Gruha Lakshmi Launch Live: ಮೈಸೂರಿನಲ್ಲಿ ಗೃಹಲಕ್ಷ್ಮಿ ಯೋಜನೆ ಉದ್ಘಾಟನೆ ನೇರ ಪ್ರಸಾರ

Gruha Lakshmi Launch Live: ಮೈಸೂರಿನಲ್ಲಿ ಗೃಹಲಕ್ಷ್ಮಿ ಯೋಜನೆ ಉದ್ಘಾಟನೆ ನೇರ ಪ್ರಸಾರ

ರಮೇಶ್ ಬಿ. ಜವಳಗೇರಾ
| Updated By: Digi Tech Desk

Updated on:Aug 30, 2023 | 11:48 AM

Gruha Lakshmi Scheme Launch Live Streaming: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆ ಅಂದ್ರೆ ಅದು ಗೃಹಲಕ್ಷ್ಮಿ. ರಾಜ್ಯ ಸರ್ಕಾರದ ೫ ಗ್ಯಾರಂಟಿಗಳಲ್ಲೆ ಅತಿ ಹೆಚ್ಚು ನಿರೀಕ್ಷೆ ಇದ್ದ ಯೋಜನೆ ಗೃಹಲಕ್ಷ್ಮಿ. ಇಂದು(ಆಗಸ್ಟ್ 30) ಗೃಹಲಕ್ಷ್ಮಿ ಯೋಜನೆಗೆ ಅರಮನೆ ನಗರಲ್ಲಿ ಚಾಲನೆ ಸಿಗಲಿದೆ. ಇದಕ್ಕಾಗಿ ಸಾಂಸ್ಕೃತಿಕ ನಗರಿ ಶೃಂಗಾರಗೊಂಡಿದ್ದು, ಕಾರ್ಯಕ್ರವದ ಲೈವ್ ಇಲ್ಲಿದೆ.​

ಮೈಸೂರು, (ಆಗಸ್ಟ್ 30); ರಾಜ್ಯದ ಮಹಿಳೆಯರು ಕಾತರದಿಂದ ಕಾಯುತ್ತಿದ ಕ್ಷಣ ಬಂದೇ ಬಿಟ್ಟಿದೆ. ರಾಜ್ಯ ಸರ್ಕಾರದ 5 ಗ್ಯಾರಂಟಿಗಳಲ್ಲಿ ಪ್ರಮುಖವಾದ, ಮನೆಯ ಯಜಮಾನಿಗೆ 2 ಸಾವಿರ ರೂಪಾಯಿ ನೀಡುವ ಗೃಹಲಕ್ಷ್ಮಿ ಯೋಜನೆಗೆ (Gruha Lakshmi Scheme) ಇಂದು ಚಾಲನೆ ಸಿಗುತ್ತಿದೆ. ಇಂದು ಮಧ್ಯಾಹ್ನ 12 ಗಂಟೆಗೆ ಕಾರ್ಯಕ್ರಮಕ್ಕೆ ರಾಷ್ಟ್ರೀಯ ನಾಯಕರ ಜೊತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಲಿದ್ದಾರೆ. ಇದಕ್ಕಾಗಿ ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ಹಾಕಲಾಗಿರುವ ಬೃಹತ್ ವೇದಿಕೆಯಲ್ಲಿ‌ ಕಾಂಗ್ರೆಸ್ ಮುಖಂಡರಾದ ರಾಹುಲ್ ಗಾಂಧಿ ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆಯವರು ಬಟನ್ ಒತ್ತುವ ಮೂಲಕ ಯೋಜನೆಗೆ ಚಾಲನೆ ನೀಡಲಿದ್ದಾರೆ. ಕಾರ್ಯಕ್ರಮಕ್ಕೆ ಮೈಸೂರು, ಚಾಮರಾನಗರ, ಮಂಡ್ಯ ಸೇರಿದಂತೆ ಹಲವು ಜಿಲ್ಲೆಗಳಿಂದ ಜನರು ಆಗಮಿಸಿದ್ದಾರೆ.

ಗೃಹಲಕ್ಷ್ಮಿ ಯೋಜನೆ ಚಾಲನಾ ಕಾರ್ಯಕ್ರಮದ ನೇರಪ್ರಸಾರ

Published on: Aug 30, 2023 11:40 AM