Loading video

ಗೃಹಲಕ್ಷ್ಮೀಯರಿಗೆ ಗುಡ್​ನ್ಯೂಸ್​: 2 ತಿಂಗಳ ಹಣ ಒಂದೇ ಸಲಕ್ಕೆ ಜಮಾ…!

|

Updated on: Mar 24, 2025 | 10:38 PM

ಗೃಹಲಕ್ಷ್ಮಿ ಯೋಜನೆಯ ಎರಡು ಕಂತಿನ ಹಣ ಬಿಡುಗಡೆಗಾಗಿ ಕಾಯುತ್ತಿರುವ ಮಹಿಳಾ ಫಲಾನುಭವಿಗಳಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್​ ಸಿಹಿ ಸುದ್ದಿ ನೀಡಿದ್ದಾರೆ. ಜನವರಿ ಹಾಗೂ ಫೆಬ್ರವರಿ ತಿಂಗಳ ಗೃಹ ಲಕ್ಷ್ಮಿ ಹಣ ಒಂದೇ ಸಲಕ್ಕೆ ಹಾಕಲಾಗುತ್ತದೆ. ಈ ಬಗ್ಗೆ ಸ್ವತಃ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವ ಲಕ್ಷ್ಮೀ ಹೆಬ್ಬಾಳ್ಕರ್​​ ಸ್ಪಷ್ಟಪಡಿಸಿದ್ದಾರೆ. ಹಾಗಾದ್ರೆ, ಒಂದೇ ಸಲಕ್ಕೆ ಎರಡು ಕಂತಿನ ಹಣ ಯಾವಾಗ ಹಾಕುತ್ತಾರೆ ಎನ್ನುವುದನ್ನು ಅವರ ಬಾಯಿಂದಲೇ ಕೇಳಿ.

ಬೆಳಗಾವಿ, (ಮಾರ್ಚ್‌ 24): ಗೃಹಲಕ್ಷ್ಮಿ ಯೋಜನೆಯ ಎರಡು ಕಂತಿನ ಹಣ ಬಿಡುಗಡೆಗಾಗಿ ಮಹಿಳಾ ಫಲಾನುಭವಿಗಳು ಕಾಯುತ್ತಿದ್ದಾರೆ. ಈಗಾಗಲೇ ಗೃಹ ಲಕ್ಷ್ಮಿ ಯೋಜನೆಯ ಹಣ ಬಿಡುಗಡೆ ತಡವಾದ ಹಿನ್ನೆಲೆಯಲ್ಲಿ ವಿಪಕ್ಷ ನಾಯಕರು ಹಾಗೂ ರಾಜ್ಯದ ಮಹಿಳೆಯರು ರಾಜ್ಯ ಸರ್ಕಾರದ ವಿರುದ್ಧ ಅಸಮಾಧಾನ ಹೊರ ಹಾಕಿದ್ದರು. ಇದೀಗ 16 ಕಂತಿನ ಹಣವನ್ನ ಬಿಡುಗಡೆ ಮಾಡಿದ್ದು, ಇನ್ನೂ ಜನವರಿ ಹಾಗೂ ಫೆಬ್ರವರಿ ತಿಂಗಳ ಗೃಹ ಲಕ್ಷ್ಮಿ ಹಣ ಒಂದೇ ಸಲಕ್ಕೆ ಹಾಕಲಾಗುತ್ತದೆ. ಈ ಬಗ್ಗೆ ಸ್ವತಃ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವ ಲಕ್ಷ್ಮೀ ಹೆಬ್ಬಾಳ್ಕರ್​​ ಸ್ಪಷ್ಟಪಡಿಸಿದ್ದಾರೆ. ಮಾರ್ಚ್ 31ರ ನಂತರ ಎರಡು ತಿಂಗಳ ಹಣವನ್ನು ಒಂದೇ ಸಲಕ್ಕೆ ಹಾಕುವುದಾಗಿ ಹೇಳಿದ್ದಾರೆ.