ಬೆಳಗಾವಿಯಿಂದ ಮೈಸೂರಿಗೆ ಗೃಹಲಕ್ಷ್ಮೀ ಶಿಫ್ಟ್; ಕಾರಣ ಹೇಳಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

Edited By: ಕಿರಣ್ ಹನುಮಂತ್​ ಮಾದಾರ್

Updated on: Aug 26, 2023 | 8:12 PM

ಗೃಹಲಕ್ಷ್ಮೀ ಯೋಜನೆ ಜಾರಿ ಕಾರ್ಯಕ್ರಮವನ್ನು ಬೆಳಗಾವಿಯಲ್ಲಿ ಮಾಡಬೇಕೆಂದು ಎಲ್ಲಾ ರೀತಿಯಲ್ಲಿ 90 ಪ್ರತಿಶತ ಕಾರ್ಯಕ್ರಮದ ಸಿದ್ಧತೆಯನ್ನು ಮಾಡಿಕೊಳ್ಳಲಾಗಿತ್ತು. ಆದರೆ, ಈಗಾಗಲೇ ರಾಹುಲ್ ಗಾಂಧಿಯವರು ಚುನಾವಣಾ ಸಮಯದಲ್ಲಿ ಬೆಳಗಾವಿಗೆ ಬಂದಿದ್ದರಿಂದ ಜೊತೆಗೆ ಸಮಾರಂಭದ ಬಳಿಕ ದೆಹಲಿಗೆ ತೆರಳಬೇಕಾಗಿರುವುದರಿಂದ ಇಲ್ಲಿ ಮಾಡಲು ಪ್ಲ್ಯಾನ್​ ಮಾಡಲಾಯಿತು ಎಂದರು.

ಚಾಮರಾಜನಗರ, ಆ.26: ಗೃಹಲಕ್ಷ್ಮೀ ಯೋಜನೆ ಜಾರಿ ಕುರಿತು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ (Lakshmi Hebbalkar) ಚಾಮರಾಜನಗರ ಜಿಲ್ಲೆಯ ಕೊಳ್ಳೆಗಾಲದಲ್ಲಿರುವ ಖಾಸಗಿ ಸಮುದಾಯ ಭವನದಲ್ಲಿ ಪೂರ್ವಭಾವಿ ಸಭೆ ನಡೆಸುತ್ತಿದ್ದಾರೆ. ಈ ವೇಳೆ ಬೆಳಗಾವಿಯಿಂದ ಮೈಸೂರಿಗೆ ಗೃಹಲಕ್ಷ್ಮೀ(Gruha lakshmi) ಯೋಜನೆ ಸ್ಥಳಾಂತರ ವಿಚಾರ ಕುರಿತು ಪ್ರತಿಕ್ರಿಯಿಸಿದ ಅವರು ‘ ಬೆಳಗಾವಿಯಲ್ಲಿ ಮಾಡಬೇಕೆಂದು ಎಲ್ಲಾ ರೀತಿಯಲ್ಲಿ 90 ಪ್ರತಿಶತ ಕಾರ್ಯಕ್ರಮದ ಸಿದ್ಧತೆಯನ್ನು ಮಾಡಿಕೊಳ್ಳಲಾಗಿತ್ತು. ಆದರೆ, ಈಗಾಗಲೇ ರಾಹುಲ್ ಗಾಂಧಿಯವರು ಚುನಾವಣಾ ಸಮಯದಲ್ಲಿ ಬೆಳಗಾವಿಗೆ ಬಂದಿದ್ದರಿಂದ ಜೊತೆಗೆ ಸಮಾರಂಭದ ಬಳಿಕ ದೆಹಲಿಗೆ ತೆರಳಬೇಕಾಗಿರುವುದರಿಂದ ಇಲ್ಲಿ ಮಾಡಲು ಪ್ಲ್ಯಾನ್​ ಮಾಡಲಾಯಿತು ಎಂದರು. ಇನ್ನು ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಎಐಸಿಸಿ ಅದ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸಿಎಂ, ಡಿಸಿಎಂ ಭಾಗಿಯಾಗಲಿದ್ದಾರೆ ಎಂದರು.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ

Follow Us
Suraj Prasad SN

ಸೂರಜ್ ಪ್ರಸಾದ್ ಎಸ್.ಎನ್ ಆದ ನಾನು ಹುಟ್ಟಿದ್ದು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ. ಬೆಳೆದಿದ್ದು ದಾವಣಗರೆ ಜಿಲ್ಲೆ ನ್ಯಾಮತಿ ತಾಲೂಕಿನಲ್ಲಿ. ಶಿವಮೊಗ್ಗದ ಸಹ್ಯಾದ್ರಿ ಕಾಲೇಜ್ ನಲ್ಲಿ ಪತ್ರಿಕೋದ್ಯಮದಲ್ಲಿ ಪದವಿಪೂರ್ವ ಶಿಕ್ಷಣ ಪಡೆದಿದ್ದು 2014ರಿಂದ ನನ್ನ ಎಲೆಕ್ಟ್ರಾನಿಕ್ ಮಾದ್ಯಮದ ವೃತ್ತಿ ಜೀವನವನ್ನ ಬೆಂಗಳೂರಿನಲ್ಲಿ ಕ್ರೈಂ ಬೀಟ್ ವರದಿಗಾರನಾಗಿ ಆರಂಭಿಸಿದ್ದು ಬೆಂಗಳೂರಿನಲ್ಲಿ 8 ವರ್ಷಗಳ ಕ್ರೈಂ ವರದಿಗಾರನಾಗಿ ಸೇವೆ ಸಲ್ಲಿಸಿ. ನಾಲ್ಕು ಸಂಸ್ಥೆಯಲ್ಲಿ ಕ್ರೈಂ ರಿಪೋರ್ಟರ್ ಹಾಗೂ ಕ್ರೈಂ ಇನ್ವೆಸ್ಟಿಗೇಟಿವ್ ವರದಿಗಾರನಾಗಿ ಹಾಗೂ ಸ್ಟಿಂಗ್ ಅಪರೇಷನ್ ಗಳನ್ನ ಮಾಡಿದ್ದೇನೆ. ಗೌರಿ ಲಂಕೇಶ್ ಕೊಲೆ ಕೇಸನ್ನ ರಾಜ್ಯದಲ್ಲೇ ಮೊದಲು ಬ್ರೇಕ್ ಮಾಡಿ ಈ ಹಿಂದಿನ ಸಂಸ್ಥೆಯಿಂದ ಪ್ರಶಂಸೆ ಪಡೆದಿರುತ್ನೇನೆ2019 ರಲ್ಲಿ ಪಿಎಸ್ಐ ಅಕ್ರಮದ ಸ್ಟಿಂಗ್ ಆಪರೇಷನ್ ಹಾಗೂ ಬೆಂಗಳೂರು ಸಿಂಥಟಿಕ್ ಡ್ರಗ್ ಮಾಫಿಯಾದ ಸ್ಟಿಂಗ್ ಆಪರೇಷನ್ ಮಾಡಿದ್ದು. ಕಳೆದ 10 ವರ್ಷಗಳಿಂದ ಸಕ್ರೀಯವಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ. ಟಿವಿ9 ಸಂಸ್ಥೆಗೆ ಮಂಡ್ಯ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡಿ ಬಳಿಕ ಚಾಮರಾಜನಗರಕ್ಕೆ ವರ್ಗಾವಣೆಯಾಗಿ ಈಗ ಪ್ರಸ್ಥುತ ಚಾಮರಾಜನಗರ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಹವ್ಯಾಸ ಅಡಿಗೆ ಮಾಡುವುದು, ಕ್ರಿಕೆಟ್ ಆಡುವುದು ಕ್ರೈಂ ಇನ್ವೆಷ್ಟಿಗೇಷನ್ ನಾವೆಲ್ ಗಳನ್ನ ಓದುವುದು.

Read More