AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಿಬಿಎ ಚುನಾವಣೆಗೆ ಕಾಲಾವಕಾಶ ವಿಸ್ತರಣೆಗೆ ಮನವಿ: ಸುಪ್ರೀಂಕೋರ್ಟ್​ಗೆ ಕರ್ನಾಟಕ ಸರ್ಕಾರ ಅರ್ಜಿ

ಜಿಬಿಎ ಚುನಾವಣೆಗೆ ಕಾಲಾವಕಾಶ ವಿಸ್ತರಣೆಗೆ ಮನವಿ: ಸುಪ್ರೀಂಕೋರ್ಟ್​ಗೆ ಕರ್ನಾಟಕ ಸರ್ಕಾರ ಅರ್ಜಿ

ಪ್ರಸನ್ನ ಗಾಂವ್ಕರ್​
| Edited By: |

Updated on: Jul 10, 2026 | 1:42 PM

Share

ಜಿಬಿಎ ಚುನಾವಣೆ ನಡೆಸಲು ಕಾಲಾವಕಾಶ ವಿಸ್ತರಣೆ ಮಾಡುವಂತೆ ಕೋರಿ ಕರ್ನಾಟಕ ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದೆ. ಆಗಸ್ಟ್ 31ರ ಗಡುವು ಮೀರಿ ಡಿಸೆಂಬರ್ 31ರವರೆಗೆ ಸಮಯಾವಕಾಶ ಕೋರಲಾಗಿದ್ದು, ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ ಮತ್ತು ಸಿಬ್ಬಂದಿ ಕೊರತೆಯನ್ನು ಇದಕ್ಕೆ ಕಾರಣವಾಗಿ ನೀಡಿದೆ.

ಬೆಂಗಳೂರು, ಜುಲೈ 10: ಗ್ರೇಟರ್ ಬೆಂಗಳೂರು ಅಥಾರಿಟಿ (ಜಿಬಿಎ) ಚುನಾವಣೆ ನಡೆಸಲು ಕಾಲಾವಕಾಶ ವಿಸ್ತರಣೆ ಮಾಡುವಂತೆ ಕೋರಿ ರಾಜ್ಯ ಸರ್ಕಾರವು ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದೆ. ಆಗಸ್ಟ್ 31ರೊಳಗೆ ಚುನಾವಣೆ ಪೂರ್ಣಗೊಳಿಸುವಂತೆ ಸುಪ್ರೀಂ ಕೋರ್ಟ್ ಈ ಹಿಂದೆ ಆದೇಶ ನೀಡಿತ್ತು. ಆದಾಗ್ಯೂ, ಸರ್ಕಾರವು ಮೇ 20ರ ಆದೇಶವನ್ನು ಮಾರ್ಪಡಿಸುವಂತೆ ಮನವಿ ಮಾಡಿದ್ದು, ಡಿಸೆಂಬರ್ 31ರವರೆಗೆ ಸಮಯ ವಿಸ್ತರಿಸುವಂತೆ ಕೋರಿದೆ.

ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಇಆರ್) ನಡೆಯುತ್ತಿರುವುದರಿಂದ ಚುನಾವಣಾ ಪ್ರಕ್ರಿಯೆಗಳನ್ನು ನಡೆಸಲು ಆಡಳಿತಾತ್ಮಕ ನಿರ್ಬಂಧಗಳು ಇವೆ ಎಂದು ಸರ್ಕಾರ ಅರ್ಜಿಯಲ್ಲಿ ತಿಳಿಸಿದೆ. ಈ ಪ್ರಕ್ರಿಯೆಗೆ ದೊಡ್ಡ ಸಂಖ್ಯೆಯ ಸಿಬ್ಬಂದಿಗಳು ನಿಯೋಜಿತರಾಗಿದ್ದಾರೆ ಎಂದು ಸುಪ್ರೀಂ ಕೋರ್ಟ್‌ಗೆ ನಾಲ್ಕು ತಿಂಗಳ ಕಾಲಾವಕಾಶ ಕೋರಿರುವ ಸರ್ಕಾರ, ಆಗಸ್ಟ್ 31ರ ಗಡುವಿನೊಳಗೆ ಚುನಾವಣೆಯನ್ನು ನಡೆಸಲು ಸಾಧ್ಯವಿಲ್ಲ ಎಂದು ಹೇಳಿದೆ. ಈ ಅರ್ಜಿಯ ಕುರಿತು ಸುಪ್ರೀಂ ಕೋರ್ಟ್ ಯಾವ ನಿರ್ಧಾರ ತೆಗೆದುಕೊಳ್ಳಲಿದೆ ಎಂಬುದು ಕಾದು ನೋಡಬೇಕಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us