ಚಾಮರಾಜನಗರ: ದೇವರಿಗೆ ಕೈ ಮುಗಿದು, ಕುಂಕುಮ ಹಚ್ಚಿಕೊಂಡು ಹುಂಡಿ ಹಣ ಕದ್ದ ಕಳ್ಳ!

Edited By:

Updated on: Apr 10, 2026 | 11:57 AM

ಚಾಮರಾಜನಗರದ ಗುಂಡ್ಲುಪೇಟೆ ತಾಲೂಕಿನ ಬೊಮ್ಮಲಾಪುರದಲ್ಲಿ ದೇವಸ್ಥಾನದ ಹುಂಡಿ ಹಣ ಕಳ್ಳತನ ನಡೆದಿದೆ. ಕನ್ನ ಹಾಕುವ ಮುನ್ನ ದೇವರಿಗೆ ಕೈಮುಗಿದು ಕುಂಕುಮ ಹಚ್ಚಿಕೊಂಡು ಬಳಿಕ ಖದೀಮ ಕೈಚಳಕ ತೋರಿದ್ದಾನೆ. ಕಳ್ಳನ ದೃಶ್ಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಇದೇ ದೇಗುಲದಲ್ಲಿ ಈ ಹಿಂದೆಯೂ ಕಳ್ಳತನ ನಡೆದಿದ್ದ ಕಾರಣ ಸಿಸಿಟಿವಿ ಅಳವಡಿಸಲಾಗಿತ್ತು ಎನ್ನಲಾಗಿದೆ.

ಚಾಮರಾಜನಗರ, ಏಪ್ರಿಲ್​​ 09: ಕಳ್ಳ-ಕಾಕರಿಗೆ ಸಾಮಾನ್ಯವಾಗಿ ಯಾವುದರ ಮೇಲೂ ಭಯ ಇರೋದಿಲ್ಲ. ಆದರೆ ಗುಂಡ್ಲುಪೇಟೆ ತಾಲೂಕಿನ ಬೊಮ್ಮಲಾಪುರದಲ್ಲಿ ದೇವಸ್ಥಾನದ ಹುಂಡಿ ಕದಿಯಲು ಬಂದ ಖದೀಮನೋರ್ವ, ಕನ್ನ ಹಾಕುವ ಮೊದಲು ದೇವರಿಗೆ ಕೈ ಮುಗಿದು ಕುಂಕುಮವನ್ನೂ ಹಚ್ಚಿಕೊಂಡಿದ್ದಾನೆ. ಗ್ರಾಮದ ಶಕ್ತಿ ದೇವತೆ ಪಟ್ಟದರಾಣಿ ದೇವಾಲಯದಲ್ಲಿ ಕಳ್ಳತನ ನಡೆದಿದ್ದು, ಈ ಹಿಂದೆಯೂ ಹುಂಡಿ ಹಣ ಕಳುವಾಗಿದ್ದ ಕಾರಣಕ್ಕೆ ದೇಗುಲಕ್ಕೆ ಸಿಸಿಟಿವಿ ಕ್ಯಾಮರಾ ಹಾಕಲಾಗಿತ್ತು. ಈ ಹಿನ್ನೆಲೆ ಕಳ್ಳತನದ ದೃಶ್ಯ ಸೆರೆಯಾಗಿದೆ. ಗುಂಡ್ಲುಪೇಟೆ ಪೊಲೀಸ್ ಠಾಣಾ ವ್ಯಾಪ್ತಿಗೆ ಒಳಪಡುವ ಬೊಮ್ಮಲಾಪುರ ಗ್ರಾಮದಲ್ಲಿ ಘಟನೆ ನಡೆದಿದೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Loading...
Unable to load recommendations.
Follow Us
ಸೂರಜ್ ಪ್ರಸಾದ್ ಎಸ್ಎನ್

ಸೂರಜ್ ಪ್ರಸಾದ್ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯವರು. ಬೆಳೆದಿದ್ದು ದಾವಣಗರೆ ಜಿಲ್ಲೆ ನ್ಯಾಮತಿ ತಾಲೂಕಿನಲ್ಲಿ. ಶಿವಮೊಗ್ಗದ ಸಹ್ಯಾದ್ರಿ ಕಾಲೇಜ್ ನಲ್ಲಿ ಪತ್ರಿಕೋದ್ಯಮದಲ್ಲಿ ಪದವಿಪೂರ್ವ ಶಿಕ್ಷಣ ಪಡೆದಿದ್ದಾರೆ. 2014ರಿಂದ ನನ್ನ ಎಲೆಕ್ಟ್ರಾನಿಕ್ ಮಾದ್ಯಮದ ವೃತ್ತಿ ಜೀವನವನ್ನ ಬೆಂಗಳೂರಿನಲ್ಲಿ ಕ್ರೈಂ ಬೀಟ್ ವರದಿಗಾರನಾಗಿ ಆರಂಭಿಸಿದ್ದರು. ಬೆಂಗಳೂರಿನಲ್ಲಿ 8 ವರ್ಷಗಳ ಕ್ರೈಂ ವರದಿಗಾರನಾಗಿ ಸೇವೆ ಸಲ್ಲಿಸಿ. ನಾಲ್ಕು ಸಂಸ್ಥೆಯಲ್ಲಿ ಕ್ರೈಂ ರಿಪೋರ್ಟರ್ ಹಾಗೂ ಕ್ರೈಂ ಇನ್ವೆಸ್ಟಿಗೇಟಿವ್ ವರದಿಗಾರನಾಗಿ ಹಾಗೂ ಸ್ಟಿಂಗ್ ಅಪರೇಷನ್ ಗಳನ್ನ ಮಾಡಿದ್ದಾರೆ. ಟಿವಿ9 ಕನ್ನಡ ಸಂಸ್ಥೆಗೆ ಮಂಡ್ಯ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡಿ ಬಳಿಕ ಚಾಮರಾಜನಗರಕ್ಕೆ ವರ್ಗಾವಣೆಯಾಗಿ ಈಗ ಪ್ರಸ್ಥುತ ಚಾಮರಾಜನಗರ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡುತ್ತಿದ್ದಾರೆ. ಅಡಿಗೆ ಮಾಡುವುದು, ಕ್ರಿಕೆಟ್ ಆಡುವುದು ಕ್ರೈಂ ಇನ್ವೆಷ್ಟಿಗೇಷನ್ ನಾವೆಲ್ ಗಳನ್ನ ಓದುವುದು ಇವರ ಹವ್ಯಾಸ.

Read More