Viral Video: ಕಿರುಕುಳ ನೀಡಲು ಬಂದ ಪುಂಡರ ಕಾಲರ್ ಹಿಡಿದು ಒದ್ದ ಯುವತಿ
ಉತ್ತರಾಖಂಡದ ಹಲ್ದ್ವಾನಿಯಲ್ಲಿ ಧೈರ್ಯಶಾಲಿ ಯುವತಿಯೊಬ್ಬಳು ತನಗೆ ಕಿರುಕುಳ ನೀಡಲು ಬಂದ ಯುವಕರಿಗೆ ತಕ್ಕ ಪಾಠ ಕಲಿಸಿದ್ದಾಳೆ. ಅವರ ಕಾಲರ್ ಹಿಡಿದು, ಗುದ್ದಿ, ಒದ್ದು ದಾಳಿ ಮಾಡಿದ ಆಕೆ ಬಳಿಕ ಅವರನ್ನು ಪೊಲೀಸರಿಗೆ ಒಪ್ಪಿಸಿದ್ದಾಳೆ.
ನವದೆಹಲಿ: ಇಬ್ಬರು ಹುಡುಗಿಯರು ಒಟ್ಟಿಗೆ ನಡೆದುಕೊಂಡು ಹೋಗುತ್ತಿದ್ದಾಗ ದುಷ್ಕರ್ಮಿಗಳ ಗುಂಪು ಅಶ್ಲೀಲ ಕಾಮೆಂಟ್‌ಗಳಿಂದ ಆಕೆಗೆ ಕಿರುಕುಳ ನೀಡಲು ಪ್ರಾರಂಭಿಸಿದ್ದಾರೆ. ಆಗ ಆ ಯುವತಿ ಅವರ ಕಾಲರ್ ಹಿಡಿದು, ಒದ್ದು ಬುದ್ಧಿ ಕಲಿಸಿರುವ ವಿಡಿಯೋ ವೈರಲ್ ಆಗಿದೆ. ನಂತರ ಆಕೆ ಅವರನ್ನು ಪೊಲೀಸರಿಗೆ ಒಪ್ಪಿಸಿದ್ದಾಳೆ. ಆಕೆಯ ಧೈರ್ಯಕ್ಕೆ ಭಾರೀ ಮೆಚ್ಚುಗೆ ವ್ಯಕ್ತವಾಗಿದೆ.
ಇನ್ನಷ್ಟು ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ