GSL 2025: ಗಯಾನಾ ಅಮೆಝಾನ್ ವಾರಿಯರ್ಸ್ ಚಾಂಪಿಯನ್

Updated on: Jul 19, 2025 | 10:05 AM

Global Super League, 2025: ಗ್ಲೋಬಲ್ ಸೂಪರ್ ಲೀಗ್​ನಲ್ಲಿ ಚೊಚ್ಚಲ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸುವಲ್ಲಿ ಗಯಾನಾ ಅಮೆಝಾನ್ ವಾರಿಯರ್ಸ್ ಯಶಸ್ವಿಯಾಗಿದೆ. ಕಳೆದ ಬಾರಿ ನಡೆದ ಚೊಚ್ಚಲ ಜಿಎಸ್​ಎಲ್ ಟೂರ್ನಿಯಲ್ಲಿ ರಂಗ್​ಪುರ್ ರೈಡರ್ಸ್ ತಂಡವು ಚಾಂಪಿಯನ್ ಪಟ್ಟಕ್ಕೇರಿತ್ತು. ಆದರೆ ಈ ಬಾರಿ ಹಾಲಿ ಚಾಂಪಿಯನ್ ತಂಡವನ್ನು ಬಗ್ಗು ಬಡಿದು ಗಯಾನಾ ಅಮೆಝಾನ್ ವಾರಿಯರ್ಸ್ ಪಡೆ ಕಿರೀಟ ಮುಡಿಗೇರಿಸಿಕೊಂಡಿದೆ.

ವೆಸ್ಟ್ ಇಂಡೀಸ್​ನಲ್ಲಿ ನಡೆದ ಗ್ಲೋಬಲ್ ಸೂಪರ್ ಲೀಗ್ 2025 ರಲ್ಲಿ ಗಯಾನಾ ಅಮೆಝಾನ್ ವಾರಿಯರ್ಸ್ ತಂಡವು ಚಾಂಪಿಯನ್ ಪಟ್ಟ ಅಲಂಕರಿಸಿದೆ. ಗಯಾನಾದ ಪ್ರಾವಿಡೆನ್ಸ್ ಸ್ಟೇಡಿಯಂನಲ್ಲಿ ನಡೆದ ಫೈನಲ್​ ಪಂದ್ಯದಲ್ಲಿ ಬಾಂಗ್ಲಾದೇಶ್ ಪ್ರೀಮಿಯರ್ ಲೀಗ್​ನ ರಂಗ್​ಪುರ್ ರೈಡರ್ಸ್ ಹಾಗೂ ಕೆರಿಬಿಯನ್ ಪ್ರೀಮಿಯರ್ ಲೀಗ್​ನ ಗಯಾನಾ ಅಮೆಝಾನ್ ವಾರಿಯರ್ಸ್ ತಂಡಗಳು ಮುಖಾಮುಖಿಯಾಗಿದ್ದವು.

ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಗಯಾನಾ ಅಮೆಝಾನ್ ವಾರಿಯರ್ಸ್ ತಂಡವು 20 ಓವರ್​ಗಳಲ್ಲಿ 4 ವಿಕೆಟ್ ಕಳೆದುಕೊಂಡು 196 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ರಂಗ್​ಪುರ್ ರೈಡರ್ಸ್ ತಂಡವು 19.5 ಓವರ್​ಗಳಲ್ಲಿ 164 ರನ್​ಗಳಿಸಿ ಆಲೌಟ್ ಆಗಿದೆ. ಈ ಮೂಲಕ ಗಯಾನಾ ಅಮೆಝಾನ್ ವಾರಿಯರ್ಸ್ 32 ರನ್​ಗಳ ಜಯ ಸಾಧಿಸಿದೆ.

ಈ ಮೂಲಕ ಗ್ಲೋಬಲ್ ಸೂಪರ್ ಲೀಗ್​ನಲ್ಲಿ ಚೊಚ್ಚಲ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸುವಲ್ಲಿ ಗಯಾನಾ ಅಮೆಝಾನ್ ವಾರಿಯರ್ಸ್ ಯಶಸ್ವಿಯಾಗಿದೆ. ಕಳೆದ ಬಾರಿ ನಡೆದ ಚೊಚ್ಚಲ ಜಿಎಸ್​ಎಲ್ ಟೂರ್ನಿಯಲ್ಲಿ ರಂಗ್​ಪುರ್ ರೈಡರ್ಸ್ ತಂಡವು ಚಾಂಪಿಯನ್ ಪಟ್ಟಕ್ಕೇರಿತ್ತು. ಆದರೆ ಈ ಬಾರಿ ಹಾಲಿ ಚಾಂಪಿಯನ್ ತಂಡವನ್ನು ಬಗ್ಗು ಬಡಿದು ಗಯಾನಾ ಅಮೆಝಾನ್ ವಾರಿಯರ್ಸ್ ಪಡೆ ಕಿರೀಟ ಮುಡಿಗೇರಿಸಿಕೊಂಡಿದೆ.