ಗೃಹಲಕ್ಷ್ಮಿ ಯೋಜನೆ ಹಣ ದುರ್ಬಳಕೆ ಆರೋಪ: ಡಿಸಿಎಂ ಡಿಕೆ ಶಿವಕುಮಾರ್ ಮಹತ್ವದ ಹೇಳಿಕೆ

Updated on: May 25, 2026 | 2:26 PM

ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಗೃಹಲಕ್ಷ್ಮಿ ಯೋಜನೆ ಅನುಷ್ಠಾನದಲ್ಲಿ 100 ಕೋಟಿ ರೂಪಾಯಿಗೂ ಹೆಚ್ಚು ಹಣ ದುರುಪಯೋಗವಾಗುತ್ತಿರುವುದು ಗಮನಕ್ಕೆ ಬಂದಿದೆ ಎಂದು ತಿಳಿಸಿದ್ದಾರೆ. ಮೃತಪಟ್ಟ ಫಲಾನುಭವಿಗಳ ಖಾತೆಗಳಿಗೂ ಹಣ ಹೋಗುತ್ತಿದ್ದು, ಅಕ್ರಮ ತಡೆಯಲು ದಾಖಲೆಗಳನ್ನು ಮರು ಪರಿಶೀಲಿಸುವಂತೆ ಸೂಚಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಬೆಂಗಳೂರು, ಮೇ 25: ಕರ್ನಾಟಕ ಕಾಂಗ್ರೆಸ್ ಸರ್ಕಾರದ ಜನಪ್ರಿಯ ಗೃಹಲಕ್ಷ್ಮಿ ಯೋಜನೆ ಅನುಷ್ಠಾನದಲ್ಲಿ ಸುಮಾರು 100 ಕೋಟಿ ರೂಪಾಯಿ ದುರುಪಯೋಗ ಆಗುತ್ತಿರುವುದು ಗಮನಕ್ಕೆ ಬಂದಿದೆ ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ತಿಳಿಸಿದ್ದಾರೆ. ಮೃತಪಟ್ಟ ಫಲಾನುಭವಿಗಳ ಖಾತೆಗಳಿಗೂ ಹಣ ಜಮೆಯಾಗುತ್ತಿರುವುದು ಸರ್ಕಾರದ ಗಮನಕ್ಕೆ ಬಂದಿದೆ. ಯೋಜನೆಯ ಲಾಭವನ್ನು ಸರಿಯಾದ ಫಲಾನುಭವಿಗಳಿಗೆ ತಲುಪಿಸಲು ಸರ್ಕಾರ ಬದ್ಧವಾಗಿದೆ. ಸತ್ತವರಿಗೂ ಹಣ ಹೋಗುತ್ತಿರುವುದು ಮತ್ತು ತಪ್ಪು ದೂರವಾಣಿ ಸಂಖ್ಯೆಗಳನ್ನು ನೀಡಿರುವುದು ಬೆಳಕಿಗೆ ಬಂದಿದೆ. ಹೀಗಾಗಿ, ಪರಿಶೀಲನೆಗೆ ಸೂಚಿಸಲಾಗಿದೆ. ಜತೆಗೆ ಫಲಾನುಭವಿಗಳು ತಮ್ಮ ದಾಖಲೆಗಳನ್ನು ಸರಿಯಾದ ರೀತಿಯಲ್ಲಿ ಸಲ್ಲಿಸುವಂತೆ ಸೂಚಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ. ಪ್ರತಿ ತಾಲೂಕಿನಿಂದಲೂ ಮಾಹಿತಿ ಪಡೆದು, ಯೋಜನೆಯನ್ನು ಪರಿಶೀಲಿಸುವ ಕಾರ್ಯ ನಡೆಯುತ್ತಿದೆ ಎಂದು ಅವರು ಹೇಳಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಗಣಪತಿ ಶರ್ಮಾ

ಕೇರಳದ ಕಾಸರಗೋಡು ಮೂಲದ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 14 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ವರದಿಗಾರಿಕೆ ಅನುಭವದ ಜತೆಗೆ ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು. ವಿಜಯ ಕರ್ನಾಟಕ, ಸಮಯ ನ್ಯೂಸ್ ಟಿವಿ, ವಿಜಯವಾಣಿ, ಪ್ರಜಾವಾಣಿ ಪತ್ರಿಕೆಗಳು ಹಾಗೂ ಡಿಜಿಟಲ್ ಮೀಡಿಯಾದಲ್ಲಿ ಕೆಲಸ ಮಾಡಿದ ಅನುಭವ. 2022 ರಿಂದ ಟಿವಿ9 ಕನ್ನಡ ಡಿಜಿಟಲ್​ನಲ್ಲಿ ಕಾರ್ಯನಿರ್ವಹಣೆ.

Read More