ಜಿಎಸ್ಟಿ ಇಳಿಕೆ: ಮಧ್ಯಮ ವರ್ಗಕ್ಕೆ ಭರ್ಜರಿ ಗಿಫ್ಟ್ ಕೊಟ್ಟ ಮೋದಿಗೆ ದೊಡ್ಡ ಥ್ಯಾಂಕ್ಸ್ ಎಂದ ಜನ
GST Rate cut: ಕರ್ನಾಟಕದ ಜನರು ಜಿಎಸ್ಟಿ ದರ ಕಡಿತದ ಬಗ್ಗೆ ಸಕಾರಾತ್ಮಕ ಪ್ರತಿಕ್ರಿಯೆ ವ್ಯಕ್ತಪಡಿಸಿದ್ದಾರೆ. ಪ್ರಧಾನ ಮಂತ್ರಿ ನರೇಂದ್ರ ಮೋದಿ ಮತ್ತು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಈ ಕ್ರಮಕ್ಕೆ ಮಧ್ಯಮ ವರ್ಗದ ಜನರು ಧನ್ಯವಾದ ಅರ್ಪಿಸಿದ್ದಾರೆ. ರೈತರು, ವಿದ್ಯಾರ್ಥಿಗಳು ಮತ್ತು ಸಾಮಾನ್ಯ ಜನರಿಗೆ ಈ ಕಡಿತದಿಂದ ಉಪಯೋಗವಾಗಿದೆ ಎಂದು ಹೇಳಲಾಗಿದೆ.
ಬೆಳಗಾವಿ, ಸೆಪ್ಟೆಂಬರ್ 4: ಜಿಎಸ್ಟಿ ತೆರಿಗೆ ದರ ಇಳಿಕೆ ಮಾಡಿರುವ ಕೇಂದ್ರ ಸರ್ಕಾರದ ನಿರ್ಧಾರದ ಬಗ್ಗೆ ಬೆಳಗಾವಿ ಸೇರಿದಂತೆ ಕರ್ನಾಟಕದ ವಿವಿಧೆಡೆಯಲ್ಲಿ ಜನರಿಂದ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದೆ. ಬೆಳಗಾವಿಯಲ್ಲಿ ‘ಟಿವಿ9’ ಜತೆ ಪ್ರತಿಕ್ರಿಯಿಸಿದ ಜನರು, ಮಧ್ಯಮ ವರ್ಗಕ್ಕೆ ಭರ್ಜರಿ ಉಡುಗೊರೆ ಕೊಟ್ಟ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಧನ್ಯವಾದಗಳು ಎಂದರು.
ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
