IIT ಉದ್ಘಾಟಿಸಿದ ಪ್ರಧಾನಿ ಮೋದಿಗೆ ಆರತಿ ಬೆಳಗಿದ ಅಜ್ಜಿ

Updated on: Mar 12, 2023 | 8:48 PM

ಧಾರವಾಡದಲ್ಲಿ ನಿರ್ಮಿಸಲಾಗಿರುವ ಐಐಟಿ ನೂತನ ಕಟ್ಟಡವನ್ನು ಪ್ರಧಾನಿ ನರೇಂದ್ರ ಮೋದಿ ಉದ್ಘಾಟನೆ ಮಾಡುತ್ತಿದ್ದಂತೆ ಅಜ್ಜಿ ಒಬ್ಬರು ವೇದಿಕೆ ಎದುರಿಗೆ ನಿಂತು ಮೋದಿಗೆ ಆರತಿ ಬೆಳಗಿದರು.

ಧಾರವಾಡ: ಕರ್ನಾಟಕ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ (Narendra Modi), ಇಂದು ಬೆಂಗಳೂರು-ಮೈಸೂರು ಹೈವೇ ಉದ್ಘಾಟಿಸಿದರು. ನಂತರ ಧಾರವಾಡದಲ್ಲಿ ನಿರ್ಮಿಸಲಾಗಿರುವ ಐಐಟಿ ನೂತನ ಕಟ್ಟಡ ಉದ್ಘಾಟನೆ ಮಾಡಿದರು. ಈ ವೇಳೆ ಐಐಟಿ ಉದ್ಘಾಟನೆ ಆಗುತ್ತಿದ್ದಂತೆಯೇ ಪ್ರಧಾನಿ ಮೋದಿಗೆ ಅಜ್ಜಿ (Grandmother) ಒಬ್ಬರು ವೇದಿಕೆ ಎದುರಿಗೆ ನಿಂತು ಆರತಿ ಬೆಳಗಿದ್ದಾರೆ. ಧಾರವಾಡ ತಾಲೂಕಿನ ಬೇಲೂರ ಗ್ರಾಮದ ಸುಭದ್ರಮ್ಮ‌ ಚಿಕ್ಕಮಠ ಎಂಬುವವರು ಆರತಿ ಮಾಡುವ ಮೂಲಕ ಗೌರವ ಸಲ್ಲಿಸಿದ್ದಾರೆ. ವಿಡಿಯೋ ನೋಡಿ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published on: Mar 12, 2023 08:47 PM
Follow Us
Gangadhar Saboji

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್​ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್​, ವೈಯಿಸ್​ ಓವರ್​, ಎಡಿಟಿಂಗ್​ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್‌ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.

Read More