ಗೃಹಜ್ಯೋತಿ ಪರಿಷ್ಕರಣೆ ಎಫೆಕ್ಟ್: ಜುಲೈ ತಿಂಗಳ ವಿದ್ಯುತ್ ಬಿಲ್ ವಿತರಣೆಯಲ್ಲಿ ಮಹತ್ವದ ಬದಲಾವಣೆ
ಮುಖ್ಯಾಂಶಗಳು
- ಗೃಹಜ್ಯೋತಿ ಯೋಜನೆಯ ಮರುಪರಿಶೀಲನೆ ಹಿನ್ನೆಲೆ
- ಜುಲೈನ ವಿದ್ಯುತ್ ಬಿಲ್ ವಿತರಣೆಯಲ್ಲಿ ಬದಲಾವಣೆ
- ಕಳೆದ 3 ತಿಂಗಳ ಸರಾಸರಿ ಆಧರಿಸಿ ಮೊತ್ತ ನಿರ್ಧಾರ
ಗೃಹಜ್ಯೋತಿ ಯೋಜನೆಯ ಮರುಪರಿಶೀಲನೆ ಆರಂಭವಾಗಿರುವ ಹಿನ್ನೆಲೆ ಜುಲೈ ತಿಂಗಳ ವಿದ್ಯುತ್ ಬಿಲ್‌ನಲ್ಲಿ ಮಹತ್ವದ ಬದಲಾವಣೆಗಳಾಗಲಿವೆ. ಕಳೆದ ಮೂರು ತಿಂಗಳ ಸರಾಸರಿ ಬಳಕೆಯ ಆಧಾರದ ಮೇಲೆ ಬಿಲ್ ವಿತರಣೆ ನಡೆಯಲಿದೆ. ಆ ಮೂಲಕ ಅನರ್ಹ ಫಲಾನುಭವಿಗಳನ್ನು ಗುರುತಿಸಿ, ಸೌಲಭ್ಯದಿಂದ ಹೊರಗಿಡುವ ಮೂಲಕ ಯೋಜನೆಯನ್ನು ಸಮರ್ಪಕವಾಗಿ ಜಾರಿಗೊಳಿಸುವ ಗುರಿ ಹೊಂದಿರುವ ಮಾಹಿತಿ ಇದೆ.
ಬೆಂಗಳೂರು, ಜುಲೈ 03: ಗೃಹಜ್ಯೋತಿ ಯೋಜನೆಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಮಹತ್ವದ ಮರುಪರಿಶೀಲನೆಯನ್ನು ಆರಂಭಿದ್ದು. ಈ ಪರಿಶೀಲನೆಯು ಜುಲೈ ತಿಂಗಳ ವಿದ್ಯುತ್ ಬಿಲ್ ವಿತರಣೆಯಲ್ಲಿ ಬದಲಾವಣೆಗಳನ್ನು ತರಲಿದೆ. ಪ್ರಮುಖವಾಗಿ, ಫಲಾನುಭವಿಗಳ ವಿದ್ಯುತ್ ಬಳಕೆಯ ಕಳೆದ ಮೂರು ತಿಂಗಳ ಸರಾಸರಿಯನ್ನು ಆಧರಿಸಿ ಜುಲೈ ತಿಂಗಳ ಬಿಲ್ ಅನ್ನು ನಿರ್ಧರಿಸಲಾಗುತ್ತದೆ. ಇದರರ್ಥ, ಜುಲೈ ತಿಂಗಳ ನಿಯಮಿತ ಮೀಟರ್ ರೀಡಿಂಗ್ ಮಾತ್ರವಲ್ಲದೆ, ಹಿಂದಿನ ತಿಂಗಳ ಬಳಕೆಯ ಮಾದರಿಗಳನ್ನೂ ಪರಿಗಣಿಸಲಾಗುತ್ತದೆ ಎನ್ನಲಾಗಿದೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.
Published on: Jul 03, 2026 03:16 PM
Follow Us
Latest Videos
ಕೋಲಾರದ ಕುರುಬರಪೇಟೆಯಲ್ಲಿ ದೇಗುಲದ ಆವರಣದಲ್ಲಿ ಎಸ್ಐಆರ್ ಪ್ರಕ್ರಿಯೆ!
ಕೊಪ್ಪಳದ ಅಂಜನಾದ್ರಿ ದೇಗುಲಕ್ಕೆ ರಾಹುಲ್ ದ್ರಾವಿಡ್ ದಂಪತಿ ಭೇಟಿ
ಪತ್ನಿ, ತಮ್ಮನ ಜತೆ ಮಾಜಿ ಸಿಎಂ ಸಿದ್ದರಾಮಯ್ಯ ಮನೆಗೆ ತೆರಳಿ ಡಿಕೆಶಿ ಮಾತುಕತೆ
ರಾಮನಗರದ ಕಲ್ಯಾಣ ಮಂಟಪದಲ್ಲಿ SIR ಆರೋಪಕ್ಕೆ ಗೃಹ ಸಚಿವ ಖರ್ಗೆ ಏನಂದ್ರು ನೋಡಿ

