AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉದ್ಯಾನವನಗಳ ಸಂರಕ್ಷಣಾ ತಿದ್ದುಪಡಿ ವಿಧೇಯಕವನ್ನ ಸರ್ಕಾರಕ್ಕೆ ವಾಪಸ್ ಕಳುಹಿಸಿದ ರಾಜ್ಯಪಾಲ

ಉದ್ಯಾನವನಗಳ ಸಂರಕ್ಷಣಾ ತಿದ್ದುಪಡಿ ವಿಧೇಯಕವನ್ನ ಸರ್ಕಾರಕ್ಕೆ ವಾಪಸ್ ಕಳುಹಿಸಿದ ರಾಜ್ಯಪಾಲ

ಪ್ರಸನ್ನ ಗಾಂವ್ಕರ್​
| Edited By: |

Updated on:Sep 04, 2026 | 8:12 PM

Share

ವಿವಾದಿತ ಉದ್ಯಾನವನಗಳ ಸಂರಕ್ಷಣಾ ತಿದ್ದುಪಡಿ ವಿಧೇಯಕವನ್ನ ವಾಪಸ್ ಪಡೆದುಕೊಳ್ಳುವುದಾಗಿ ರಾಜ್ಯ ತೀರ್ಮಾನಿಸಿದೆ. ಈ ಸಂಬಂಧ ಸಚಿವ ಸಂಪುಟದಲ್ಲಿ ನಿರ್ಧರಿಸಿದೆ. ಇದಕ್ಕೂ ಮೊದಲ ಈ ವಿಧೇಯಕ್ಕೆ ಭಾರೀ ವಿರೋಧಗಳು ವ್ಯಕ್ತವಾಗಿದ್ದವು. ಯಾವುದೇ ಕಾರಣಕ್ಕೂ ವಿಧೇಯಕಕ್ಕೆ ಸಹಿ ಹಾಕಬಾರದು ಎಂದು ಬಿಜೆಪಿ ನಾಯಕರು ರಾಜ್ಯಪಾಲರಿಗೆ ದೂರು ನೀಡಿ ಮನವಿ ಮಾಡಿದ್ದರು. ಈ ಎಲ್ಲಾ ಬೆಳವಣಿಗೆ ಬೆನ್ನಲ್ಲೇ ಇದೀಗ ರಾಜ್ಯಪಾಲರು ಸಹ ಉದ್ಯಾನವನಗಳ ಸಂರಕ್ಷಣಾ ತಿದ್ದುಪಡಿ ವಿಧೇಯಕವನ್ನು ಸರ್ಕಾರಕ್ಕೆ ವಾಪಸ್ ಕಳುಹಿಸಿದ್ದಾರೆ.

ಬೆಂಗಳೂರು, (ಸೆಪ್ಟೆಂಬರ್ 04): ವಿವಾದಿತ ಉದ್ಯಾನವನಗಳ ಸಂರಕ್ಷಣಾ ತಿದ್ದುಪಡಿ ವಿಧೇಯಕವನ್ನ ವಾಪಸ್ ಪಡೆದುಕೊಳ್ಳುವುದಾಗಿ ರಾಜ್ಯ ತೀರ್ಮಾನಿಸಿದೆ. ಈ ಸಂಬಂಧ ಸಚಿವ ಸಂಪುಟದಲ್ಲಿ ನಿರ್ಧರಿಸಿದೆ. ಇದಕ್ಕೂ ಮೊದಲ ಈ ವಿಧೇಯಕ್ಕೆ ಭಾರೀ ವಿರೋಧಗಳು ವ್ಯಕ್ತವಾಗಿದ್ದವು. ಯಾವುದೇ ಕಾರಣಕ್ಕೂ ವಿಧೇಯಕಕ್ಕೆ ಸಹಿ ಹಾಕಬಾರದು ಎಂದು ಬಿಜೆಪಿ ನಾಯಕರು ರಾಜ್ಯಪಾಲರಿಗೆ ದೂರು ನೀಡಿ ಮನವಿ ಮಾಡಿದ್ದರು. ಈ ಎಲ್ಲಾ ಬೆಳವಣಿಗೆ ಬೆನ್ನಲ್ಲೇ ಇದೀಗ ರಾಜ್ಯಪಾಲರು ಸಹ ಉದ್ಯಾನವನಗಳ ಸಂರಕ್ಷಣಾ ತಿದ್ದುಪಡಿ ವಿಧೇಯಕವನ್ನು ಸರ್ಕಾರಕ್ಕೆ ವಾಪಸ್ ಕಳುಹಿಸಿದ್ದಾರೆ.

Published on: Sep 04, 2026 07:37 PM

Follow Us
ಪ್ರಸನ್ನ ಗಾಂವ್ಕರ್​
ಪ್ರಸನ್ನ ಗಾಂವ್ಕರ್​

ಹುಟ್ಟೂರು ಯಲ್ಲಾಪುರ, ಬೆಳೆದೂರು ದಾಂಡೇಲಿಯ ದಟ್ಟ ಕಾಡುಗಳ ನಡುವೆ. ರವಿ ಬೆಳಗೆರೆ ಎಂಬ ಅಕ್ಷರ ರಾಕ್ಷಸನ ಕಟ್ಟಾಭಿಮಾನದಿಂದ ಹಾಳಾಗಿ, ಸೈನ್ಸ್ ನಲ್ಲಿ ಡಿಗ್ರಿ ಪಡೆದು ಜರ್ನಲಿಸಂಗೆ ಹಿಂಬದಿ ಕಿಟಕಿಯಿಂದ ನುಸುಳಿದ್ದು 2010 ರ ಅಕ್ಟೋಬರ್ ನಲ್ಲಿ. ಉಡುಪಿಯಲ್ಲಿ ಮೊದಲ ಪತ್ರಿಕೋದ್ಯಮ ಕರ್ತವ್ಯ ಪ್ರಾರಂಭಿಸಿದ್ದು 2010 ರಲ್ಲಿಯೇ. ಜನಶ್ರೀ ನ್ಯೂಸ್ ಮೊದಲು ಅನ್ನ ನೀಡಿದ ಸಂಸ್ಥೆ. ಉಡುಪಿ ಜಿಲ್ಲಾ ವರದಿಗಾರನಾಗಿ ಮೂರು ವರ್ಷ ಕೆಲಸ ಮಾಡಿ 2013 ರ ಅಂತ್ಯಕ್ಕೆ ಸಮಯ ನ್ಯೂಸ್ ಮೂಲಕ ಬೆಂಗಳೂರಿಗೆ ಎಂಟ್ರಿ. ಬಿಗ್ ೩, ಬೆಂಗಳೂರ್ ಲೈವ್, ಸಮಯ ಸಕಾಲ ಕಾರ್ಯಕ್ರಮದಲ್ಲಿ ವರದಿಗಾರಿಕೆ ಮಾಡಿದ ಖುಷಿ. 2014 ರ ಡಿಸೆಂಬರ್ ನಿಂದ ಟಿವಿ9 ನಲ್ಲಿ ಕೆಲಸ ಪ್ರಾರಂಭ. ಟಿವಿ9 ನಲ್ಲಿ ಮೊದಲು ಮೆಟ್ರೋ ರಿಪೋರ್ಟಿಂಗ್ ಮೂಲಕ ಬೆಂಗಳೂರು ಸುತ್ತುವ ಅರಿಯುವ ರಾಜಧಾನಿಯ ನಾಡಿಮಿಡಿತ ಹುಡುಕುವ ಅವಕಾಶ. ಮೆಟ್ರೋ ಬ್ಯೂರೋ ದಲ್ಲಿ ಶೈಕ್ಷಣಿಕ ಹಾಗೂ ಬಿಬಿಎಂಪಿ ವರದಿಗಾರಿಕೆ. ಚಪ್ಪಲಿಯಿಂದ ಹಿಡಿದು ಚಾದರ್ ತನಕ ಸ್ಟೋರಿ ಮಾಡಿದ ಅನುಭವ. ಮೆಟ್ರೋ ಟೀಂ ನಿಂದ ರಾಜಕೀಯ ವರದಿಗಾರಿಕೆಗೆ ಶಿಫ್ಟ್ ಆದ ತಕ್ಷಣ- ಮುಂದುವರಿದಿದೆ ನಿರಂತರ ಪಯಣ. ಕಥೆ, ಕಾದಂಬರಿ, ಕವನ, ಸಿನಿಮಾ, ಸುತ್ತಾಟ, ಆಗಾಗ ಕಿತ್ತಾಟ, ಸ್ನೇಹಿತರೊಂದಿಗೆ ಒಡನಾಟ ಇವೆಲ್ಲ ಮಾಮೂಲಿ ದಿನಚರಿ. ಇವತ್ತಿಗೂ ಬರವಣಿಗೆಯೊಂದೇ ಖುಷಿ ಕೊಡುವ ಖರ್ಜೂರ. ಸ್ಟಾಕ್ ಮಾರ್ಕೆಟ್ ನಲ್ಲಿ 2019 ರಿಂದ ಆ್ಯಕ್ಟಿವ್.

Read More