ಧಾರಾಕಾರ ಮಳೆ: ಬೆಂಗಳೂರಿನಲ್ಲಿ ಲ್ಯಾಂಡ್​ ಆಗದೇ ವಾಪಸಾದ ರಾಜ್ಯಪಾಲರಿದ್ದ ವಿಮಾನ

Edited By:

Updated on: Apr 10, 2026 | 9:54 PM

ರಾಜ್ಯಪಾಲರಿದ್ದ ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನವು ಮಂಗಳೂರಿನಿಂದ ಬೆಂಗಳೂರಿಗೆ ಆಗಮಿಸಬೇಕಿತ್ತು. ಆದರೆ ಬೆಂಗಳೂರಿನಲ್ಲಿ ಸುರಿಯುತ್ತಿದ್ದ ಮಳೆ ಮತ್ತು ಲ್ಯಾಂಡಿಂಗ್ ಕ್ಲಿಯರೆನ್ಸ್ ಸಿಗದ ಕಾರಣ ವಿಮಾನವು ಕೆಐಎಬಿಯಲ್ಲಿ ಇಳಿಯಲು ಸಾಧ್ಯವಾಗದೆ ಮಂಗಳೂರಿಗೆ ಮರಳಿತ್ತು. ಇದೀಗ ಮತ್ತೊಮ್ಮೆ ರಾಜ್ಯಪಾಲರ ವಿಮಾನ ಬೆಂಗಳೂರಿಗೆ ಬರಲು ಸಿದ್ಧವಾಗಿದೆ.

ದೇವನಹಳ್ಳಿ, ಏಪ್ರಿಲ್​ 10: ಬೆಂಗಳೂರುನಲ್ಲಿ ಸುರಿದ ಭಾರಿ ಮಳೆ ಪರಿಣಾಮ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್​​ ಅವರಿದ್ದ ವಿಮಾನ ಲ್ಯಾಂಡ್ ಆಗಲು ಸಾಧ್ಯವಾಗದೇ ಮಂಗಳೂರುಗೆ ವಾಪಸ್​ ತೆರಳಿರುವಂತಹ ಘಟನೆ ನಡೆದಿದೆ. ಮಂಗಳೂರಿನಿಂದ ಬೆಂಗಳೂರಿಗೆ ಆಗಮಿಸುತ್ತಿದ್ದ ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನವು ಸಂಜೆ 5:45ಕ್ಕೆ ದೇವನಹಳ್ಳಿ ಸಮೀಪದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಲ್ಯಾಂಡ್​ ಆಗಬೇಕಿತ್ತು. ಆದರೆ ಮಳೆ ಹಿನ್ನೆಲೆ ಲ್ಯಾಂಡಿಂಗ್​ಗೆ ಕ್ಲಿಯರೆನ್ಸ್​​​ ಇಲ್ಲದ ಕಾರಣ ಮಂಗಳೂರು ವಾಪಸ್ ಆಗಿದೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Loading...
Unable to load recommendations.
Follow Us
ನವೀನ್ ಕುಮಾರ್ ಟಿ.

ನವೀನ್ ಕುಮಾರ್ ಟಿ ರವರು ಮೂಲತಃ ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ನಿವಾಸಿಯಾಗಿದ್ದು ಕಳೆದ 9 ವರ್ಷಗಳಿಂದ ಹೆಮ್ಮೆಯ ಟಿವಿ9 ಕನ್ನಡದ ದೇವನಹಳ್ಳಿ, ಬೆಂಗಳೂರು ಗ್ರಾಮಾತರ ಜಿಲ್ಲಾ ವರದಿಗಾರರಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಎಂಎಸ್​ಸಿ ಎಲೆಕ್ಟ್ರಾನಿಕ್ ಮೀಡಿಯಾ ವ್ಯಾಸಾಂಗ ಮಾಡಿರುವ ಇವರು ಪದವಿ ಶಿಕ್ಷಣ ಮುಗಿದ ನಂತರ ಟಿವಿ9 ಕನ್ನಡದಲ್ಲಿ ವರದಿಗಾರರಾಗಿ ಉದ್ಯೋಗಕ್ಕೆ ಸೇರಿದ್ದು ಆರು ತಿಂಗಳ ಕಾಲ ಮುಖ್ಯ ಕಛೇರಿಯಲ್ಲಿ ಕೆಲಸ ಮಾಡಿದ್ದಾರೆ. ಜೊತೆಗೆ ಸಂಸ್ಥೆ ನೀಡಿದ ಮಹತ್ವದ ವರದಿಗಾರನ ಹುದ್ದೆಯನ್ನು ಕಳೆದ 9 ವರ್ಷದಿಂದ ಸಿಲಿಕಾನ್ ಸಿಟಿ ಹೊರ ವಲಯದಲ್ಲಿರುವ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ದೊಡ್ಡಬಳ್ಳಾಪುರ ಹೊಸಕೋಟೆ ಮತ್ತು ನಗರ ಜಿಲ್ಲೆಯ ಯಲಹಂಕ ಭಾಗದ ಸುದ್ದಿಗಳನ್ನ ವರದಿ ಮಾಡುತ್ತಾ ವರದಿಗಾರನಾಗಿ ಕೆಲಸ ಮಾಡುತ್ತಿದ್ದಾರೆ. ಪ್ರಮುಖವಾಗಿ ದೇಶದ ಟಾಪ್ 3 ನಲ್ಲಿ ಹೆಸರು ಪಡೆದು ಹೆಸರುವಾಸಿಯಾಗಿರುವ ಕೆಂಪೇಗೌಡ ಅಂತರಾಷ್ಟ್ರಿಯಾ ವಿಮಾನ ನಿಲ್ಥಾಣದ ಪ್ರಮುಖ ಸುದ್ದಿಗಳು ರಾಜಕೀಯ ಹಾಗೂ ಸಿಲಿಕಾನ್ ಸಿಟಿ ಹೊರ ವಲಯದಲ್ಲಿ ನಡೆಯುವ ಕ್ರೈಂ ಸೇರಿದಂತೆ ಇತರೆ ಸುದ್ದಿಗಳನ್ನ ವರದಿ ಮಾಡುತ್ತಾ ಎಕ್ಸಕ್ಲೂಸಿವ್ ವರದಿಗಳನ್ನ ನೀಡುತ್ತಿದ್ದಾರೆ.

Read More