ಬರದ ಸಂಕಷ್ಟ ಗ್ಯಾರಂಟಿ ಯೋಜನೆಗಳ ಮೇಲೆ ಪ್ರಭಾವ ಬೀರಲ್ಲ, ಅವುಗಳಿಗೆ ಹಣ ತೆಗೆದಿರಿಸಲಾಗಿದೆ: ಸಿದ್ದರಾಮಯ್ಯ, ಸಿಎಂ

| Updated By: ಅರುಣ್​ ಕುಮಾರ್​ ಬೆಳ್ಳಿ

Updated on: Oct 07, 2023 | 3:05 PM

ಕೇಂದ್ರದಿಂದ ಬರ ಅಧ್ಯಯನಕ್ಕಾಗಿ ಮೂರು ತಂಡಗಳು ಆಗಮಿಸಿದ್ದು, ಅಧಿಕಾರಿಗಳು 11 ಜಿಲ್ಲೆಗಳ ಪ್ರವಾಸ ಮಾಡಿ, ಬೆಳೆಹಾನಿ ಪರಿಶೀಲಿಸಿದ ಬಳಿಕ ವರದಿಯನ್ನು ಕೇಂದ್ರ ಸರ್ಕಾರಕ್ಕೆ ಸಲ್ಲಿಸುತ್ತಾರೆ. ವರದಿಗಳ ಆಧಾರದ ಮೇಲೆ ಕೇಂದ್ರ ಸರ್ಕಾರ ಬರ ಪರಿಹಾರ ನೆರವಿನ ಮೊತ್ತವನ್ನು ನಿರ್ಧರಿಸುತ್ತದೆ ಎಂದು ಸಿದ್ದರಾಮಯ್ಯ ಹೇಳಿದರು.

ಮೈಸೂರು: ಮಳೆ ಅಭಾವದಿಂದ ರಾಜ್ಯಕ್ಕೆ ಭೀಕರ ಬರ (severe drought) ಎದುರಾಗಿದ್ದು ಅದನ್ನು ನಿಭಾಯಿಸುವುದು ಸರ್ಕಾರಕ್ಕೆ ದೊಡ್ಡ ಸಮಸ್ಯೆಯಾಗಿದೆ. ಬರದ ಹೊಡೆತ ಗ್ಯಾರಂಟಿ ಯೋಜನೆಗಳ ಮೇಲೆ ಪರಿಣಾಮ ಬೀರಲಿದಯೇ? ಇಲ್ಲ ಎನ್ನುತ್ತಾರೆ ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah). ನಗರದಲ್ಲಿಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಅವರು, ಗ್ಯಾರಂಟಿ ಯೋಜನೆಗಳಿಗಾಗಿ ಬಜೆಟ್ ನಲ್ಲಿ (Budget) ಹಣ ತೆಗೆದಿರಿಸಿರುವುದರಿಂದ ಅವು ಮುಂದುವರಿಯುತ್ತವೆ, ಅದೇನೂ ಸಮಸ್ಯೆ ಅಲ್ಲ ಎಂದರು. ಬರದ ಸ್ಥಿತಿಗೆ ಸಂಬಂಧಿಸಿದಂತೆ, ಕೇಂದ್ರ ಸರ್ಕಾರಕ್ಕೆ ರೂ. 4860 ಕೋಟಿ ನೆರವು ಕೋರಲಾಗಿದೆ. ಆದರೆ ವಾಸ್ತವದಲ್ಲಿ ರಾಜ್ಯದ 40 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ಹಾನಿಯಾಗಿದ್ದು ಒಟ್ಟು 30,000 ಕೋಟಿ ರೂ.ಗಳ ನಷ್ಟವಾಗಿದೆ ಎಂದು ಸಿದ್ದರಾಮಯ್ಯ ಹೇಳಿದರು. ಕೇಂದ್ರದಿಂದ ಬರ ಅಧ್ಯಯನಕ್ಕಾಗಿ ಮೂರು ತಂಡಗಳು ಆಗಮಿಸಿದ್ದು, ಅಧಿಕಾರಿಗಳು 11 ಜಿಲ್ಲೆಗಳ ಪ್ರವಾಸ ಮಾಡಿ, ಬೆಳೆಹಾನಿ ಪರಿಶೀಲಿಸಿದ ಬಳಿಕ ವರದಿಯನ್ನು ಕೇಂದ್ರ ಸರ್ಕಾರಕ್ಕೆ ಸಲ್ಲಿಸುತ್ತಾರೆ. ವರದಿಗಳ ಆಧಾರದ ಮೇಲೆ ಕೇಂದ್ರ ಸರ್ಕಾರ ಬರ ಪರಿಹಾರ ನೆರವಿನ ಮೊತ್ತವನ್ನು ನಿರ್ಧರಿಸುತ್ತದೆ ಎಂದು ಸಿದ್ದರಾಮಯ್ಯ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ