ಜಿಎಸ್​ಟಿ ಇಳಿಕೆ: ಮಧ್ಯಮ ವರ್ಗಕ್ಕೆ ಭರ್ಜರಿ ಗಿಫ್ಟ್ ಕೊಟ್ಟ ಮೋದಿಗೆ ದೊಡ್ಡ​ ಥ್ಯಾಂಕ್ಸ್ ಎಂದ ಜನ

Edited By:

Updated on: Sep 04, 2025 | 12:36 PM

GST Rate cut: ಕರ್ನಾಟಕದ ಜನರು ಜಿಎಸ್ಟಿ ದರ ಕಡಿತದ ಬಗ್ಗೆ ಸಕಾರಾತ್ಮಕ ಪ್ರತಿಕ್ರಿಯೆ ವ್ಯಕ್ತಪಡಿಸಿದ್ದಾರೆ. ಪ್ರಧಾನ ಮಂತ್ರಿ ನರೇಂದ್ರ ಮೋದಿ ಮತ್ತು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಈ ಕ್ರಮಕ್ಕೆ ಮಧ್ಯಮ ವರ್ಗದ ಜನರು ಧನ್ಯವಾದ ಅರ್ಪಿಸಿದ್ದಾರೆ. ರೈತರು, ವಿದ್ಯಾರ್ಥಿಗಳು ಮತ್ತು ಸಾಮಾನ್ಯ ಜನರಿಗೆ ಈ ಕಡಿತದಿಂದ ಉಪಯೋಗವಾಗಿದೆ ಎಂದು ಹೇಳಲಾಗಿದೆ.

ಬೆಳಗಾವಿ, ಸೆಪ್ಟೆಂಬರ್ 4: ಜಿಎಸ್​ಟಿ ತೆರಿಗೆ ದರ ಇಳಿಕೆ ಮಾಡಿರುವ ಕೇಂದ್ರ ಸರ್ಕಾರದ ನಿರ್ಧಾರದ ಬಗ್ಗೆ ಬೆಳಗಾವಿ ಸೇರಿದಂತೆ ಕರ್ನಾಟಕದ ವಿವಿಧೆಡೆಯಲ್ಲಿ ಜನರಿಂದ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದೆ. ಬೆಳಗಾವಿಯಲ್ಲಿ ‘ಟಿವಿ9’ ಜತೆ ಪ್ರತಿಕ್ರಿಯಿಸಿದ ಜನರು, ಮಧ್ಯಮ ವರ್ಗಕ್ಕೆ ಭರ್ಜರಿ ಉಡುಗೊರೆ ಕೊಟ್ಟ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಧನ್ಯವಾದಗಳು ಎಂದರು.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

 

Loading...
Unable to load recommendations.
Follow Us
ಸಹದೇವ್​ ಮಾನೆ

ಸಹದೇವ ಯಲ್ಲಪ್ಪ ಮಾನೆ. ಹುಟ್ಟಿದ್ದು ಧಾರವಾಡ ತಾಲೂಕಿನ ಗುಳೇದಕೊಪ್ಪ ಗ್ರಾಮ. ಕರ್ನಾಟಕ ವಿಶ್ವ ವಿದ್ಯಾಲಯದಲ್ಲಿ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದು, ಕಳೆದ 12 ವರ್ಷದಿಂದ ಟಿವಿ ಮಾಧ್ಯಮದಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ. 2014ರಲ್ಲಿ ಬೀದರ್ ಜಿಲ್ಲೆಯಿಂದ ವೃತ್ತಿ ಜೀವನ ಪ್ರಾರಂಭ ಮಾಡಿ ಕಲಬುರಗಿ, ಹುಬ್ಬಳ್ಳಿಯಲ್ಲಿ ಕೆಲಸ ಮಾಡಿ ಸದ್ಯ ‘ಟಿವಿ9’ ಕನ್ನಡ ಸುದ್ದಿ ವಾಹಿನಿಯಲ್ಲಿ 9ವರ್ಷಗಳಿಂದ ಬೆಳಗಾವಿ ಜಿಲ್ಲೆಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ. ಬೀದರ್ ಜಿಲ್ಲೆಯಲ್ಲಿ ಅತ್ಯುತ್ತಮ ಜಿಲ್ಲಾ ವರದಿಗಾರ ಪ್ರಶಸ್ತಿ ಪಡೆದಿದ್ದು, ಗಡಿ ಜಿಲ್ಲೆ ಬೆಳಗಾವಿಯಲ್ಲಿ ಜಿಲ್ಲಾ ಮಟ್ಟದ ರಾಜ್ಯೋತ್ಸವ ಪ್ರಶಸ್ತಿ ಕೂಡ ದೊರೆತಿದೆ. ರೈತರ ಸಮಸ್ಯೆಗಳತ್ತ ಬೆಳಕು ಚೆಲ್ಲುವ ವರದಿ ಸೇರಿ ಗಡಿ ಸಮಸ್ಯೆ, ಕ್ರೈಮ್, ಪ್ರವಾಹ ಪರಿಸ್ಥಿತಿ, ನೆರೆಯ ಮಹಾರಾಷ್ಟ್ರ, ಗೋವಾದಲ್ಲಿನ ಬೆಳವಣಿಗೆ ಕುರಿತು ವರದಿ ಮಾಡುತ್ತಿರುವುದು ವಿಶೇಷ.

Read More