Gruha Lakshmi Scheme: ಜಿಲ್ಲಾಧಿಕಾರಿಗಳ ಜತೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿಡಿಯೋ ಸಂವಾದ: ಸೂಕ್ತ ಸಿದ್ಧತೆಗೆ ಸೂಚನೆ

| Updated By: ಗಂಗಾಧರ​ ಬ. ಸಾಬೋಜಿ

Updated on: Jul 15, 2023 | 9:56 PM

ಗೃಹ ಲಕ್ಷ್ಮೀ ಯೋಜನೆ ಜಾರಿಗೆ ಅಗತ್ಯ ಸಿದ್ಧತೆ ಹಿನ್ನೆಲೆ ಇಂದು ವಿಕಾಸಸೌಧದಲ್ಲಿ ಎಲ್ಲಾ ಜಿಲ್ಲಾಧಿಕಾರಿಗಳ ಜತೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿಡಿಯೋ ಸಂವಾದ ಮಾಡಿದ್ದು, ಅಗತ್ಯ ವ್ಯವಸ್ಥೆ ಕೈಗೊಳ್ಳುವಂತೆ ಸೂಚನೆ ನೀಡಿದ್ದಾರೆ.

ಬೆಂಗಳೂರು, ಜುಲೈ 15: ಗೃಹ ಲಕ್ಷ್ಮೀ ಯೋಜನೆ (Gruha Lakshmi Scheme) ಜಾರಿಗೆ ಅಗತ್ಯ ಸಿದ್ಧತೆ ಹಿನ್ನೆಲೆ ಇಂದು ವಿಕಾಸಸೌಧದಲ್ಲಿ ಎಲ್ಲಾ ಜಿಲ್ಲಾಧಿಕಾರಿಗಳ ಜತೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿಡಿಯೋ ಸಂವಾದ ಮಾಡಿದ್ದಾರೆ. ಫಲಾನುಭವಿಗಳ ಸಮರ್ಪಕ ನೋಂದಣಿಗೆ ಸೂಕ್ತ ಸಿದ್ಧತೆ, ನೋಂದಣಿ ಸ್ಥಳದಲ್ಲಿ ಅಗತ್ಯ ವ್ಯವಸ್ಥೆ ಕೈಗೊಳ್ಳಬೇಕು. ಯಾವುದೇ ಗೊಂದಲಗಳಿಗೆ ಅನುವು ಮಾಡಿಕೊಡಬಾರದೆಂದು ಸೂಚನೆ ನೀಡಿದ್ದಾರೆ.

ಅಗತ್ಯ ಕಂಪ್ಯೂಟರ್, ಇಂಟರ್‌ನೆಟ್ ಸಂಪರ್ಕ ಸೇರಿದಂತೆ ಎಲ್ಲ ರೀತಿಯ ಸಿದ್ಧತೆಗಳನ್ನು ಅಧಿಕಾರಿಗಳು ಮಾಡಿಕೊಳ್ಳಬೇಕು. ನೋಂದಣಿ ಕೇಂದ್ರಗಳಲ್ಲಿ ಪಿಡಿಒ, ಗ್ರಾಮ ಲೆಕ್ಕಾಧಿಕಾರಿಗಳನ್ನು ನಿಯೋಜಿಸುವಂತೆ ಡಿಸಿಗಳಿಗೆ ತಿಳಿಸಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.