ಗುಜರಾತ ವಿಧಾನ ಸಭಾ ಚುನಾವಣೆ ಫಲಿತಾಂಶ ಕರ್ನಾಟಕ ವಿಧಾನ ಸಭೆಗೆ ನಡೆಯಲಿರುವ ಚುನಾವಣೆಯ ದಿಕ್ಸೂಚಿ ಅಲ್ಲ: ಸಿದ್ದರಾಮಯ್ಯ
ರಡು ರಾಜ್ಯಗಳ ಚುನಾವಣಾ ಫಲಿತಾಂಶಗಳು ಕರ್ನಾಟಕದಲ್ಲಿ ಮುಂದಿನ ವರ್ಷ ನಡೆಯಲಿರುವ ವಿಧಾನ ಸಭಾ ಚುನಾವಣೆಗೆ ದಿಕ್ಸೂಚಿಯಾಗಲಾರವು ಎಂದು ಸಿದ್ದರಾಮಯ್ಯ ಹೇಳಿದರು.
ಬೆಂಗಳೂರು: ಗುಜರಾತ್ ಮತ್ತು ಹಿಮಾಚಲ ಪ್ರದೇಶ ರಾಜ್ಯಗಳ ವಿಧಾನ ಸಭೆಗಳಿಗೆ ನಡೆದ ಚುನಾವಣೆಗಳನ್ನು ಕುರಿತ ಎಕ್ಸಿಟ್ ಪೋಲ್ ಗಳು (Siddaramaiah) ಎರಡೂ ರಾಜ್ಯಗಳಲ್ಲಿ ಬಿಜೆಪಿ (BJP) ಮೇಲುಗೈ ಸಾಧಿಸಲಿದೆ ಎಂದು ಹೇಳುತ್ತಿವೆ. ವಿಷಯಕ್ಕೆ ಸಂಬಂಧಿಸಿದಂತೆ ಬೆಂಗಳೂರಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತಾಡಿದ ಕಾಂಗ್ರೆಸ್ ನಾಯಕ ಸಿದ್ದರಾಮಯ್ಯವನರು (Siddaramaiah) ಗುಜರಾತನಲ್ಲಿ ಕಾಂಗ್ರೆಸ್ ಸೋಲು ಅನುಭವಿಸುವುದನ್ನು ಅರೆಮನಸ್ಸಿನಿಂದ ಒಪ್ಪಿಕೊಳ್ಳುತ್ತಾರೆ ಆದರೆ, ಹಿಮಾಚಲ ಪ್ರದೇಶದಲ್ಲಿ ತೀವ್ರ ಪೈಪೋಟಿ ಇದೆ ಎನ್ನುತ್ತಾರೆ. ಹಾಗೆಯೇ ಮುಂದುವರಿದು ಮಾತಾಡುವ ಅವರು ಎರಡು ರಾಜ್ಯಗಳ ಚುನಾವಣಾ ಫಲಿತಾಂಶಗಳು ಕರ್ನಾಟಕದಲ್ಲಿ ಮುಂದಿನ ವರ್ಷ ನಡೆಯಲಿರುವ ವಿಧಾನ ಸಭಾ ಚುನಾವಣೆಗೆ ದಿಕ್ಸೂಚಿಯಾಗಲಾರವು ಎಂದರು.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ