ಮದುವೆ ಹಿಂದಿನ ರಾತ್ರಿ ಡ್ಯಾನ್ಸ್​ ಮಾಡುವಾಗ ಹೃದಯಾಘಾತದಿಂದ ಮದುಮಗ ಸಾವು!

ಮದುವೆ ಹಿಂದಿನ ರಾತ್ರಿ ಡ್ಯಾನ್ಸ್​ ಮಾಡುವಾಗ ಹೃದಯಾಘಾತದಿಂದ ಮದುಮಗ ಸಾವು!

ಸುಷ್ಮಾ ಚಕ್ರೆ
|

Updated on: Nov 19, 2024 | 9:50 PM

ಉತ್ತರ ಪ್ರದೇಶದ ಹತ್ರಾಸ್‌ನಲ್ಲಿ ಮದುವೆಗೆ ಒಂದು ದಿನ ಮೊದಲು ಸಂಗೀತ್ ಫಂಕ್ಷನ್‌ನಲ್ಲಿ ಡ್ಯಾನ್ಸ್ ಮಾಡುತ್ತಿರುವಾಗ ವರ ಹೃದಯಾಘಾತದಿಂದ ಸಾವನ್ನಪ್ಪಿದ್ದಾನೆ. ಈ ಘಟನೆಯ ವಿಡಿಯೋ ವೈರಲ್ ಆಗಿದೆ. ಈ ದುರಂತ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

ಹತ್ರಾಸ್: ದಾರುಣ ಘಟನೆಯೊಂದರಲ್ಲಿ ಉತ್ತರ ಪ್ರದೇಶದ ಹತ್ರಾಸ್‌ನಲ್ಲಿ ಮದುವೆಗೆ ಒಂದು ದಿನ ಮೊದಲು ಮದುಮಗ ಸಂಬಂಧಿಕರೊಂದಿಗೆ ಡ್ಯಾನ್ಸ್ ಮಾಡುವಾಗ ಹೃದಯಾಘಾತಕ್ಕೆ ಒಳಗಾಗಿದ್ದಾರೆ. ಖುಷಿಯಿಂದ ಡ್ಯಾನ್ಸ್ ಮಾಡಿದ ಮದುಮಗ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಈ ದುರಂತ ಘಟನೆ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ವರನನ್ನು ಹತ್ರಾಸ್​ನ 22 ವರ್ಷದ ಶಿವಂ ಎಂದು ಗುರುತಿಸಲಾಗಿದ್ದು, ಆಗ್ರಾದ ನಿವಾಸಿ ಮೋಹಿನಿಯೊಂದಿಗೆ ಸೋಮವಾರ (ನವೆಂಬರ್ 18) ಅವರ ವಿವಾಹವನ್ನು ನಿಗದಿಪಡಿಸಲಾಗಿತ್ತು. ಭಾನುವಾರ ಸಂಜೆಯಿಂದಲೇ ವಿವಾಹ ಪೂರ್ವ ಕಾರ್ಯಕ್ರಮಗಳು ಆರಂಭವಾಗಿದ್ದು, ಅತಿಥಿಗಳೂ ಆಗಮಿಸಿದ್ದರು. ವರ ಭಾನುವಾರ ರಾತ್ರಿ ಸಂಬಂಧಿಕರ ಜೊತೆ ಉತ್ಸಾಹದಿಂದ ನೃತ್ಯ ಮಾಡುತ್ತಿದ್ದು, ನಂತರ ಕುರ್ಚಿಯ ಮೇಲೆ ಕುಳಿತುಕೊಳ್ಳಲು ಹೋಗಿದ್ದಾರೆ. ಅಲ್ಲಿ ಅವರು ಇದ್ದಕ್ಕಿದ್ದಂತೆ ಕುಸಿದು ಬಿದ್ದು ಮೃತಪಟ್ಟಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ