ಗ್ರೇಟರ್ ಬೆಂಗಳೂರು ಕಂದಾಯ ಆಯುಕ್ತ ಮುನೀಶ್ ಮೌದ್ಗಿಲ್ ವಿರುದ್ಧ ಸಿಡಿದೆದ್ದ ನೌಕರರು

Updated on: Dec 23, 2025 | 3:39 PM

ಗ್ರೇಟರ್ ಬೆಂಗಳೂರು ಪ್ರಾಧಿಕಾರದ (Greater Bengaluru Authority) ಕಂದಾಯ ವಿಭಾಗದ ವಿಶೇಷ ಆಯುಕ್ತ ಮುನೀಶ್ ಮೌದ್ಗಿಲ್ (Munish Moudgil)​ ವಿರುದ್ಧ ನೌಕರರು ಹಾಗೂ ಅಧಿಕಾರಿಗಳ ಪಿತ್ತ ನೆತ್ತಿಗೇರಿದ್ದು, ಕಿರುಕುಳ ಹಾಗೂ ದುರುದ್ದೇಶಪೂರ್ವಕವಾಗಿ ಅಧಿಕಾರಿಗಳನ್ನು ಅಮಾನತು ಮಾಡುವ ಕೆಲಸಕ್ಕೆ ಹಿರಿಯ ಅಧಿಕಾರಿಗಳು ಮುಂದಾಗಿದ್ದಾರೆ ಎಂದು GBA ನೌಕರರು ಪ್ರತಿಭಟನೆಯ ಹಾದಿ ತುಳಿದಿದ್ದಾರೆ.

ಬೆಂಗಳೂರು, (ಡಿಸೆಂಬರ್ 23): ಗ್ರೇಟರ್ ಬೆಂಗಳೂರು ಪ್ರಾಧಿಕಾರದ (Greater Bengaluru Authority) ಕಂದಾಯ ವಿಭಾಗದ ವಿಶೇಷ ಆಯುಕ್ತ ಮುನೀಶ್ ಮೌದ್ಗಿಲ್ (Munish Moudgil)​ ವಿರುದ್ಧ ನೌಕರರು ಹಾಗೂ ಅಧಿಕಾರಿಗಳ ಪಿತ್ತ ನೆತ್ತಿಗೇರಿದ್ದು, ಕಿರುಕುಳ ಹಾಗೂ ದುರುದ್ದೇಶಪೂರ್ವಕವಾಗಿ ಅಧಿಕಾರಿಗಳನ್ನು ಅಮಾನತು ಮಾಡುವ ಕೆಲಸಕ್ಕೆ ಹಿರಿಯ ಅಧಿಕಾರಿಗಳು ಮುಂದಾಗಿದ್ದಾರೆ ಎಂದು GBA ನೌಕರರು ಪ್ರತಿಭಟನೆಯ ಹಾದಿ ತುಳಿದಿದ್ದಾರೆ. GBA ದಕ್ಷಿಣ ವಲಯ ಉಪ ಆಯುಕ್ತ ಡಿ.ಕೆ.ಬಾಬು ಮತ್ತು ಕಂದಾಯ ಅಧಿಕಾರಿ ಶ್ರೀಮತಿ ವರಲಕ್ಷ್ಮಿ ರವರನ್ನು ಕಾನೂನು ಬಾಹಿರವಾಗಿ ಅಮಾನತ್ತು ಮಾಡಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿರುವುದನ್ನ ಖಂಡಿಸಿ ಜಿಬಿಎ-ಪಾಲಿಕೆಗಳ ಅಧಿಕಾರಿ ಮತ್ತು ನೌಕರರ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ತುರ್ತು ಸಭೆ ಮತ್ತು ಮೇಣದ ದೀಪ ಹಚ್ಚುವ ಮೂಲಕ ಮೌನ ಪ್ರತಿಭಟನೆ ನಡೆಸಲಾಯಿತು. ಒಂದು ವೇಳೆ ನಮ್ಮ ಆಗ್ರಹಕ್ಕೆ GBA ಮಣಿಯದೇ ಇದ್ದರೆ ಹೋರಾಟ ತೀವ್ರಗೊಳಿಸಲು ಸಂಘ ನಿರ್ಧರಿಸಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.