ಗೃಹಲಕ್ಷ್ಮಿ ಹಣ ವರ್ಗಾವಣೆ ಯಾವಾಗ? ಸಿಎಂ ಸಿದ್ದರಾಮಯ್ಯ ಹೇಳಿದ್ದೇನು ನೋಡಿ

Updated on: May 16, 2025 | 2:21 PM

Gruha Lakshmi Scheme Karnataka: ಕರ್ನಾಟಕ ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷೆಯ ಗೃಹಲಕ್ಷ್ಮಿ ಯೋಜನೆಯ ಹಣ ಕಳೆದ ಮೂರು ತಿಂಗಳಿಂದ ವರ್ಗಾವಣೆಯಾಗದೆ ಮಹಿಳೆಯರು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಇದೀಗ ಮುಖ್ಯಮಂತ್ರಿ ಸಿದ್ದರಾಮಯ್ಯ ಆ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ. ಅವರು ಏನು ಹೇಳಿದ್ದಾರೆ ಎಂಬ ವಿಡಿಯೋ ಇಲ್ಲಿದೆ ನೋಡಿ.

ಬೆಂಗಳೂರು, ಮೇ 16: ಗೃಹಲಕ್ಷ್ಮಿ ಯೋಜನೆಯ ಹಣ ಫಲಾನುಭವಿಗಳ ಬ್ಯಾಂಕ್ ಖಾತೆಗೆ ವರ್ಗಾವಣೆಯಾಗದೆ ಮೂರು ತಿಂಗಳು ಆಗಿರುವ ಬಗ್ಗೆ ಮಾಧ್ಯಮ ಪ್ರತಿನಿಧಿಗಳು ಕೇಳಿದ ಪ್ರಶ್ನೆಗೆ ಉತ್ತರಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಗ್ಯಾರಂಟಿ ಯೋಜನೆಗಳಿಗೆ ಹಣಕಾಸಿನ ಕೊರತೆ ಇಲ್ಲ ಎಂದರು. ಅಲ್ಲದೆ, ಕಳೆದ ಬಾರಿಯ ಬಜೆಟ್​​ನಲ್ಲಿ ಗ್ಯಾರಂಟಿ ಯೋಜನೆಗಳಿಗೆ 52 ಸಾವಿರದ 9 ಕೋಟಿ ರೂ. ಅನುದಾನ ಮೀಸಲಿಡಲಾಗಿತ್ತು. ಈ ವರ್ಷ 50 ಸಾವಿರದ 18 ಕೋಟಿ ರೂ. ಮೀಸಲಿಡಲಾಗಿದೆ. ಹೀಗಾಗಿ ಹಣಕಾಸಿನ ತೊಂದರೆ ಇಲ್ಲ ಎಂದರು. ಆದರೆ, ಗೃಹಲಕ್ಷ್ಮಿ ಯೋಜನೆಯ ಹಣ ಮೂರು ತಿಂಗಳುಗಳಿಂದ ವರ್ಗಾವಣೆಯಾಗದೇ ಇರುವ ಬಗ್ಗೆ ಕೊನೆಗೂ ಪ್ರತಿಕ್ರಿಯೆ ನೀಡಲೇ ಇಲ್ಲ!

ಕರ್ನಾಟಕದ ಇನ್ನಷ್ಟು  ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ