Gruha Jyoti Scheme: ಗೃಹಜ್ಯೋತಿ ಪರಿಷ್ಕರಣೆ ಅಲ್ಲ; ಇದು ಮಾಹಿತಿ ಸಂಗ್ರಹ ಅಷ್ಟೇ ಎಂದ ಚೆಸ್ಕಾಂ MD ಅರ್ಚನಾ!
ಕರ್ನಾಟಕದಲ್ಲಿ ಗೃಹಜ್ಯೋತಿ ಯೋಜನೆಯ ಫಲಾನುಭವಿಗಳಿಂದ ರಾಜ್ಯಾದ್ಯಂತ ಮಾಹಿತಿ ಸಂಗ್ರಹಣೆ ಕಾರ್ಯ ಭರದಿಂದ ಸಾಗಿದೆ. ಮೈಸೂರಿನ ವಿಜಯನಗರ ಬಡಾವಣೆಯಲ್ಲಿ ನಡೆಯುತ್ತಿರುವ ಈ ಕಾರ್ಯದ ಎರಡನೇ ದಿನದ ಮೇಲ್ವಿಚಾರಣೆಯನ್ನು ಚೆಸ್ಕಾಂ ವ್ಯವಸ್ಥಾಪಕ ನಿರ್ದೇಶಕಿ ಅರ್ಚನಾ ಅವರು ನಡೆಸಿದ್ದಾರೆ. ಇದು ಗೃಹಜ್ಯೋತಿ ಯೋಜನೆಯ ಪರಿಷ್ಕರಣೆಯಲ್ಲ, ಬದಲಾಗಿ ಭವಿಷ್ಯದ ಯೋಜನೆಗಳ ಸಮರ್ಪಕ ಅನುಷ್ಠಾನಕ್ಕಾಗಿ ಮತ್ತು ಫಲಾನುಭವಿಗಳ ಕುರಿತು ಹೆಚ್ಚಿನ ಮಾಹಿತಿ ಪಡೆಯಲು ನಡೆಸುತ್ತಿರುವ ಒಂದು ವ್ಯವಸ್ಥಿತ ಮಾಹಿತಿ ಕಲೆಹಾಕುವ ಪ್ರಕ್ರಿಯೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.
ಮೈಸೂರು, ಜುಲೈ 03: ಕರ್ನಾಟಕದಲ್ಲಿ ಗೃಹಜ್ಯೋತಿ ಯೋಜನೆಯ ಫಲಾನುಭವಿಗಳಿಂದ ರಾಜ್ಯಾದ್ಯಂತ ಮಾಹಿತಿ ಸಂಗ್ರಹಣೆ ಕಾರ್ಯ ಭರದಿಂದ ಸಾಗಿದೆ. ಮೈಸೂರಿನ ವಿಜಯನಗರ ಬಡಾವಣೆಯಲ್ಲಿ ನಡೆಯುತ್ತಿರುವ ಈ ಕಾರ್ಯದ ಎರಡನೇ ದಿನದ ಮೇಲ್ವಿಚಾರಣೆಯನ್ನು ಚೆಸ್ಕಾಂ ವ್ಯವಸ್ಥಾಪಕ ನಿರ್ದೇಶಕಿ ಅರ್ಚನಾ ಅವರು ನಡೆಸಿದ್ದಾರೆ. ಇದು ಗೃಹಜ್ಯೋತಿ ಯೋಜನೆಯ ಪರಿಷ್ಕರಣೆಯಲ್ಲ, ಬದಲಾಗಿ ಭವಿಷ್ಯದ ಯೋಜನೆಗಳ ಸಮರ್ಪಕ ಅನುಷ್ಠಾನಕ್ಕಾಗಿ ಮತ್ತು ಫಲಾನುಭವಿಗಳ ಕುರಿತು ಹೆಚ್ಚಿನ ಮಾಹಿತಿ ಪಡೆಯಲು ನಡೆಸುತ್ತಿರುವ ಒಂದು ವ್ಯವಸ್ಥಿತ ಮಾಹಿತಿ ಕಲೆಹಾಕುವ ಪ್ರಕ್ರಿಯೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.
ಚೆಸ್ಕಾಂ ಸಿಬ್ಬಂದಿ ಮನೆ ಮನೆಗೆ ತೆರಳಿ ಒಟ್ಟು 11 ಅಂಶಗಳ ಮಾಹಿತಿಯನ್ನು ಸಂಗ್ರಹಿಸುತ್ತಿದ್ದಾರೆ. ಆಧಾರ್ ಸಂಖ್ಯೆ, ಮೊಬೈಲ್ ಸಂಖ್ಯೆ, ಪಡಿತರ ಚೀಟಿ ವಿವರಗಳು ಹಾಗೂ ಮನೆಯ ಮಾಲೀಕತ್ವ (ಸ್ವಂತ ಮನೆ/ಬಾಡಿಗೆ ಮನೆ) ಇತ್ಯಾದಿ ಮಾಹಿತಿಗಳನ್ನು ಕೇಳಲಾಗುತ್ತಿದೆ. ಜಾತಿ ಮತ್ತು ಪ್ಯಾನ್ ಕಾರ್ಡ್ ಮಾಹಿತಿಗಳು ಕಡ್ಡಾಯವಲ್ಲ ಎಂದು ಅರ್ಚನಾ ಅವರು ತಿಳಿಸಿದ್ದಾರೆ. ಮತದಾರರ ಗುರುತಿನ ಚೀಟಿ ಮಾಹಿತಿ ಮಾತ್ರ ಕಡ್ಡಾಯವಾಗಿದೆ.
ಕರ್ನಾಟಕದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಫುಟ್ಪಾತ್ ವ್ಯಾಪಾರಿಗಳಿಗೆ ಮತ್ತೆ ಸಚಿವರ ಖಡಕ್ ವಾರ್ನಿಂಗ್
ಇಂದು ಈ ರಾಶಿಯವರು ಕೋಪ, ಆವೇಶಗಳನ್ನು ಬದಿಗಿಟ್ಟರೆ ಕೆಲಸ ಕಾರ್ಯಗಳಲ್ಲಿ ಶುಭ
1800 ಕಿ.ಮೀ ಸೈಕಲ್ ಜರ್ನಿ; ಅಭಿಮಾನಿಯ ಅಭಿಮಾನಕ್ಕೆ ಹಾರ್ದಿಕ್ ಫಿದಾ
ಕಲ್ಲು ಕ್ವಾರಿ ದುರಂತ: ಗಾಯಾಳುಗಳ ಆರೋಗ್ಯ ವಿಚಾರಿಸಿ ಡಿಕೆಶಿ ಹೇಳಿದ್ದೇನು?

