AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಾಸಿಕ್ಯೂಷನ್​ಗೆ ಸ್ಯಾಂಕ್ಷನ್ ಎಂದರೆ ಸಿಎಂ ವಿರುದ್ಧ ತನಿಖೆ ನಡೆಸಲು ಪೊಲೀಸ್​ಗೆ ಅನುಮತಿ ನೀಡಿದಂತೆ: ಬಿವಿ ಆಚಾರ್ಯ, ಹಿರಿಯ ವಕೀಲ

ಪ್ರಾಸಿಕ್ಯೂಷನ್​ಗೆ ಸ್ಯಾಂಕ್ಷನ್ ಎಂದರೆ ಸಿಎಂ ವಿರುದ್ಧ ತನಿಖೆ ನಡೆಸಲು ಪೊಲೀಸ್​ಗೆ ಅನುಮತಿ ನೀಡಿದಂತೆ: ಬಿವಿ ಆಚಾರ್ಯ, ಹಿರಿಯ ವಕೀಲ

ಅರುಣ್​ ಕುಮಾರ್​ ಬೆಳ್ಳಿ
ಅರುಣ್​ ಕುಮಾರ್​ ಬೆಳ್ಳಿ|

Updated on: Aug 17, 2024 | 3:02 PM

Share

ಪ್ರಾಸಿಕ್ಯೂಷನ್ ಸ್ಯಾಂಕ್ಷನ್ ಸಿಕ್ಕಿರುವುದಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ಸಲ್ಲಿಸುವ ಅನಿವಾರ್ಯತೆ ಇರಲ್ಲ, ತನಿಖೆ ಮುಗಿದು ವಿಚಾರಣೆ ನ್ಯಾಯಾಲಯದಲ್ಲಿ ಶುರುವಾದರೂ ರಾಜೀನಾಮೆ ಸಲ್ಲಿಸಬೇಕಿಲ್ಲ, ದೆಹಲಿಯ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಜೈಲಲ್ಲಿದ್ದರೂ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿಲ್ಲ, ಜಾರ್ಖಂಡ್ ಸಿಎಂ ಹೇಮಂತ್ ಸೊರೇನ್ ಜೈಲಿಗೆ ಹೋಗುವ ಮೊದಲು ತಾವಾಗಿಯೇ ರಾಜೀನಾಮೆ ಸಲ್ಲಿಸಿದ್ದರು ಎಂದು ಬಿವಿ ಆಚಾರ್ಯ ಹೇಳಿದರು.

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲ ಅವರು ಪ್ರಾಸಿಕ್ಯೂಷನ್​ಗೆ ಅನುಮತಿ ನೀಡಿರುವ ಬಗ್ಗೆ ರಾಜ್ಯದ ಖ್ಯಾತ ಮತ್ತು ಹಿರಿಯ ವಕೀಲ ಬಿವಿ ಆಚಾರ್ಯ ಅವರು; ಈಗ ಸಿಎಂ ಮುಂದಿರುವ ದಾರಿಗಳ ವಿವರಣೆ ನೀಡಿದ್ದಾರೆ. ರಾಜ್ಯಪಾಲರು ನೀಡಿರುವ ಪ್ರಾಸಿಕ್ಯೂಷನ್ ಅಂದರೆ ಕೋರ್ಟ್ ನಲ್ಲಿ ವಿಚಾರಣೆ ನಡೆಯಬೇಕು ಅಂತಲ್ಲ, ಮುಡಾ ಹಗರಣದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಯವರ ವಿರುದ್ಧ ಪೊಲೀಸ್ ತನಿಖೆಗೆ ಅವರು ಅನುಮತಿ ನೀಡಿದ್ದಾರೆ, ಈಗ ಸಿಎಂ ವಿರುದ್ಧ ಪೊಲೀಸರು ತನಿಖೆ ನಡೆಸಲು ಮುಕ್ತರು ಎಂದು ಸೀನಿಯರ್ ಅಡ್ವೋಕೇಟ್ ಹೇಳಿದರು. ಚುನಾಯಿತ ಮುಖ್ಯಮಂತ್ರಿಯೊಬ್ಬರ ವಿರುದ್ಧ ತನಿಖೆ ಮತ್ತು ಪ್ರಾಸಿಕ್ಯೂಷನ್ ನಡೆಸಲು ಯಾವುದೇ ಕಾನೂನು ಇಲ್ಲ ದೂರು ಮತ್ತು ದಾಖಲೆಗಳನ್ನು ಆಧರಿಸಿ ಕೇವಲ ರಾಜ್ಯಪಾಲ ಮಾತ್ರ ಪೊಲೀಸ್ ತನಿಖೆಗೆ ಅನುಮತಿ ನೀಡಬಹುದು ಎಂದು ಆಚಾರ್ಯ ಹೇಳಿದರು. ಇದನ್ನು ಕಾನೂನಾತ್ಮಕವಾಗಿ ಎದುರಿಸಲು ಮುಖ್ಯಮಂತ್ರಿಯವರಿಗೆ ಅವಕಾಶವಿದೆ, ರಾಜ್ಯಪಾಲರ ಸ್ಯಾಂಕ್ಷನ್ ಅನ್ನು ಅವರು ಹೈ ಕೋರ್ಟ್ ಇಲ್ಲವೇ ಸುಪ್ರೀಮ್ ಕೋರ್ಟ್ ನಲ್ಲಿ ಪ್ರಶ್ನಿಸಬಹುದು ಎಂದು ವಕೀಲ ಆಚಾರ್ಯ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:   ಮುಡಾ ಹಗರಣ: ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್​ಗೆ ರಾಜ್ಯಪಾಲರ ಅನುಮತಿ, ಕಾನೂನು ಸಮಾಲೋಚನೆಯಲ್ಲಿ ಸಿಎಂ

Follow Us
Arun Belly
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.