ಮದುಮಗ ಇದ್ದ ಜಾಗ್ವಾರ್ ಕಾರಿನಲ್ಲಿ ಬೆಂಕಿ, ಮುಂದೇನಾಯ್ತು? ವಿಡಿಯೋ ನೋಡಿ
ಕೋಟ್ಯಾಂತರ ರೂಪಾಯಿ ಮೌಲ್ಯದ ಐಷಾರಾಮಿ ಜಾಗ್ವಾರ್ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ತುಮಕೂರು ಜಿಲ್ಲೆಯ ಕುಣಿಗಲ್ನ ನಕ್ಷತ್ರ ಪ್ಯಾಲೇಸ್ ಕಲ್ಯಾಣ ಮಂಟಪದ ಬಳಿ ಈ ಘಟನೆ ನಡೆದಿದೆ.
ತುಮಕೂರು, (ನವೆಂಬರ್ 09): ಕೋಟ್ಯಾಂತರ ರೂಪಾಯಿ ಮೌಲ್ಯದ ಐಷಾರಾಮಿ ಜಾಗ್ವಾರ್ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ತುಮಕೂರು ಜಿಲ್ಲೆಯ ಕುಣಿಗಲ್ನ ನಕ್ಷತ್ರ ಪ್ಯಾಲೇಸ್ ಕಲ್ಯಾಣ ಮಂಟಪದ ಬಳಿ ಈ ಘಟನೆ ನಡೆದಿದೆ. ಮದುವೆಗೆಂದು ಬಂದಿದ್ದ ವರನ ಕಾರಿನಲ್ಲಿ ಬೆಂಕಿ ಹೊತ್ತಿಕೊಂಡಿದೆ. ಶಾರ್ಟ್ ಸರ್ಕ್ಯೂಟ್ ನಿಂದ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ವಿಷಯ ತಿಳಿದು ಕೂಡಲೇ ಸ್ಥಳಕ್ಕೆ ಅಗ್ನಿ ಶಾಮಕದಳ ಸಿಬ್ಬಂದಿ ದೌಡಾಯಿಸಿ ಬೆಂಕಿ ನಂದಿಸಿದ್ದಾರೆ. ಮದುಮಗ ಇದೇ ಕಾರಿನಲ್ಲಿ ಬಂದು ಕಲ್ಯಾಣ ಪಂಟಪದೊಳಗೆ ಹೋಗಿದ್ದಾನೆ. ಆಗ ನಿಂತಿದ್ದ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ.