ಗುಜರಾತ್​: ಡಿವೈಡರ್​ಗೆ ಡಿಕ್ಕಿ ಹೊಡೆದ ಕಾರು, ಐವರು ವಿದ್ಯಾರ್ಥಿಗಳು ಸೇರಿ 7 ಮಂದಿ ಸಾವು

|

Updated on: Dec 09, 2024 | 11:29 AM

ಕಾರೊಂದು ಡಿವೈಡರ್​ಗೆ ಡಿಕ್ಕಿ ಹೊಡೆದ ಪರಿಣಾಮ ಐವರು ವಿದ್ಯಾರ್ಥಿಗಳು ಸೇರಿ 7 ಮಂದಿ ಸಾವನ್ನಪ್ಪಿರುವ ಘಟನೆ ಗುಜರಾತ್​ನ ಜುನಾಗಢದಲ್ಲಿ ನಡೆದಿದೆ. ಕಾರು ಡಿವೈಡರ್​ಗೆ ಡಿಕ್ಕಿ ಹೊಡೆದು ಮತ್ತೊಂದು ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಐವರು ಕಾಲೇಜು ವಿದ್ಯಾರ್ಥಿಗಳು ಮೃತಪಟ್ಟಿದ್ದಾರೆ.

ವೇಗವಾಗಿ ಬಂದ ವಿದ್ಯಾರ್ಥಿಗಳ ಕಾರು ಡಿವೈಡರ್‌ಗೆ ಡಿಕ್ಕಿ ಹೊಡೆದು ರಸ್ತೆಯ ಇನ್ನೊಂದು ಬದಿಗೆ ಪಲ್ಟಿಯಾಗಿದೆ ಮತ್ತು ವೇಗವಾಗಿ ಬಂದ ಎರಡನೇ ಕಾರಿಗೆ ಡಿಕ್ಕಿ ಹೊಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಏಳು ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಐವರು ವಿದ್ಯಾರ್ಥಿಗಳು ಒಂದು ಕಾರಿನಲ್ಲಿ ಪರೀಕ್ಷೆಗಾಗಿ ಕಾಲೇಜಿಗೆ ತೆರಳುತ್ತಿದ್ದರೆ, ಇನ್ನಿಬ್ಬರು ಮೃತರು ಮತ್ತೊಂದು ಕಾರಿನಲ್ಲಿದ್ದರು. ಅಪಘಾತದ ಪರಿಣಾಮ ಎರಡೂ ಕಾರುಗಳು ಗುರುತು ಹಿಡಿಯಲಾಗದಷ್ಟು ಜಖಂಗೊಂಡಿವೆ.

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ