AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

KPSC ಅಧ್ಯಕ್ಷರಿಗೆ ಬಿಗ್ ಶಾಕ್: ಶಿವಶಂಕರಪ್ಪ ಸಾಹುಕಾರ್ ಅಮಾನತು ಶಿಫಾರಸ್ಸಿಗೆ ಬಿತ್ತು ಸಹಿ

KPSC ಅಧ್ಯಕ್ಷರಿಗೆ ಬಿಗ್ ಶಾಕ್: ಶಿವಶಂಕರಪ್ಪ ಸಾಹುಕಾರ್ ಅಮಾನತು ಶಿಫಾರಸ್ಸಿಗೆ ಬಿತ್ತು ಸಹಿ

ರಮೇಶ್ ಬಿ. ಜವಳಗೇರಾ
|

Updated on: Aug 25, 2026 | 10:29 PM

Share

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ವಿವಾದಗಳ ಬೆನ್ನಲ್ಲೇ ಇದೀಗ ಮಹತ್ವದ ಬೆಳವಣಿಗೆಯೊಂದು ನಡೆದಿದ್ದು, ಕೆಪಿಎಸ್‌ಸಿ ಅಧ್ಯಕ್ಷರಾಗಿದ್ದ ಶಿವಶಂಕರಪ್ಪ ಸಾಹುಕಾರ್ ಅವರನ್ನು ಹುದ್ದೆಯಿಂದ ಎರಡನೇ ಬಾರಿ ಅಮಾನತುಗೊಳಿಸಲಾಗಿದೆ. ಈ ಹಿಂದೆ ಉಂಟಾಗಿದ್ದ ಆಡಳಿತಾತ್ಮಕ ಮತ್ತು ಕಾನೂನು ತೊಡಕುಗಳನ್ನು ನಿವಾರಿಸಿಕೊಂಡಿರುವ ರಾಜ್ಯ ಸರ್ಕಾರವು, ನಿಯಮಾನುಸಾರ ಪ್ರಕ್ರಿಯೆಗಳನ್ನು ಪೂರ್ಣಗೊಳಿಸಿದ ಬಳಿಕ ರಾಜ್ಯಪಾಲರು ಈ ಕ್ರಮ ಕೈಗೊಂಡಿದ್ದಾರೆ.

ಬೆಂಗಳೂರು, (ಆಗಸ್ಟ್ 25): ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ವಿವಾದಗಳ ಬೆನ್ನಲ್ಲೇ ಇದೀಗ ಮಹತ್ವದ ಬೆಳವಣಿಗೆಯೊಂದು ನಡೆದಿದ್ದು, ಕೆಪಿಎಸ್‌ಸಿ ಅಧ್ಯಕ್ಷರಾಗಿದ್ದ ಶಿವಶಂಕರಪ್ಪ ಸಾಹುಕಾರ್ ಅವರನ್ನು ಹುದ್ದೆಯಿಂದ ಎರಡನೇ ಬಾರಿ ಅಮಾನತುಗೊಳಿಸಲಾಗಿದೆ. ಈ ಹಿಂದೆ ಉಂಟಾಗಿದ್ದ ಆಡಳಿತಾತ್ಮಕ ಮತ್ತು ಕಾನೂನು ತೊಡಕುಗಳನ್ನು ನಿವಾರಿಸಿಕೊಂಡಿರುವ ರಾಜ್ಯ ಸರ್ಕಾರವು, ನಿಯಮಾನುಸಾರ ಪ್ರಕ್ರಿಯೆಗಳನ್ನು ಪೂರ್ಣಗೊಳಿಸಿದ ಬಳಿಕ ರಾಜ್ಯಪಾಲರು ಈ ಕ್ರಮ ಕೈಗೊಂಡಿದ್ದಾರೆ.

ಶಿವಶಂಕರಪ್ಪರನ್ನು ಅಮಾನತುಗೊಳಿಸಿರುವುದು ಇದು ಎರಡನೇ ಬಾರಿ. ಜುಲೈ 13ರಂದು ರಾಜ್ಯಪಾಲರು ಸಾಹುಕರ್ ಅವರನ್ನು ಅಮಾನತುಗೊಳಿಸಿದ್ದರು. ಆದರೆ ಕರ್ನಾಟಕ ಹೈಕೋರ್ಟ್ ಈ ಕ್ರಮದಲ್ಲಿ ‘ರಾಜ್ಯ ಸಚಿವ ಸಂಪುಟದ ಸಲಹೆ’ ಇಲ್ಲ ಎಂಬ ಕಾರಣಕ್ಕೆ ಆದೇಶವನ್ನು ರದ್ದುಗೊಳಿಸಿತು. ಇದರ ಬೆನ್ನಲ್ಲೇ ಆಗಸ್ಟ್ 21ರಂದು ರಾಜ್ಯ ಸಚಿವ ಸಂಪುಟವು ಶಿವಶಂಕರಪ್ಪರನ್ನು ಅಮಾನತುಗೊಳಿಸಲು ರಾಜ್ಯಪಾಲರಿಗೆ ಶಿಫಾರಸು ಮಾಡಿತ್ತು. ಇದೀಗ ಈ ಶಿಫಾರಸ್ಸಿಗೆ ರಾಜ್ಯಪಾಲರು ಸಹಿ ಹಾಕಿದ್ದು, ಅಧುಕೃತವಾಗಿ ಅಮಾನತು ಆದೇಶ ಹೊರಬೀಳುವುದು ಬಾಕಿ ಇದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ರಮೇಶ್ ಬಿ. ಜವಳಗೇರಾ
ರಮೇಶ್ ಬಿ. ಜವಳಗೇರಾ

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More