AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗೃಹಲಕ್ಷ್ಮಿ ಯೋಜನೆಗೆ 3 ವರ್ಷ: ಗ್ಯಾರಂಟಿ ಫಲಾನುಭವಿಗಳಿಗೆ ಸಿಎಂ ಡಿಕೆ ಶಿವಕುಮಾರ್​​ ಮಹತ್ವದ ಸಂದೇಶ

ಗೃಹಲಕ್ಷ್ಮಿ ಯೋಜನೆಗೆ 3 ವರ್ಷ: ಗ್ಯಾರಂಟಿ ಫಲಾನುಭವಿಗಳಿಗೆ ಸಿಎಂ ಡಿಕೆ ಶಿವಕುಮಾರ್​​ ಮಹತ್ವದ ಸಂದೇಶ

ಪ್ರಸನ್ನ ಹೆಗಡೆ
|

Updated on: Aug 30, 2026 | 11:17 AM

Share

Gruha Lakshmi Scheme: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಗೃಹಲಕ್ಷ್ಮಿ ಯೋಜನೆಯು ಯಶಸ್ವಿಯಾಗಿ 3 ವರ್ಷ ಪೂರೈಸಿದೆ. ಈ ಹಿನ್ನೆಲೆಯಲ್ಲಿ ನಾಡಿನ 1.2 ಕೋಟಿಗೂ ಹೆಚ್ಚು ಫಲಾನುಭವಿಗಳಿಗೆ ಶುಭಾಶಯ ತಿಳಿಸಿದ ಸಿಎಂ ಡಿ.ಕೆ. ಶಿವಕುಮಾರ್, ಗ್ಯಾರಂಟಿ ಸಮಿತಿ ಸಮೀಕ್ಷೆಗೆ ಸಹಕರಿಸುವಂತೆ ಮನವಿ ಮಾಡಿದ್ದಾರೆ.

ಬೆಂಗಳೂರು, ಆಗಸ್ಟ್​​ 30: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಒಂದಾಗಿರುವ ಗೃಹಲಕ್ಷ್ಮಿ ಅನುಷ್ಠಾನಕ್ಕೆ ಬಂದು ಇಂದಿಗೆ ಮೂರು ವರ್ಷಗಳ ಹಿನ್ನೆಲೆ ಸಿಎಂ ಡಿಕೆ ಶಿವಕುಮಾರ್​​ ಮಹತ್ವದ ಸಂದೇಶವೊಂದನ್ನು ಹಂಚಿಕೊಂಡಿದ್ದಾರೆ. ನಮ್ಮ ಸರ್ಕಾರದ ಮಹತ್ವಾಕಾಂಕ್ಷಿ ಗೃಹಲಕ್ಷ್ಮಿ ಯೋಜನೆಯು ಯಶಸ್ವಿಯಾಗಿ ಮೂರು ವರ್ಷ ಪೂರೈಸಿರುವುದು ಅತ್ಯಂತ ಸಂತೋಷ ಹಾಗೂ ಹೆಮ್ಮೆಯ ಸಂಗತಿಯಾಗಿದೆ. ನಾಡಿನ 1.2+ ಕೋಟಿ ಕುಟುಂಬಗಳ ಒಡತಿಯರಿಗೆ ಈ ಯೋಜನೆಯು ಆರ್ಥಿಕ ಬಲದ ಜೊತೆಗೆ, ಸ್ವಾಭಿಮಾನ ಹಾಗೂ ಆತ್ಮಸ್ಥೈರ್ಯವನ್ನೂ ತುಂಬಿದೆ. ಇದು ಕೇವಲ ಒಂದು ಸರ್ಕಾರಿ ಸೌಲಭ್ಯವಲ್ಲ, ಮಹಿಳೆಯರ ನೆಮ್ಮದಿಯ ಬದುಕಿಗೆ ಸರ್ಕಾರವು ನೀಡುತ್ತಿರುವ ಪ್ರೀತಿಯ ಆಸರೆಯಾಗಿದೆ. ​ಇದೇ ವೇಳೆ ಫಲಾನುಭವಿಗಳಲ್ಲಿ ಒಂದು ಸಣ್ಣ ಮನವಿ. ಸರ್ಕಾರದ ‘ಗ್ಯಾರಂಟಿ ಸಮಿತಿ’ಯವರು ನಿಮ್ಮ ಮನೆ ಬಾಗಿಲಿಗೆ ಬಂದಾಗ, ದಯವಿಟ್ಟು ಅವರಿಗೆ ಬೇಕಾದ ದಾಖಲೆಗಳನ್ನು ನೀಡಿ ಎಂದಿನಂತೆ ಪ್ರೀತಿಯಿಂದ ಸಹಕರಿಸಿ ಎಂದವರು ಮನವಿ ಮಾಡಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Follow Us