AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗ್ಯಾರಂಟಿ ಯೋಜನೆಗಳಿಂದ ಮಠಕ್ಕೆ ಪೆಟ್ಟು,  ಮಠದ ಖರ್ಚಿಗೆ ಹೊರೆ: ಅನುದಾನಕ್ಕೆ ಆಗ್ರಹಿಸಿದ ದಿಂಗಾಲೇಶ್ವರ ಸ್ವಾಮೀಜಿ

ಗ್ಯಾರಂಟಿ ಯೋಜನೆಗಳಿಂದ ಮಠಕ್ಕೆ ಪೆಟ್ಟು, ಮಠದ ಖರ್ಚಿಗೆ ಹೊರೆ: ಅನುದಾನಕ್ಕೆ ಆಗ್ರಹಿಸಿದ ದಿಂಗಾಲೇಶ್ವರ ಸ್ವಾಮೀಜಿ

ಸಂಜೀವ ಕುಮಾರ್​ ಪಾಂಡ್ರೆ, ಗದಗ
| Updated By: ರಮೇಶ್ ಬಿ. ಜವಳಗೇರಾ|

Updated on: Jun 15, 2025 | 2:21 PM

Share

ಉಚಿತ ಯೋಜನೆಗಳು ಮಠದ ಖರ್ಚಿಗೆ ಹೊರೆಯಾಗಿವೆ ಎಂದು ಗದಗ ವಿರೇಶ್ವರ ಪುಣ್ಯಾಶ್ರಮದಲ್ಲಿ ದಿಂಗಾಲೇಶ್ವರ ಸ್ವಾಮೀಜಿ ಅಸಮಾಧಾನ ಹೊರಹಾಕಿದ್ದಾರೆ. ಪುಟ್ಟರಾಜ ಗವಾಯಿ, ಪಂಚಾಕ್ಷರಿ ಗವಾಯಿಗಳ ಪುಣ್ಯಸ್ಮರಣೆ ಜಾತ್ರೆ ನಿಮಿತ್ತ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಸ್ವಾಮೀಜಿ, ಗ್ಯಾರಂಟಿಯಿಂದ ಜನ ಬಂದು ಆಶ್ರಮದಲ್ಲಿ ಊಟ ಮಾಡುತ್ತಿದ್ದಾರೆ. ಮಠದಲ್ಲಿ ಊಟ ಮಾಡುವವರ ಸಂಖ್ಯೆ ನೂರು ಪಟ್ಟು ಹೆಚ್ಚಾಗಿದೆ. ಉಚಿತ ಯೋಜನೆಗಳು ಮಠದ ಖರ್ಚಿಗೆ ಹೊರೆಯಾಗಿವೆ. ಹೀಗಾಗಿ ಪುಣ್ಯಶ್ರಮಕ್ಕೆ ಸರ್ಕಾರ ಅನಾದಾನ ನೀಡಬೇಕೆಂದು ಆಗ್ರಹಿಸಿದ್ದಾರೆ.

ಗದಗ, (ಜೂನ್ 15): ಉಚಿತ ಯೋಜನೆಗಳು ಮಠದ ಖರ್ಚಿಗೆ ಹೊರೆಯಾಗಿವೆ ಎಂದು ಗದಗ ವಿರೇಶ್ವರ ಪುಣ್ಯಾಶ್ರಮದಲ್ಲಿ ದಿಂಗಾಲೇಶ್ವರ ಸ್ವಾಮೀಜಿ ಅಸಮಾಧಾನ ಹೊರಹಾಕಿದ್ದಾರೆ. ಪುಟ್ಟರಾಜ ಗವಾಯಿ, ಪಂಚಾಕ್ಷರಿ ಗವಾಯಿಗಳ ಪುಣ್ಯಸ್ಮರಣೆ ಜಾತ್ರೆ ನಿಮಿತ್ತ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಸ್ವಾಮೀಜಿ, ಗ್ಯಾರಂಟಿಯಿಂದ ಜನ ಬಂದು ಆಶ್ರಮದಲ್ಲಿ ಊಟ ಮಾಡುತ್ತಿದ್ದಾರೆ. ಮಠದಲ್ಲಿ ಊಟ ಮಾಡುವವರ ಸಂಖ್ಯೆ ನೂರು ಪಟ್ಟು ಹೆಚ್ಚಾಗಿದೆ. ಉಚಿತ ಯೋಜನೆಗಳು ಮಠದ ಖರ್ಚಿಗೆ ಹೊರೆಯಾಗಿವೆ. ಹೀಗಾಗಿ ಪುಣ್ಯಶ್ರಮಕ್ಕೆ ಸರ್ಕಾರ ಅನಾದಾನ ನೀಡಬೇಕೆಂದು ಆಗ್ರಹಿಸಿದ್ದಾರೆ.

ಬೆಂಗಳೂರು ಬಳಿಯ ಕೆಲ ಧಾರ್ಮಿಕ ಸಂಸ್ಥೆಗಳಿಗೆ ಸರ್ಕಾರ ಧವಸ ಧಾನ್ಯ ನೀಡುತ್ತಿದೆ. 500 ಕ್ವಿಂಟಲ್ ನಿಂದ 7 ಸಾವಿರ ಕ್ವಿಂಟಲ್ ವರೆಗೆ ಪ್ರತಿತಿಂಗಳು ಧವಸಧಾನ್ಯ ನೀಡಲಾಗ್ತಿದೆ. ಅದೇ ರೀತಿ ಉತ್ತರ ಕರ್ನಾಟಕದ ಆಶ್ರಮಕ್ಕೂ ಕೊಡುಗೆ ನೀಡಬೇಕು. ಪುಣ್ಯಾಶ್ರಮದಕ್ಕೆ ಸಮಗ್ರ ಬೆಳವಣಿಗೆಗೆ ಸರ್ಕಾರ ಅನ್ನ, ಹಣ ನೀಡಬೇಕು ಎಂದರು.