AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Chamundeshwari Vardhanti Mahotsav: ನಾಡದೇವಿ ಚಾಮುಂಡೇಶ್ವರಿ ವರ್ಧಂತಿ ಮಹೋತ್ಸವದ ಸಂಭ್ರಮ!

Chamundeshwari Vardhanti Mahotsav: ನಾಡದೇವಿ ಚಾಮುಂಡೇಶ್ವರಿ ವರ್ಧಂತಿ ಮಹೋತ್ಸವದ ಸಂಭ್ರಮ!

ರಾಮ್​, ಮೈಸೂರು
| Edited By: |

Updated on:Aug 04, 2026 | 10:06 AM

Share

ನಾಡದೇವಿ ಶ್ರೀ ಚಾಮುಂಡೇಶ್ವರಿ ವರ್ಧಂತಿ ಮಹೋತ್ಸವ ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಸಂಭ್ರಮದಿಂದ ಆಚರಿಸಲಾಯಿತು. ಚಾಮುಂಡೇಶ್ವರಿ ದೇವಸ್ಥಾನವು ಹಬ್ಬದ ವಾತಾವರಣದಿಂದ ಕಂಗೊಳಿಸುತ್ತಿತ್ತು. ಈ ಮಹತ್ವದ ದಿನದಂದು ದೇವಸ್ಥಾನದಲ್ಲಿ ವಿಶೇಷ ಪೂಜಾ ಕೈಂಕರ್ಯಗಳನ್ನು ಹಮ್ಮಿಕೊಳ್ಳಲಾಗಿತ್ತು. ಬೆಳಗ್ಗೆ 5 ಗಂಟೆಯಿಂದಲೇ ಶ್ರೀ ಚಾಮುಂಡೇಶ್ವರಿ ತಾಯಿಗೆ ವಿಶೇಷ ಅಭಿಷೇಕ ಮತ್ತು ಪೂಜೆಗಳನ್ನು ನೆರವೇರಿಸಲಾಯಿತು.

ಮೈಸೂರು, ಆಗಸ್ಟ್ 04: ನಾಡದೇವಿ ಶ್ರೀ ಚಾಮುಂಡೇಶ್ವರಿ ವರ್ಧಂತಿ ಮಹೋತ್ಸವ ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಸಂಭ್ರಮದಿಂದ ಆಚರಿಸಲಾಯಿತು. ಚಾಮುಂಡೇಶ್ವರಿ ದೇವಸ್ಥಾನವು ಹಬ್ಬದ ವಾತಾವರಣದಿಂದ ಕಂಗೊಳಿಸುತ್ತಿತ್ತು. ಈ ಮಹತ್ವದ ದಿನದಂದು ದೇವಸ್ಥಾನದಲ್ಲಿ ವಿಶೇಷ ಪೂಜಾ ಕೈಂಕರ್ಯಗಳನ್ನು ಹಮ್ಮಿಕೊಳ್ಳಲಾಗಿತ್ತು. ಬೆಳಗ್ಗೆ 5 ಗಂಟೆಯಿಂದಲೇ ಶ್ರೀ ಚಾಮುಂಡೇಶ್ವರಿ ತಾಯಿಗೆ ವಿಶೇಷ ಅಭಿಷೇಕ ಮತ್ತು ಪೂಜೆಗಳನ್ನು ನೆರವೇರಿಸಲಾಯಿತು. ವರ್ಧಂತಿ ಮಹೋತ್ಸವದ ಪ್ರಯುಕ್ತ ದೇವಾಲಯವನ್ನು ಆಕರ್ಷಕವಾಗಿ ಅಲಂಕರಿಸಲಾಗಿತ್ತು. ದೇವಾಲಯದ ಮುಖ್ಯದ್ವಾರದಲ್ಲಿ ತೆಂಗಿನ ಗರಿಗಳು, ಕಬ್ಬು ಮತ್ತು ವಿವಿಧ ಬಗೆಯ ಸುಂದರ ಹೂವುಗಳನ್ನು ಬಳಸಿ ಭವ್ಯವಾದ ಮಂಟಪವನ್ನು ನಿರ್ಮಿಸಲಾಗಿತ್ತು. ಮೈಸೂರು ರಾಜಮನೆತನದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಮತ್ತು ಪ್ರಮೋದಾದೇವಿ ಒಡೆಯರ್ ಅವರು ಈ ವರ್ಧಂತಿ ಮಹೋತ್ಸವದಲ್ಲಿ ಭಾಗವಹಿಸಿ ದೇವಿಯ ದರ್ಶನ ಪಡೆದರು.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published on: Aug 04, 2026 10:05 AM

Follow Us