ಗೃಹಜ್ಯೋತಿ ಪರಿಷ್ಕರಣೆ ಎಫೆಕ್ಟ್​​: ಜುಲೈ ತಿಂಗಳ ವಿದ್ಯುತ್ ಬಿಲ್ ವಿತರಣೆಯಲ್ಲಿ ಮಹತ್ವದ ಬದಲಾವಣೆ

Updated on: Jul 03, 2026 | 3:17 PM

ಮುಖ್ಯಾಂಶಗಳು

  • ಗೃಹಜ್ಯೋತಿ ಯೋಜನೆಯ ಮರುಪರಿಶೀಲನೆ ಹಿನ್ನೆಲೆ
  • ಜುಲೈನ ವಿದ್ಯುತ್ ಬಿಲ್ ವಿತರಣೆಯಲ್ಲಿ ಬದಲಾವಣೆ
  • ಕಳೆದ 3 ತಿಂಗಳ ಸರಾಸರಿ ಆಧರಿಸಿ ಮೊತ್ತ ನಿರ್ಧಾರ

ಗೃಹಜ್ಯೋತಿ ಯೋಜನೆಯ ಮರುಪರಿಶೀಲನೆ ಆರಂಭವಾಗಿರುವ ಹಿನ್ನೆಲೆ ಜುಲೈ ತಿಂಗಳ ವಿದ್ಯುತ್ ಬಿಲ್‌ನಲ್ಲಿ ಮಹತ್ವದ ಬದಲಾವಣೆಗಳಾಗಲಿವೆ. ಕಳೆದ ಮೂರು ತಿಂಗಳ ಸರಾಸರಿ ಬಳಕೆಯ ಆಧಾರದ ಮೇಲೆ ಬಿಲ್ ವಿತರಣೆ ನಡೆಯಲಿದೆ. ಆ ಮೂಲಕ ಅನರ್ಹ ಫಲಾನುಭವಿಗಳನ್ನು ಗುರುತಿಸಿ, ಸೌಲಭ್ಯದಿಂದ ಹೊರಗಿಡುವ ಮೂಲಕ ಯೋಜನೆಯನ್ನು ಸಮರ್ಪಕವಾಗಿ ಜಾರಿಗೊಳಿಸುವ ಗುರಿ ಹೊಂದಿರುವ ಮಾಹಿತಿ ಇದೆ.

ಬೆಂಗಳೂರು, ಜುಲೈ 03: ಗೃಹಜ್ಯೋತಿ ಯೋಜನೆಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಮಹತ್ವದ ಮರುಪರಿಶೀಲನೆಯನ್ನು ಆರಂಭಿದ್ದು. ಈ ಪರಿಶೀಲನೆಯು ಜುಲೈ ತಿಂಗಳ ವಿದ್ಯುತ್ ಬಿಲ್ ವಿತರಣೆಯಲ್ಲಿ ಬದಲಾವಣೆಗಳನ್ನು ತರಲಿದೆ. ಪ್ರಮುಖವಾಗಿ, ಫಲಾನುಭವಿಗಳ ವಿದ್ಯುತ್ ಬಳಕೆಯ ಕಳೆದ ಮೂರು ತಿಂಗಳ ಸರಾಸರಿಯನ್ನು ಆಧರಿಸಿ ಜುಲೈ ತಿಂಗಳ ಬಿಲ್ ಅನ್ನು ನಿರ್ಧರಿಸಲಾಗುತ್ತದೆ. ಇದರರ್ಥ, ಜುಲೈ ತಿಂಗಳ ನಿಯಮಿತ ಮೀಟರ್ ರೀಡಿಂಗ್ ಮಾತ್ರವಲ್ಲದೆ, ಹಿಂದಿನ ತಿಂಗಳ ಬಳಕೆಯ ಮಾದರಿಗಳನ್ನೂ ಪರಿಗಣಿಸಲಾಗುತ್ತದೆ ಎನ್ನಲಾಗಿದೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

 

 

Published on: Jul 03, 2026 03:16 PM
Loading...
Unable to load recommendations.
Follow Us
ಪ್ರಸನ್ನ ಹೆಗಡೆ

ಪ್ರಸನ್ನ ಹೆಗಡೆ ಹುಟ್ಟಿದ್ದು ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕು. 9 ವರ್ಷಗಳಿಂದ ಪತ್ರಕರ್ತನಾಗಿ ಕೆಲಸ ಮಾಡಿರುವ ಅನುಭವವಿದೆ. ಮುದ್ರಣ, ಟಿವಿ ಮತ್ತು ಡಿಜಿಟಲ್​ ಮಾಧ್ಯಮಗಳಲ್ಲಿ ವಿವಿಧ ಜವಾಬ್ದಾರಿ ನಿಭಾಯಿಸಿದ್ದೇನೆ. ರಾಜಕೀಯ, ಸಿನಿಮಾ ವಿಷಯಗಳಲ್ಲಿ ಹೆಚ್ಚಿನ ಆಸಕ್ತಿ ಇದೆ. ಕವನಗಳ ರಚನೆ, ಪುಸ್ತಕಗಳನ್ನ ಓದುವುದು ನೆಚ್ಚಿನ ಹವ್ಯಾಸಗಳು.

Read More