ಧಾರಾಕಾರ ಮಳೆ: ಬೆಂಗಳೂರಿನಲ್ಲಿ ಲ್ಯಾಂಡ್ ಆಗದೇ ವಾಪಸಾದ ರಾಜ್ಯಪಾಲರಿದ್ದ ವಿಮಾನ
ರಾಜ್ಯಪಾಲರಿದ್ದ ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನವು ಮಂಗಳೂರಿನಿಂದ ಬೆಂಗಳೂರಿಗೆ ಆಗಮಿಸಬೇಕಿತ್ತು. ಆದರೆ ಬೆಂಗಳೂರಿನಲ್ಲಿ ಸುರಿಯುತ್ತಿದ್ದ ಮಳೆ ಮತ್ತು ಲ್ಯಾಂಡಿಂಗ್ ಕ್ಲಿಯರೆನ್ಸ್ ಸಿಗದ ಕಾರಣ ವಿಮಾನವು ಕೆಐಎಬಿಯಲ್ಲಿ ಇಳಿಯಲು ಸಾಧ್ಯವಾಗದೆ ಮಂಗಳೂರಿಗೆ ಮರಳಿತ್ತು. ಇದೀಗ ಮತ್ತೊಮ್ಮೆ ರಾಜ್ಯಪಾಲರ ವಿಮಾನ ಬೆಂಗಳೂರಿಗೆ ಬರಲು ಸಿದ್ಧವಾಗಿದೆ.
ದೇವನಹಳ್ಳಿ, ಏಪ್ರಿಲ್ 10: ಬೆಂಗಳೂರುನಲ್ಲಿ ಸುರಿದ ಭಾರಿ ಮಳೆ ಪರಿಣಾಮ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿದ್ದ ವಿಮಾನ ಲ್ಯಾಂಡ್ ಆಗಲು ಸಾಧ್ಯವಾಗದೇ ಮಂಗಳೂರುಗೆ ವಾಪಸ್ ತೆರಳಿರುವಂತಹ ಘಟನೆ ನಡೆದಿದೆ. ಮಂಗಳೂರಿನಿಂದ ಬೆಂಗಳೂರಿಗೆ ಆಗಮಿಸುತ್ತಿದ್ದ ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನವು ಸಂಜೆ 5:45ಕ್ಕೆ ದೇವನಹಳ್ಳಿ ಸಮೀಪದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಲ್ಯಾಂಡ್ ಆಗಬೇಕಿತ್ತು. ಆದರೆ ಮಳೆ ಹಿನ್ನೆಲೆ ಲ್ಯಾಂಡಿಂಗ್ಗೆ ಕ್ಲಿಯರೆನ್ಸ್ ಇಲ್ಲದ ಕಾರಣ ಮಂಗಳೂರು ವಾಪಸ್ ಆಗಿದೆ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.
Follow Us
Latest Videos
ಫುಟ್ಬಾಲ್ ವಿಶ್ವಕಪ್ ಉದ್ಘಾಟನೆಯಲ್ಲಿ ಹೀಗಿತ್ತು ನೋರಾ ಫತೇಹಿ ಪ್ರದರ್ಶನ
ಸಾವಿನ ಬಗ್ಗೆ ಪದೇ ಪದೇ ಸುಳ್ಳು ಸುದ್ದಿ: ನಟ ದೊಡ್ಡಣ್ಣ ಹೇಳಿದ್ದೇನು?
ನಿರುದ್ಯೋಗಿಗಳಿಗೆ ಗುಡ್ನ್ಯೂಸ್ ನೀಡಿದ ಸಿಎಂ ಡಿಕೆ ಶಿವಕುಮಾರ್
ವೆನೆಜುವೆಲಾ ದರೋಡೆಕೋರನ ಮೇಲಿನ ವೈಮಾನಿಕ ದಾಳಿಯ ವಿಡಿಯೋ ಹಂಚಿಕೊಂಡ ಟ್ರಂಪ್
