AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gujarat Floods: ಗುಜರಾತ್​ನಲ್ಲಿ ಭಾರೀ ಮಳೆ; ಪ್ರವಾಹದ ಡ್ರೋನ್ ವಿಡಿಯೋ ಇಲ್ಲಿದೆ

Gujarat Floods: ಗುಜರಾತ್​ನಲ್ಲಿ ಭಾರೀ ಮಳೆ; ಪ್ರವಾಹದ ಡ್ರೋನ್ ವಿಡಿಯೋ ಇಲ್ಲಿದೆ

ಸುಷ್ಮಾ ಚಕ್ರೆ
|

Updated on: Aug 28, 2024 | 6:11 PM

ಗುಜರಾತ್​ನಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದ ಇನ್ನೂ 9 ಜನರು ಸಾವನ್ನಪ್ಪಿದ್ದಾರೆ. ಗುಜರಾತ್‌ನಲ್ಲಿ ನಿರಂತರವಾಗಿ ಭಾರೀ ಮಳೆಯಾಗುತ್ತಿದ್ದು, ಮಂಗಳವಾರ ಮಳೆ ಸಂಬಂಧಿತ ಘಟನೆಗಳಲ್ಲಿ ಇನ್ನೂ 9 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ.

ಅಹಮದಾಬಾದ್: ಗುಜರಾತ್​ನಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಜಮ್ನಾಗರ ಸೇರಿದಂತೆ ಹಲವೆಡೆ ಪ್ರವಾಹದ ವಾತಾವರಣ ಸೃಷ್ಟಿಯಾಗಿದೆ. ಇನ್ನೂ 9 ಜನ ಸಾವನ್ನಪ್ಪುವ ಮೂಲಕ ಕೇವಲ 2 ದಿನಗಳಲ್ಲಿ ಸಾವಿನ ಸಂಖ್ಯೆ 16ಕ್ಕೆ ಏರಿದೆ. ಕಳೆದ ನಾಲ್ಕು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಹಲವಾರು ಜಿಲ್ಲೆಗಳು ಜಲಾವೃತಗೊಂಡಿದ್ದು, 8,500ಕ್ಕೂ ಹೆಚ್ಚು ನಿವಾಸಿಗಳು ನಿರಾಶ್ರಿತರಾಗಿದ್ದಾರೆ.

ಕಳೆದ ಎರಡು ದಿನಗಳಲ್ಲಿ 15,000ಕ್ಕೂ ಹೆಚ್ಚು ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿದೆ. ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಸಿಲುಕಿರುವ ಜನರನ್ನು ರಕ್ಷಿಸಲು ಅಧಿಕಾರಿಗಳು ಅವಿರತವಾಗಿ ಶ್ರಮಿಸುತ್ತಿದ್ದಾರೆ. ಮಂಗಳವಾರವೇ ಸುಮಾರು 169 ಜನರನ್ನು ಸ್ಥಳಾಂತರಿಸಲಾಗಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ