೆ ತೆರಳುತ್ತಿರುವ ಜನ, ಬೆಂಗಳೂರಿನಲ್ಲಿ ಟ್ರಾಫಿಕ್ ಜಾಮ್

‘ಖಂಡಿತವಾಗಿಯೂ ನ್ಯಾಯ ಗೆಲ್ಲುತ್ತದೆ’: ದರ್ಶನ್ ಕೇಸ್ ಬಗ್ಗೆ ರಾಗಿಣಿ ಮಾತು

ಕೊಲ್ಕತ್ತಾ ಮೆಟ್ರೋದಲ್ಲಿ ವಿದ್ಯಾರ್ಥಿಗಳು, ಕಾರ್ಮಿಕರ ಜೊತೆ ಮೋದಿ ಪ್ರಯಾಣ
