ಗೃಹಲಕ್ಷ್ಮಿ ಯೋಜನೆಗೆ 3 ವರ್ಷ: ಗ್ಯಾರಂಟಿ ಫಲಾನುಭವಿಗಳಿಗೆ ಸಿಎಂ ಡಿಕೆ ಶಿವಕುಮಾರ್ ಮಹತ್ವದ ಸಂದೇಶ
Gruha Lakshmi Scheme: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಗೃಹಲಕ್ಷ್ಮಿ ಯೋಜನೆಯು ಯಶಸ್ವಿಯಾಗಿ 3 ವರ್ಷ ಪೂರೈಸಿದೆ. ಈ ಹಿನ್ನೆಲೆಯಲ್ಲಿ ನಾಡಿನ 1.2 ಕೋಟಿಗೂ ಹೆಚ್ಚು ಫಲಾನುಭವಿಗಳಿಗೆ ಶುಭಾಶಯ ತಿಳಿಸಿದ ಸಿಎಂ ಡಿ.ಕೆ. ಶಿವಕುಮಾರ್, ಗ್ಯಾರಂಟಿ ಸಮಿತಿ ಸಮೀಕ್ಷೆಗೆ ಸಹಕರಿಸುವಂತೆ ಮನವಿ ಮಾಡಿದ್ದಾರೆ.
ಬೆಂಗಳೂರು, ಆಗಸ್ಟ್ 30: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಒಂದಾಗಿರುವ ಗೃಹಲಕ್ಷ್ಮಿ ಅನುಷ್ಠಾನಕ್ಕೆ ಬಂದು ಇಂದಿಗೆ ಮೂರು ವರ್ಷಗಳ ಹಿನ್ನೆಲೆ ಸಿಎಂ ಡಿಕೆ ಶಿವಕುಮಾರ್ ಮಹತ್ವದ ಸಂದೇಶವೊಂದನ್ನು ಹಂಚಿಕೊಂಡಿದ್ದಾರೆ. ನಮ್ಮ ಸರ್ಕಾರದ ಮಹತ್ವಾಕಾಂಕ್ಷಿ ಗೃಹಲಕ್ಷ್ಮಿ ಯೋಜನೆಯು ಯಶಸ್ವಿಯಾಗಿ ಮೂರು ವರ್ಷ ಪೂರೈಸಿರುವುದು ಅತ್ಯಂತ ಸಂತೋಷ ಹಾಗೂ ಹೆಮ್ಮೆಯ ಸಂಗತಿಯಾಗಿದೆ. ನಾಡಿನ 1.2+ ಕೋಟಿ ಕುಟುಂಬಗಳ ಒಡತಿಯರಿಗೆ ಈ ಯೋಜನೆಯು ಆರ್ಥಿಕ ಬಲದ ಜೊತೆಗೆ, ಸ್ವಾಭಿಮಾನ ಹಾಗೂ ಆತ್ಮಸ್ಥೈರ್ಯವನ್ನೂ ತುಂಬಿದೆ. ಇದು ಕೇವಲ ಒಂದು ಸರ್ಕಾರಿ ಸೌಲಭ್ಯವಲ್ಲ, ಮಹಿಳೆಯರ ನೆಮ್ಮದಿಯ ಬದುಕಿಗೆ ಸರ್ಕಾರವು ನೀಡುತ್ತಿರುವ ಪ್ರೀತಿಯ ಆಸರೆಯಾಗಿದೆ. ಇದೇ ವೇಳೆ ಫಲಾನುಭವಿಗಳಲ್ಲಿ ಒಂದು ಸಣ್ಣ ಮನವಿ. ಸರ್ಕಾರದ ‘ಗ್ಯಾರಂಟಿ ಸಮಿತಿ’ಯವರು ನಿಮ್ಮ ಮನೆ ಬಾಗಿಲಿಗೆ ಬಂದಾಗ, ದಯವಿಟ್ಟು ಅವರಿಗೆ ಬೇಕಾದ ದಾಖಲೆಗಳನ್ನು ನೀಡಿ ಎಂದಿನಂತೆ ಪ್ರೀತಿಯಿಂದ ಸಹಕರಿಸಿ ಎಂದವರು ಮನವಿ ಮಾಡಿದ್ದಾರೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.
Loading...
Unable to load recommendations.
Follow Us