Loading video

ಯಡಿಯೂರಪ್ಪ ಮತ್ತು ಅನಂತಕುಮಾರ್ ನಡುವಿದ್ದ ಜಗಳ ಯಾವತ್ತೂ ಬೀದಿಗೆ ಬಂದಿರಲಿಲ್ಲ: ಡಿವಿ ಸದಾನಂದಗೌಡ

|

Updated on: Nov 28, 2024 | 1:39 PM

ತಾನು ಪಕ್ಷದ ರಾಜ್ಯಾಧ್ಯಕ್ಷನಾಗಿದ್ದಾಗ, 4 ಬಾರಿ ಮುಖ್ಯಮಂತ್ರಿಯಾಗಿದ್ದ ಬಿಎಸ್ ಯಡಿಯೂರಪ್ಪ ಮತ್ತು ದಿವಂಗತ ಅನಂತಕುಮಾರ್ ಅವರ ನಡುವೆ ಈಗಿನಕ್ಕಿಂತ ಪ್ರಬಲವಾದ ಗುಂಪುಗಾರಿಕೆ ಮತ್ತು ಆಂತರಿಕ ಗುದ್ದಾಟ ಜಾರಿಯಲ್ಲಿತ್ತು, ಅದರೆ ಅವರು ತಮ್ಮ ಜಗಳವನ್ನು ಯಾವತ್ತೂ ಬೀದಿಗೆ ತರಲಿಲ್ಲ ಎಂದು ಸದಾನಂದಗೌಡ ಹೇಳಿದರು.

ಬೆಂಗಳೂರು: ಪಕ್ಷದ ರಾಜ್ಯಾಧ್ಯನಾಗಿ ಮತ್ತು ರಾಜ್ಯದ ಮುಖ್ಯಮಂತ್ರಿಯಾಗಿ ಅಧಿಕಾರ ನಡೆಸಲು ತನಗೆ ಅವಕಾಶ ನೀಡಿದ ಪಕ್ಷಕ್ಕೆ ಇವತ್ತು ಒದಗಿಬಂದಿರುವ ಸ್ಥಿತಿ ಒಂದು ದುರಂತ ಮತ್ತು ನೋವಿನ ಸಂಗತಿ ಎಂದು ಬಿಜೆಪಿ ಹಿರಿಯ ನಾಯಕ ಡಿವಿ ಸದಾನಂದಗೌಡ ಹೇಳಿದರು. ವಕ್ಫ್ ವಿರುದ್ಧ ಬಸನಗೌಡ ಪಾಟೀಲ್ ಯತ್ನಾಳ್ ಅವರ ತಂಡ ನಡೆಸುತ್ತಿರುವ ಹೋರಾಟಕ್ಕಿಂತ ಪಕ್ಷದ ನಾಯಕ ನಡುವಿನ ಭಿನ್ನಮತವೇ ಹೆಚ್ಚು ಸದ್ದು ಮಾಡುತ್ತಿದೆ, ಇದು ಸರಿಯಲ್ಲ, ಪಕ್ಷದ ಕೋರ್ ಕಮಿಟಿ ಅಧ್ಯಕ್ಷನಾಗಿ ಹೈಕಮಾಂಡ್ ಗೆ ಎರಡು ಬಾರಿ ಪತ್ರ ಬರೆದರೂ ಅವರಿಂದ ಯಾವುದೇ ಕ್ರಮ ಜರುಗಿಲ್ಲ ಎಂದು ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  ವಕ್ಫ್ ಬೋರ್ಡ್ ವಿರುದ್ಧ ನಡೆಯುತ್ತಿರುವ ಹೋರಾಟದಲ್ಲಿ ವಿಜಯೇಂದ್ರ ಯಾವತ್ತೂ ಭಾಗಿಯಾಗಿಲ್ಲ: ಯತ್ನಾಳ್