AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾವೇರಿ: ಶಾಲೆ ಆವರಣದಲ್ಲೇ ಪುಂಡರಂತೆ ಹೊಡೆದಾಡಿಕೊಂಡ ಅತಿಥಿ ಶಿಕ್ಷಕ, ಎಸ್‌ಡಿಎಂಸಿ ಅಧ್ಯಕ್ಷ, ವಿಡಿಯೋ ವೈರಲ್

ಹಾವೇರಿ: ಶಾಲೆ ಆವರಣದಲ್ಲೇ ಪುಂಡರಂತೆ ಹೊಡೆದಾಡಿಕೊಂಡ ಅತಿಥಿ ಶಿಕ್ಷಕ, ಎಸ್‌ಡಿಎಂಸಿ ಅಧ್ಯಕ್ಷ, ವಿಡಿಯೋ ವೈರಲ್

Ganapathi Sharma
|

Updated on: Jan 14, 2026 | 1:17 PM

Share

ಮಕ್ಕಳಿಗೆ ಉತ್ತಮ ಶಿಕ್ಷಣ ಮತ್ತು ಸೌಕರ್ಯ ಒದಗಿಸುವ ಜವಾಬ್ದಾರಿ ಹೊಂದಿರುವ ಅತಿಥಿ ಶಿಕ್ಷಕ ಹಾಗೂ ಎಸ್‌ಡಿಎಂಸಿ ಅಧ್ಯಕ್ಷ ಪರಸ್ಪರ ಹೊಡೆದಾಡಿಕೊಂಡಿರುವ ವಿಡಿಯೋ ವೈರಲ್ ಆಗಿದೆ. ಘಟನೆಯು, ಹಾವೇರಿ ಜಿಲ್ಲೆಯ ಹಾನಗಲ್ ಪಟ್ಟಣದಲ್ಲಿರುವ ಶಾಸಕರ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ನಡೆದಿದೆ. ವೈರಲ್ ವಿಡಿಯೋ ಇಲ್ಲಿದೆ.

ಹಾವೇರಿ, ಜನವರಿ 14: ಹಾವೇರಿ ಜಿಲ್ಲೆಯ ಹಾನಗಲ್ ಪಟ್ಟಣದಲ್ಲಿರುವ ಶಾಸಕರ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಅತಿಥಿ ಶಿಕ್ಷಕ ಮತ್ತು ಶಾಲಾ ಅಭಿವೃದ್ಧಿ ಹಾಗೂ ಮೇಲ್ವಿಚಾರಣಾ ಸಮಿತಿ (ಎಸ್‌ಡಿಎಂಸಿ) ಅಧ್ಯಕ್ಷರ ನಡುವೆ ನಡೆದ ಹೊಡೆದಾಟವು ತೀವ್ರ ಚರ್ಚೆಗೆ ಕಾರಣವಾಗಿದೆ. ಕೈಕೈ ಮಿಲಾಯಿಸಿ, ಶರ್ಟ್ ಹಿಡಿದು ಪರಸ್ಪರ ಪುಂಡರಂತೆ ಹೊಡೆದಾಡಿಕೊಂಡ ಘಟನೆ ಶಾಲಾ ಆವರಣದಲ್ಲೇ ನಡೆದಿದ್ದು, ಅದರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಮಾಹಿತಿಯ ಪ್ರಕಾರ, ಅತಿಥಿ ಶಿಕ್ಷಕ ಗಂಟೇರ್ ಹಾಗೂ ಎಸ್‌ಡಿಎಂಸಿ ಅಧ್ಯಕ್ಷ ಸತೀಶ್ ಬೋಸ್ಲೆ ಅವರ ನಡುವೆ ವೈಯಕ್ತಿಕ ಭಿನ್ನಾಭಿಪ್ರಾಯ ಮತ್ತು ಕ್ಷುಲ್ಲಕ ಕಾರಣಕ್ಕೆ ಮಾತಿನ ಚಕಮಕಿ ನಡೆದಿದೆ. ಈ ವೇಳೆ ಸತೀಶ್ ಬೋಸ್ಲೆ ಅವರು ಶಿಕ್ಷಕನಿಗೆ ಅವಾಚ್ಯ ಪದಗಳಿಂದ ನಿಂದನೆ ಮಾಡಿದ ಆರೋಪವೂ ಕೇಳಿಬಂದಿದೆ. ಮಾತಿಗೆ ಮಾತು ಬೆಳೆದು ಕೊನೆಗೆ ಇಬ್ಬರೂ ಪರಸ್ಪರ ಕೈಕೈ ಮಿಲಾಯಿಸಿ ಹೊಡೆದಾಡಿಕೊಂಡಿದ್ದಾರೆ.

ಶಿಕ್ಷಣ ಸಂಸ್ಥೆಯಲ್ಲಿ ಮಾದರಿಯಾಗಬೇಕಾದ ಶಿಕ್ಷಕರು ಹಾಗೂ ಎಸ್‌ಡಿಎಂಸಿ ಸದಸ್ಯರ ನಡುವೆಯೇ ಈ ರೀತಿಯ ಮಾರಾಮಾರಿ ನಡೆದಿರುವುದು ಪೋಷಕರು ಮತ್ತು ಸಾರ್ವಜನಿಕರಲ್ಲಿ ಅಸಮಾಧಾನ ಮೂಡಿಸಿದೆ. ಇತ್ತ, ಶಾಲೆಯಲ್ಲಿ ಮೂಲಭೂತ ಸೌಕರ್ಯಗಳ ಕೊರತೆಯಿಂದ ವಿದ್ಯಾರ್ಥಿಗಳು ಪರದಾಡುತ್ತಿರುವ ಸ್ಥಿತಿಯೂ ಬಹಿರಂಗವಾಗಿದೆ. ಶೌಚಾಲಯಗಳ ಹದಗೆಟ್ಟ ಸ್ಥಿತಿ, ಕುಡಿಯುವ ನೀರಿನ ಸಮಸ್ಯೆ ಸೇರಿದಂತೆ ಹಲವು ಅಡಚಣೆಗಳು ಶಾಲೆಯನ್ನು ಕಾಡುತ್ತಿವೆ.

ವಿಡಿಯೋ ಮತ್ತು ವರದಿ: ಅಣ್ಣಪ್ಪ ಬಾರ್ಕಿ, ಹಾವೇರಿ

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ