ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಮುಂಬರುವ ಚುನಾವಣೆಗೆ ಈಗ್ಲೇ ತಯಾರಿ ನಡೆಸ್ತಿದ್ಯಾ ಸರ್ಕಾರ?

Updated on: Aug 31, 2026 | 7:48 PM

ಸಿಎಂ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ಗ್ಯಾರಂಟಿ ಪ್ರಾಧಿಕಾರದ ಸಭೆ ನಡೆದಿದ್ದು, ಈ ಸಂಭೆಯಲ್ಲಿ ರಾಜ್ಯ, ಜಿಲ್ಲೆ, ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಸದಸ್ಯರ ಸಮಾವೇಶ ನಡೆಸಲು ತೀರ್ಮಾನಿಸಲಾಗಿದೆ. ಗ್ಯಾರಂಟಿ ಅನುಷ್ಠಾನ ಸಮಿತಿ 4 ಸಾವಿರಕ್ಕೂ ಅಧಿಕ ಸದಸ್ಯರನ್ನ ಹೊಂದಿದ್ದು, ಗ್ರಾಮ ಪಂಚಾಯತಿ ಮಟ್ಟದಲ್ಲಿ ಗ್ಯಾರಂಟಿ ಅನುಷ್ಠಾನ ಸಮಿತಿ ರಚನೆಗೆ ಚಿಂತನೆ ನಡೆಸಿದೆ. ಒಂದು ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ 6 ಜನ ಸದಸ್ಯರ ನೇಮಕಕ್ಕೆ ಚರ್ಚೆ ಆಗಿದೆ.ಒಟ್ಟು 6024 ಗ್ರಾಮ ಪಂಚಾಯತಿಗೆ ಒಟ್ಟು 36 ಸಾವಿರ ಸದಸ್ಯರ ನೇಮಕಕ್ಕೆ ಸರ್ಕಾರ ತಯಾರಿ ನಡೆಸಿದೆ.

ಬೆಂಗಳೂರು, (ಆಗಸ್ಟ್ 31): ಸಿಎಂ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ಗ್ಯಾರಂಟಿ ಪ್ರಾಧಿಕಾರದ (Guarantee Implementation Committee) ಸಭೆ ನಡೆದಿದ್ದು, ಈ ಸಂಭೆಯಲ್ಲಿ ರಾಜ್ಯ, ಜಿಲ್ಲೆ, ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಸದಸ್ಯರ ಸಮಾವೇಶ ನಡೆಸಲು ತೀರ್ಮಾನಿಸಲಾಗಿದೆ. ಗ್ಯಾರಂಟಿ ಅನುಷ್ಠಾನ ಸಮಿತಿ 4 ಸಾವಿರಕ್ಕೂ ಅಧಿಕ ಸದಸ್ಯರನ್ನ ಹೊಂದಿದ್ದು, ಗ್ರಾಮ ಪಂಚಾಯತಿ ಮಟ್ಟದಲ್ಲಿ ಗ್ಯಾರಂಟಿ ಅನುಷ್ಠಾನ ಸಮಿತಿ ರಚನೆಗೆ ಚಿಂತನೆ ನಡೆಸಿದೆ. ಒಂದು ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ 6 ಜನ ಸದಸ್ಯರ ನೇಮಕಕ್ಕೆ ಚರ್ಚೆ ಆಗಿದೆ.ಒಟ್ಟು 6024 ಗ್ರಾಮ ಪಂಚಾಯತಿಗೆ ಒಟ್ಟು 36 ಸಾವಿರ ಸದಸ್ಯರ ನೇಮಕಕ್ಕೆ ಸರ್ಕಾರ ತಯಾರಿ ನಡೆಸಿದೆ. ಈ ಮೂಲಕ ಮುಂಬರುವ ಚುನಾವಣೆ ಗೆ ಈಗ್ಲೇ ತಯಾರಿ ನಡೆಸುತ್ತಿದ್ಯಾ ಎನ್ನುವ ಪ್ರಶ್ನೆಗಳು ಉಧ್ಭವಿಸಿವೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ರಮೇಶ್ ಬಿ. ಜವಳಗೇರಾ

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More