Video: ಕಾರಿಗೆ ಸಿಲುಕಿ ಮಹಿಳೆ ಮೃತಪಟ್ಟರೂ ಪಶ್ಚಾತಾಪವಿಲ್ಲದೆ ದರ್ಪ ತೋರಿದ ಯುವಕ

Updated on: Mar 14, 2025 | 12:31 PM

ಗುಜರಾತ್​ನ ವಡೋದರಾದಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಕುಡಿದ ಅಮಲಿನಲ್ಲಿದ್ದ ಯುವಕ ಕಾರು ಗುದ್ದಿಸಿ ಮಹಿಳೆ ಜೀವ ತೆಗೆದಿದ್ದರೂ ಕೂಡ ಪಶ್ಚಾತಾಪವಿಲ್ಲದೆ ದರ್ಪದಿಂದ ವರ್ತಿಸಿರುವ ವಿಡಿಯೋ ವೈರಲ್ ಆಗಿದೆ. ಘಟನೆಯಲ್ಲಿ ಓರ್ವ ಮಹಿಳೆ ಸಾವನ್ನಪ್ಪಿದ್ದು, ಮತ್ತೊಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಆತ ಇನ್ನೊಬ್ಬರ ಜೀವ ತೆಗೆಯುತ್ತೀನಿ ಎನ್ನುವಂತೆ ಅನದರ್​ ರೌಂಡ್ ಎಂದು ಕೂಗುತ್ತಿರುವುದು ವಿಡಿಯೋದಲ್ಲಿ ಕಾಣಬಹುದು.

ವಡೋದರಾ, ಮಾರ್ಚ್​ 14: ಗುಜರಾತ್​ನ ವಡೋದರಾದಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಕುಡಿದ ಅಮಲಿನಲ್ಲಿದ್ದ ಯುವಕ ಕಾರು ಗುದ್ದಿಸಿ ಮಹಿಳೆ ಜೀವ ತೆಗೆದಿದ್ದರೂ ಕೂಡ ಪಶ್ಚಾತಾಪವಿಲ್ಲದೆ ದರ್ಪದಿಂದ ವರ್ತಿಸಿರುವ ವಿಡಿಯೋ ವೈರಲ್ ಆಗಿದೆ. ಘಟನೆಯಲ್ಲಿ ಓರ್ವ ಮಹಿಳೆ ಸಾವನ್ನಪ್ಪಿದ್ದು, ಮತ್ತೊಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಆತ ಇನ್ನೊಬ್ಬರ ಜೀವ ತೆಗೆಯುತ್ತೀನಿ ಎನ್ನುವಂತೆ ಅನದರ್​ ರೌಂಡ್ ಎಂದು ಕೂಗುತ್ತಿರುವುದು ವಿಡಿಯೋದಲ್ಲಿ ಕಾಣಬಹುದು. ಚಾಲಕನನ್ನು ರಕ್ಷಿತ್ ಚೌರಾಸಿಯಾ ಎಂದು ಗುರುತಿಸಲಾಗಿದೆ. ಉತ್ತರ ಪ್ರದೇಶದ ವಾರಣಾಸಿ ನಿವಾಸಿಯಾಗಿದ್ದು, ವಡೋದರಾದ ವಿಶ್ವವಿದ್ಯಾಲಯದಲ್ಲಿ ಕಾನೂನು ಅಧ್ಯಯನ ಮಾಡುತ್ತಿದ್ದಾರೆ.

 

 

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ನಯನಾ ರಾಜೀವ್

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More