ಬಾಗಲಕೋಟೆ: ತಾಳಿ ಕಟ್ಟಿದ ಕೆಲವೇ ಕ್ಷಣದಲ್ಲಿ ವರ ಹೃದಯಾಘಾತದಿಂದ ಸಾವು
ಸಂಭ್ರಮದಿಂದ ಗಿಜಿಗುಡುತ್ತಿದ್ದ ಮದುವೆ ಮನೆಯಲ್ಲಿ ಕೆಲವೇ ಕ್ಷಣಗಳಲ್ಲಿ ಸೂತಕದ ಛಾಯೆ ಆವರಿಸಿದೆ. ಇಂಥದ್ದೊಂದು ಅವಘಡ ಸಂಭವಿಸಬಹುದೆಂಬ ಸಣ್ಣ ಸುಳಿವು ಕೂಡ ಇಲ್ಲದ ಮನೆಯವರು, ನೆಂಟರಿಷ್ಟರು ಪರಿತಪಿಸುವಂತಾಗಿದೆ. ತಾಳಿ ಕಟ್ಟಿದ ಕೆಲವೇ ಕ್ಷಣಗಳಲ್ಲಿ ವರ ಹೃದಯಾಘಾತದಿಂದ ಮೃತಪಟ್ಟ ಹೃದಯ ವಿದ್ರಾವಕ ಘಟನೆಗೆ ಬಾಗಲಕೋಟೆ ಜಿಲ್ಲೆ ಜಮಖಂಡಿ ನಗರದ ನಂದಿಕೇಶ್ವರ ಕಲ್ಯಾಣಮಂಟಪ ಸಾಕ್ಷಿಯಾಯಿತು.
ಬಾಗಲಕೋಟೆ, ಮೇ 17: ಬಾಗಲಕೋಟೆ ಜಿಲ್ಲೆ ಜಮಖಂಡಿ ನಗರದ ನಂದಿಕೇಶ್ವರ ಕಲ್ಯಾಣಮಂಟಪದಲ್ಲಿ ಮದುವೆ ಸಮಾರಂಭವೊಂದು ನಡೆಯುತ್ತಿದ್ದು, ವಧುವಿಗೆ ತಾಳಿ ಕಟ್ಟಿದ ಕೆಲವೇ ಕ್ಷಣದಲ್ಲಿ ವರ ಹೃದಯಾಘಾತದಿಂದ ಮೃತಪಟ್ಟ ದಾರುಣ ಘಟನೆ ಸಂಭವಿಸಿದೆ. ಕುಂಬಾರಹಳ್ಳ ಗ್ರಾಮದ ನಿವಾಸಿ ಪ್ರವೀಣ ಕುರ್ನೆ ಎಂಬಾತನೇ ಮೃತ ದುರ್ದೈವಿ. ಕಲ್ಯಾಣಮಂಟಪದಲ್ಲಿ ಪ್ರವೀಣ ಕುರ್ನೆ ಹಾಗೂ ಯುವತಿಯ ಮದುವೆ ಸಮಾರಂಭ ನಡೆಯುತ್ತಿತ್ತು. ಆದರೆ, ಕೆಲವೇ ಕ್ಷಣದಲ್ಲಿ ಅಲ್ಲಿ ಸೂತಕದ ಛಾಯೆ ಆವರಿಸಿದೆ. ಪ್ರವೀಣ ಕುರ್ನೆ ರಾಜ್ಯ ಸೈಕ್ಲಿಂಗ್ ಸಂಘದ ಕಾರ್ಯದರ್ಶಿ ಶ್ರೀಶೈಲ ಕುರ್ನೆ ಪುತ್ರ.
ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published on: May 17, 2025 02:43 PM
Latest Videos
ಡಿಕೆ ಶಿವಕುಮಾರ್ ಹಾಗೂ ಕೆಎನ್ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ

