ಗೃಹ ಲಕ್ಷ್ಮಿ ಯೋಜನೆ ಲಾಂಚ್ ಕಾರ್ಯಕ್ರಮ, ಮೈಸೂರಿನ ಮಹಾರಾಜ ಕಾಲೇಜು ಮೈದಾನದ ಸುತ್ತ ಫೂಲ್​ಪ್ರೂಫ್ ಭದ್ರತೆ!

|

Updated on: Aug 30, 2023 | 11:32 AM

ನಗರದ ಹೆಚ್ಚಿನ ಭಾಗಗಳಲ್ಲಿ ಭಾರೀ ಭದ್ರತೆಯ ವ್ಯವಸ್ಥೆ ಮಾಡಲಾಗಿದೆ. ಮಹಾರಾಜಾ ಕಾಲೇಜು ಸುತ್ತಮುತ್ತ ಎಲ್ಲಾ ಬಗೆಯ ವಾಹನ ಸಂಚಾರವನ್ನು ನಿಷೇಧಿಸಲಾಗಿದೆ.  ಆ್ಯಂಟಿ ಬಾಂಬ್ ಸ್ಕ್ವ್ಯಾಡ್, ನಾಯಿಯೊಂದಿಗೆ ಮೈದಾನದ ಗಸ್ತು ತಿರುಗುತ್ತಿದ್ದಾರೆ. ಮೈದಾನದ ಪ್ರವೇಶ ದ್ವಾರಗಳಲ್ಲಿ ಮೆಟಲ್ ಡಿಟೆಕ್ಟರ್ ಗಳನ್ನು ಅಳವಡಿಸಲಾಗಿದೆ. ನಗರದ ಎಲ್ಲಾ ಪ್ರಮುಖ ರಸ್ತೆಗಳಲ್ಲಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.

ಮೈಸೂರು: ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರ (Congress government) ವಿಧಾನ ಸಭಾ ಚುನಾವಣೆ ಸಂದರ್ಭದಲ್ಲಿ ಜನತೆಗೆ ನೀಡಿದ ಗೃಹ ಲಕ್ಷ್ಮಿ ಯೋಜನೆಯ ಲಾಂಚ್ (Gruha Lakshmi) ಕಾರ್ಯಕ್ರಮವನ್ನು ಉತ್ಸವದ ರೀತಿಯಲ್ಲಿ ಆಯೋಜಿಸಿದೆ. ನಗರದ ಮಹಾರಾಜ ಕಾಲೇಜು ಮೈದಾನ ಕಾರ್ಯಕ್ರಮಕ್ಕಾಗಿ ಮದುವಣಗಿತ್ತಿಯಂತೆ ಸಜ್ಜಾಗಿದೆ. ಈಗಾಗಲೇ ವರದಿಯಾಗಿರುವಂತೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ದೆಹಲಿಯಿಂದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಮತ್ತು ರಾಹುಲ್ ಗಾಂಧಿ (Rahul Gandhi) ಆಗಮಿಸುತ್ತಿದ್ದಾರೆ. ಹಾಗಾಗೇ, ನಗರದ ಹೆಚ್ಚಿನ ಭಾಗಗಳಲ್ಲಿ ಭಾರೀ ಭದ್ರತೆಯ ವ್ಯವಸ್ಥೆ ಮಾಡಲಾಗಿದೆ. ಮಹಾರಾಜಾ ಕಾಲೇಜು ಸುತ್ತಮುತ್ತ ಎಲ್ಲಾ ಬಗೆಯ ವಾಹನ ಸಂಚಾರವನ್ನು ನಿಷೇಧಿಸಲಾಗಿದೆ.  ಆ್ಯಂಟಿ ಬಾಂಬ್ ಸ್ಕ್ವ್ಯಾಡ್, ನಾಯಿಯೊಂದಿಗೆ ಮೈದಾನದ ಗಸ್ತು ತಿರುಗುತ್ತಿದ್ದಾರೆ. ಮೈದಾನದ ಪ್ರವೇಶ ದ್ವಾರಗಳಲ್ಲಿ ಮೆಟಲ್ ಡಿಟೆಕ್ಟರ್ ಗಳನ್ನು ಅಳವಡಿಸಲಾಗಿದೆ. ನಗರದ ಎಲ್ಲಾ ಪ್ರಮುಖ ರಸ್ತೆಗಳಲ್ಲಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ