Ahmedabad Plane Crash: ಗುಜರಾತ್ನ ಅಹಮದಾಬಾದ್ನಲ್ಲಿ ಏರ್ ಇಂಡಿಯಾ ವಿಮಾನ ಪತನ
ಅಹಮದಾಬಾದ್ನಲ್ಲಿ ಏರ್ ಇಂಡಿಯಾದ ಬೋಯಿಂಗ್ 787-8 ವಿಮಾನ ಟೇಕಾಫ್ ಆದ ಕೂಡಲೇ ಪತನಗೊಂಡಿದೆ. ವಿಮಾನದಲ್ಲಿ 242 ಪ್ರಯಾಣಿಕರಿದ್ದರು. ಗಾಯಾಳುಗಳನ್ನು ಸಿವಿಲ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಗ್ನಿಶಾಮಕ ದಳ ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸುತ್ತಿದೆ. ಪ್ರಧಾನಮಂತ್ರಿ ಕಚೇರಿ ಘಟನೆ ಕುರಿತು ಮಾಹಿತಿ ಪಡೆಯುತ್ತಿದೆ. ಮೇಘಾನಿ ನಗರದ ಸುತ್ತಮುತ್ತ ಸಂಚಾರ ಬಂದ್ ಮಾಡಲಾಗಿದೆ.
ಗುಜರಾತ್ನ ಅಹಮದಾಬಾದ್ನಲ್ಲಿ ಬೋಯಿಂಗ್ 787-8 ವಿಮಾನ ಪತನವಾಗಿದೆ. ವಿಮಾನದಲ್ಲಿ ಒಟ್ಟು 242 ಪ್ರಯಾಣಿಕರು ಇದ್ದರು ಎಂದು ಅಹಮದಾಬಾದ್ ಪೊಲೀಸರು ಮಾಹಿತಿ ನೀಡಿದ್ದಾರೆ. ಟೇಕಾಫ್ ಆದ ಕೆಲವೇ ಹೊತ್ತಿನಲ್ಲಿ ವಿಮಾನ ಪತನವಾಗಿದೆ. ಏರ್ ಇಂಡಿಯಾ ವಿಮಾನ ವಿಮಾನ ಅಹಮದಾಬಾದ್ನಿಂದ ಲಂಡನ್ಗೆ ತೆರಳುತ್ತಿತ್ತು. ಗಾಯಾಳುಗಳನ್ನು ಅಹಮದಾಬಾದ್ನ ಸಿವಿಲ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೇಘಾನಿ ನಗರದ ಸುತ್ತಮುತ್ತ ರಸ್ತೆಗಳಲ್ಲಿ ಸಂಚಾರ ಬಂದ್ ಮಾಡಲಾಗಿದೆ. ಏಳು ಅಗ್ನಿಶಾಮಕ ವಾಹನಗಳಿಂದ ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಯುತ್ತಿದೆ. ಘಟನೆ ಕುರಿತು ಮಾಹಿತಿ ಕೇಳಿದ ಪ್ರಧಾನಮಂತ್ರಿ ಕಚೇರಿ ಮಾಹಿತಿ ಪಡೆದಿದೆ.
Published on: Jun 12, 2025 02:50 PM