AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು, ಎದುರಾದ ಆತಂಕವೇನು?

ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು, ಎದುರಾದ ಆತಂಕವೇನು?

ಪ್ರಸನ್ನ ಗಾಂವ್ಕರ್​
| Edited By: |

Updated on:May 14, 2026 | 7:04 PM

Share

ಗ್ರೇಟರ್‌ ಬೆಂಗಳೂರು ಪ್ರಾಧಿಕಾರ (GBA) ವ್ಯಾಪ್ತಿಯ ಐದು ಮಹಾನಗರ ಪಾಲಿಕೆಗಳ ಚುನಾವಣೆಗೆ ಮತ್ತಷ್ಟು ವಿಳಂಬ ಆಗುವ ಸಾಧ್ಯತೆ ದಟ್ಟವಾಗಿದೆ. ಚುನಾವಣೆ ಮುಂದೂಡಿಕೆಗೆ ಸಕಾರಣಗಳೊಂದಿಗೆ ಸುಪ್ರೀಂ ಕೋರ್ಟ್‌ ಮೊರೆ ಹೋಗಲು ರಾಜ್ಯ ಸರ್ಕಾರ ತಯಾರಿ ಮಾಡಿಕೊಂಡಿದೆ. ಇದರ ನಡುವೆ ಇದೀಗ ಕರ್ನಾಟಕದಲ್ಲೂ ಸಹ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆಗೆ ದಿನಾಂಕ ನಿಗದಿಯಾಗಿದೆ. ಹೀಗಾಗಿ ಜಿಬಿಎ ಚುನಾವಣೆಗೆ ಎಸ್​ಐಆರ್​ ಅಡ್ಡಿಯಾಗುವ ಆತಂಕ ಎದುರಾಗಿದೆ.

ಬೆಂಗಳೂರು, (ಮೇ 14): ಗ್ರೇಟರ್‌ ಬೆಂಗಳೂರು ಪ್ರಾಧಿಕಾರ (GBA) ವ್ಯಾಪ್ತಿಯ ಐದು ಮಹಾನಗರ ಪಾಲಿಕೆಗಳ ಚುನಾವಣೆಗೆ ಮತ್ತಷ್ಟು ವಿಳಂಬ ಆಗುವ ಸಾಧ್ಯತೆ ದಟ್ಟವಾಗಿದೆ. ಚುನಾವಣೆ ಮುಂದೂಡಿಕೆಗೆ ಸಕಾರಣಗಳೊಂದಿಗೆ ಸುಪ್ರೀಂ ಕೋರ್ಟ್‌ ಮೊರೆ ಹೋಗಲು ರಾಜ್ಯ ಸರ್ಕಾರ ತಯಾರಿ ಮಾಡಿಕೊಂಡಿದೆ. ಇದರ ನಡುವೆ ಇದೀಗ ಕರ್ನಾಟಕದಲ್ಲೂ ಸಹ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆಗೆ ದಿನಾಂಕ ನಿಗದಿಯಾಗಿದೆ. ಹೀಗಾಗಿ ಜಿಬಿಎ ಚುನಾವಣೆಗೆ ಎಸ್​ಐಆರ್​ ಅಡ್ಡಿಯಾಗುವ ಆತಂಕ ಎದುರಾಗಿದೆ.

SIR ಪ್ರಕ್ರಿಯೆಗೆ ಹೆಚ್ಚಿನ ಆಡಳಿತ ಸಿಬ್ಬಂದಿ, ಅಧಿಕಾರಿಗಳ ಬಳಕೆ ಮಾಡಲಾಗುತ್ತಿದೆ. ಇದರಿಂದ ಜಿಬಿಎ ಚುನಾವಣೆಗೆ ಸಿಬ್ಬಂದಿ ವರ್ಗದ ಕೊರತೆ ಎದುರಾಗುವ ಸಾಧ್ಯೆಗಳಿವೆ. ಈ ಹಿನ್ನೆಲೆಯಲ್ಲಿ ಜಿಬಿಎ ಚುನಾವಣೆ ಮುಂದೂಡಿಕೆಗೆ ಸರ್ಕಾರ ಹಾಗೂ ರಾಜ್ಯ ಚುನಾವಣಾ ಆಯೋಗದಿಂದಲೇ ಕೋರ್ಟ್​ಗೆ ಮನವರಿಕೆ ಮಾಡಿಕೊಡುವ ಸಾಧ್ಯತೆಗಳಿವೆ.

ಇದನ್ನೂ ಓದಿ: Karnataka SIR: ಕರ್ನಾಟಕದಲ್ಲೂ ಮತದಾರರ ಪಟ್ಟಿ ಪರಿಷ್ಕರಣೆ: ಎಂದಿನಿಂದ? ಹೇಗೆಲ್ಲಾ ನಡೆಯುತ್ತೆ? ಇಲ್ಲಿದೆ ವಿವರ

Published on: May 14, 2026 05:52 PM

Follow Us
Prasanna Gaonkar
Prasanna Gaonkar

ಹುಟ್ಟೂರು ಯಲ್ಲಾಪುರ, ಬೆಳೆದೂರು ದಾಂಡೇಲಿಯ ದಟ್ಟ ಕಾಡುಗಳ ನಡುವೆ. ರವಿ ಬೆಳಗೆರೆ ಎಂಬ ಅಕ್ಷರ ರಾಕ್ಷಸನ ಕಟ್ಟಾಭಿಮಾನದಿಂದ ಹಾಳಾಗಿ, ಸೈನ್ಸ್ ನಲ್ಲಿ ಡಿಗ್ರಿ ಪಡೆದು ಜರ್ನಲಿಸಂಗೆ ಹಿಂಬದಿ ಕಿಟಕಿಯಿಂದ ನುಸುಳಿದ್ದು 2010 ರ ಅಕ್ಟೋಬರ್ ನಲ್ಲಿ. ಉಡುಪಿಯಲ್ಲಿ ಮೊದಲ ಪತ್ರಿಕೋದ್ಯಮ ಕರ್ತವ್ಯ ಪ್ರಾರಂಭಿಸಿದ್ದು 2010 ರಲ್ಲಿಯೇ. ಜನಶ್ರೀ ನ್ಯೂಸ್ ಮೊದಲು ಅನ್ನ ನೀಡಿದ ಸಂಸ್ಥೆ. ಉಡುಪಿ ಜಿಲ್ಲಾ ವರದಿಗಾರನಾಗಿ ಮೂರು ವರ್ಷ ಕೆಲಸ ಮಾಡಿ 2013 ರ ಅಂತ್ಯಕ್ಕೆ ಸಮಯ ನ್ಯೂಸ್ ಮೂಲಕ ಬೆಂಗಳೂರಿಗೆ ಎಂಟ್ರಿ. ಬಿಗ್ ೩, ಬೆಂಗಳೂರ್ ಲೈವ್, ಸಮಯ ಸಕಾಲ ಕಾರ್ಯಕ್ರಮದಲ್ಲಿ ವರದಿಗಾರಿಕೆ ಮಾಡಿದ ಖುಷಿ. 2014 ರ ಡಿಸೆಂಬರ್ ನಿಂದ ಟಿವಿ9 ನಲ್ಲಿ ಕೆಲಸ ಪ್ರಾರಂಭ. ಟಿವಿ9 ನಲ್ಲಿ ಮೊದಲು ಮೆಟ್ರೋ ರಿಪೋರ್ಟಿಂಗ್ ಮೂಲಕ ಬೆಂಗಳೂರು ಸುತ್ತುವ ಅರಿಯುವ ರಾಜಧಾನಿಯ ನಾಡಿಮಿಡಿತ ಹುಡುಕುವ ಅವಕಾಶ. ಮೆಟ್ರೋ ಬ್ಯೂರೋ ದಲ್ಲಿ ಶೈಕ್ಷಣಿಕ ಹಾಗೂ ಬಿಬಿಎಂಪಿ ವರದಿಗಾರಿಕೆ. ಚಪ್ಪಲಿಯಿಂದ ಹಿಡಿದು ಚಾದರ್ ತನಕ ಸ್ಟೋರಿ ಮಾಡಿದ ಅನುಭವ. ಮೆಟ್ರೋ ಟೀಂ ನಿಂದ ರಾಜಕೀಯ ವರದಿಗಾರಿಕೆಗೆ ಶಿಫ್ಟ್ ಆದ ತಕ್ಷಣ- ಮುಂದುವರಿದಿದೆ ನಿರಂತರ ಪಯಣ. ಕಥೆ, ಕಾದಂಬರಿ, ಕವನ, ಸಿನಿಮಾ, ಸುತ್ತಾಟ, ಆಗಾಗ ಕಿತ್ತಾಟ, ಸ್ನೇಹಿತರೊಂದಿಗೆ ಒಡನಾಟ ಇವೆಲ್ಲ ಮಾಮೂಲಿ ದಿನಚರಿ. ಇವತ್ತಿಗೂ ಬರವಣಿಗೆಯೊಂದೇ ಖುಷಿ ಕೊಡುವ ಖರ್ಜೂರ. ಸ್ಟಾಕ್ ಮಾರ್ಕೆಟ್ ನಲ್ಲಿ 2019 ರಿಂದ ಆ್ಯಕ್ಟಿವ್.

Read More