ಒಂದು ವಾರದಲ್ಲಿ ಗೃಹ ಲಕ್ಷ್ಮಿಯರ ಖಾತೆಗೆ ಹಣ ಜಮೆ: ಲಕ್ಷ್ಮೀ ಹೆಬ್ಬಾಳ್ಕರ್​

Updated on: Jun 01, 2025 | 10:25 PM

ಕರ್ನಾಟಕ ಸರ್ಕಾರದ ಗೃಹಲಕ್ಷ್ಮೀ ಯೋಜನೆಯಡಿ ಹಣದ ಪಾವತಿಯಲ್ಲಿ ವಿಳಂಬವಾಗುತ್ತಿರುವ ಬಗ್ಗೆ ವ್ಯಾಪಕ ಆರೋಪಗಳು ಕೇಳಿಬಂದಿವೆ. ಏಪ್ರಿಲ್ ತಿಂಗಳ ಪಾವತಿ ಇನ್ನೂ ಜಮೆಯಾಗಿಲ್ಲ ಎಂದು ಗೃಹ ಲಕ್ಷ್ಮೀಯರು ಸರ್ಕಾರ ವಿರುದ್ಧ ಆರೋಪಿಸಿದ್ದಾರೆ. ಈ ಬಗ್ಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು, ಬಾಕಿ ಇರುವ ಹಣ ಒಂದು ವಾರದೊಳಗೆ ಜಮೆಯಾಗುವುದಾಗಿ ಭರವಸೆ ನೀಡಿದ್ದಾರೆ.

ರಾಜ್ಯ ಸರ್ಕಾರದ ಮಹತ್ವಕಾಂಕ್ಷಿ ಯೋಜನೆ ಗೃಹಲಕ್ಷ್ಮಿ ಯೋಜನೆ ಸಾಕಷ್ಟು ಮಹಿಳೆಯರಿಗೆ ಅನುಕೂಲವಾಗಿದೆ. ಕೆಲವರು ಇದೇ ಹಣದಲ್ಲಿ ಬದುಕು ಕಟ್ಟಿಕೊಳ್ಳುತ್ತಿದ್ದರೆ, ಇನ್ನೂ ಕೆಲವರು ಸಮಾಜಕ್ಕೂ ಅನುಕೂಲ ಮಾಡಿ ಮಾದರಿಯಾಗಿದ್ದಾರೆ. ಆದರೆ ಗೃಹಲಕ್ಷ್ಮಿ ಯೋಜನೆಯ ಎರಡು ತಿಂಗಳ ಎರಡು ತಿಂಗಳ ಹಣ ಬಂದಿಲ್ಲ ಎಂದು ಆರೋಪ ಕೇಳಿಬಂದಿದೆ. ಈ ವಿಚಾರವಾಗಿ ಮಾಧ್ಯಮ ಪ್ರತಿನಿಧಿಗಳಿಗೆ ಪ್ರತಿಕ್ರಿಯಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್​, ಬಾಕಿ ಇರುವ ಏಪ್ರಿಲ್​ ತಿಂಗಳ ಗೃಹ ಲಕ್ಷ್ಮೀ ಹಣ ಒಂದು ವಾರದಲ್ಲಿ ಜಮೆಯಾಗುತ್ತದೆ ಎಂದು ಹೇಳಿದ್ದಾರೆ.