ಗೃಹ ಜ್ಯೋತಿ ಯೋಜನೆ ಚಾಲನೆ ಕಾರ್ಯಕ್ರಮಕ್ಕೆ ಕಲಬುರಗಿಗೆ ಆಗಮಿಸಿದ ಮಲ್ಲಿಕಾರ್ಜುನ ಖರ್ಗೆಗೆ ಸಚಿವರು, ಶಾಸಕರಿಂದ ಸ್ವಾಗತ
Gruha Jyoti scheme inauguration: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಕಲಬುರಗಿ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಮತ್ತು ಇಂಧನ ಸಚಿವ ಕೆಜೆ ಜಾರ್ಜ್ ವಿಮಾನ ನಿಲ್ದಾಣದಲ್ಲಿ ಕಾಂಗ್ರೆಸ್ ಅಧ್ಯಕ್ಷರನ್ನು ಸ್ವಾಗತಿಸಿದರು.
ಕಲಬುರಗಿ: ಬಿಸಿಲುನಾಡು ಕಲಬುರಗಿಯಲ್ಲಿ ಇಂದು ಗೃಹ ಜ್ಯೋತಿ ಯೋಜನೆಗೆ (Gruha Jyoti scheme) ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಲು ಸಕಲ ಸಿದ್ಧತೆಗಳು ಪೂರ್ಣಗೊಂಡಿವೆ. ಕಾರ್ಯಕ್ರಮದಲ್ಲಿ ಭಾಗಿಯಾಗಲಿ ಅಖಿಲ ಭಾರತ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಕೂಡ ದೆಹಲಿಯಿಂದ ವಿಶೇಷ ವಿಮಾನವೊಂದರಲ್ಲಿ ಕಲಬುರಗಿಗೆ ಆಗಮಿಸಿದರು. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಕಲಬುರಗಿ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ (Priyank Kharge) ಮತ್ತು ಇಂಧನ ಸಚಿವ ಕೆಜೆ ಜಾರ್ಜ್ (KJ George) ವಿಮಾನ ನಿಲ್ದಾಣದಲ್ಲಿ ಕಾಂಗ್ರೆಸ್ ಅಧ್ಯಕ್ಷರನ್ನು ಸ್ವಾಗತಿಸಿದರು. ಚಿತ್ರಗಳಲ್ಲಿ ಅಫ್ಜಲಪುರ ಶಾಸಕ ಎಂ ವೈ ಪಾಟೀಲ್, ವಿಧಾನ ಪರಿಷತ್ ಸದಸ್ಯ ಅಲ್ಲಮಪ್ರಭು ಪಾಟೀಲ್, ಮಾಜಿ ಸಚಿವ ರೇವು ನಾಯಕ್ ಬೆಳಮಗಿ ಮೊದಲಾದವರನ್ನು ನೋಡಬಹುದು.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Latest Videos